Home
ಸುದ್ದಿಜಾಲ

ಸದ್ಯದಲ್ಲೇ ಭಾರತಕ್ಕೆ ರೀ ಎಂಟ್ರಿ ನೀಡಲಿದೆ ಹಾನರ್‌ ಸ್ಮಾರ್ಟ್‌ಫೋನ್‌!

ಒಂದು ಕಾಲದಲ್ಲಿ ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಹಾನರ್‌ ಕಂಪೆನಿ ಭಾರಿ ಕ್ರೇಜ್‌ ಹುಟ್ಟುಹಾಕಿತ್ತು. ಸಿಕ್ಕಾಪಟ್ಟೆ ಹೈಪ್‌ನೊಂದಿಗೆ ಭಾರತದಲ್ಲಿ ಸಂಚಲನ ಸೃಷ್ಟಿಸಿದ್ದ ಹಾನರ್‌ ನಂತರದ ದಿನಗಳಲ್ಲಿ ಭಾರತದಲ್ಲಿ ಹಿನ್ನಡೆ ಅನುಭವಿಸುವ ಮೂಲಕ ಹಿಂದೆ ಸರಿದಿತ್ತು. ಇದೀಗ ಹಾನರ್‌ ಕಂಪೆನಿ ಮತ್ತೊಮ್ಮೆ ಭಾರತದ ಮಾರುಕಟ್ಟೆಗೆ ನ ರೀ ಎಂಟ್ರಿ ನೀಡುವ ಸೂಚನೆ ನೀಡಿದೆ.

ಹೌದು, ಹಾನರ್‌ ಕಂಪೆನಿ ಭಾರತದ ಮಾರುಕಟ್ಟೆಗೆ ರೀ ಎಂಟ್ರಿ ನೀಡುವುದಾಗಿ ಘೋಷಿಸಿದೆ. ಭಾರತದಲ್ಲಿ ತನ್ನ ಸ್ಮಾರ್ಟ್‌ಫೋನ್ ವಿತರಣೆಗಾಗಿ ನೋಯ್ಡಾದ ಪಿಎಸ್‌ಎವಿ ಗ್ಲೋಬಲ್‌ನೊಂದಿಗೆ ಮೂರು ವರ್ಷಗಳ ಪಾಲುದಾರಿಕೆಯನ್ನು ಮಾಡಿಕೊಂಡು ರೀ ಎಂಟ್ರಿ ನೀಡಿದೆ. ಅಲ್ಲದೆ ಹಾನರ್ ಈ ವರ್ಷದ ಆರಂಭದಲ್ಲಿ ಚೀನಾದಲ್ಲಿ ಪರಿಚಯಿಸಲಾದ ಮಾಡೆಲ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಹಾಗಾದ್ರೆ ಹಾನರ್‌ ಕಂಪೆನಿ ಯಾವ ಸ್ಮಾರ್ಟ್‌ಫೋನ್‌ ಪರಿಚಯಿಸಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ಯದಲ್ಲೇ ಭಾರತಕ್ಕೆ ರೀ ಎಂಟ್ರಿ ನೀಡಲಿದೆ ಹಾನರ್‌ ಸ್ಮಾರ್ಟ್‌ಫೋನ್‌!

ಹಾನರ್‌ ಕಂಪೆನಿ ಭಾರತದಲ್ಲಿ ಹೊಸದಾಗಿ ಹಾನರ್‌ 90 ಫೋನ್‌ ಪರಿಚಯಿಸಲು ತಯಾರಿ ನಡೆಸಿದೆ. ಈ ಕುರಿತು ಟ್ವಿಟರ್‌ (ಪ್ರಸ್ತುತ X) ನಲ್ಲಿ ಪೋಸ್ಟ್‌ ಮಾಡಿದೆ. ಇತ್ತೀಚಿಗೆ ರಿಯಲ್‌ಮಿ ಕಂಪೆನಿಯಿಂದ ಹೊರ ನಡೆದಿರುವ ರಿಯಲ್‌ಮಿ ಮಾಜಿ ಉಪಾಧ್ಯಕ್ಷ ಶೇತ್ ಭಾರತದಲ್ಲಿ ಹೊಸ ಹಾನರ್‌ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಸುಳಿವು ನೀಡಿದ್ದಾರೆ. ಆದರೆ ಹಾನರ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವ ಮಾದರಿಯು ಮೊದಲು ಭಾರತಕ್ಕೆ ಎಂಟ್ರಿ ನೀಡಲಿದೆ ಅನ್ನೊದನ್ನ ತಿಳಿಸಿಲ್ಲ.

ಆದರೆ ಹಾನರ್‌ 90 ಫೋನ್‌ ಭಾರತಕ್ಕೆ ಎಂಟ್ರಿ ನೀಡಬಹುದು ಎಂದು ಊಹಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಸೆಪ್ಟೆಂಬರ್ ಆರಂಭದಲ್ಲಿ ಬಿಡುಗಡೆ ಆಗುವ ಸಾಧ್ಯತೆಯಿದೆ. ಹಾನರ್‌ 90 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1200 x 2664 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 1,600 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ.

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್‌ 7 Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ ಮ್ಯಾಜಿಕ್ಓಎಸ್ 7. 1 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ನೊಂದಿಗೆ ಬರಲಿದೆ.

ಈ ಸ್ಮಾರ್ಟ್‌ಫೋನ್‌ 66W ವೇಗದ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆಯೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, WiFi 6, ಬ್ಲೂಟೂತ್ 5. 2, NFC, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಹಾನರ್‌ ಕಂಪೆನಿಯ ಬಗ್ಗೆ ಹೇಳುವುದಾದರೆ ಕೆಲವು ವರ್ಷಗಳ ಕಾಲ ತಮ್ಮ ಸ್ಮಾರ್ಟ್‌ಫೋನ್‌ಗಳ ಮಾರಾಟವನ್ನು ಭಾರತದಲ್ಲಿ ನಿಲ್ಲಿಸಿದ್ದರೂ ಕೂಡ ಅವರ ಸಿಬ್ಬಂದಿಗಳು ಇನ್ನೂ ದೇಶದೊಳಗೆ ಕಾರ್ಯನಿರ್ವಹಿಸುತ್ತಿದ್ದಾರೆ ಅನ್ನೊದು ಗಮನಿಸಬೇಕಾದ ವಿಚಾರವಾಗಿದೆ.

ಇನ್ನು ಹಾನರ್‌ ಕಂಪೆನಿ ಇತ್ತೀಚಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹಾನರ್‌ ಪ್ಲೇ 40C ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ 6.56-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ನೀಡಲಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 13-ಆಧಾರಿತ ಮ್ಯಾಜಿಕ್ಓಎಸ್ 7.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ರಿಯರ್‌ ಕ್ಯಾಮೆರಾ ಹೊಂದಿದೆ.

Best Mobiles in India

English summary
Honor is making a comeback in the Indian market; new smartphones launch soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+