ಜಾಗತಿಕ ಮಾರುಕಟ್ಟೆಯಲ್ಲಿ ಹಾನರ್ ಮ್ಯಾಜಿಕ್ 5 ಸರಣಿ ಅನಾವರಣ! ಆಕರ್ಷಕ ಫೀಚರ್ಸ್!
ಹಾನರ್ ಕಂಪೆನಿ ಜಾಗತಿಕ ಸ್ಮಾರ್ಟ್‌ಫೋನ್ ವಲಯದ ಜನಪ್ರಿಯ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮೊಬೈಲ್ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಇದೀಗ ಬಹುನಿರೀಕ್ಷಿತ ಹಾನರ್ ಮ್ಯಾಜಿಕ್ 5 ಸರಣಿಯನ್ನು ಅನಾವರಣಗೊಳಿಸಿದೆ.
ಹೌದು, ಹಾನರ್ ಕಂಪೆನಿ ಹೊಸ ಹಾನರ್ ಮ್ಯಾಜಿಕ್ 5 ಸರಣಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಹಾನರ್ ಮ್ಯಾಜಿಕ್ 5 ಮತ್ತು ಹಾನರ್ ಮ್ಯಾಜಿಕ್ 5 ಪ್ರೊ ಸ್ಮಾರ್ಟ್‌ಫೋನ್ ಸೇರಿದೆ. ಇದರ ಜೊತೆಗೆ ಹಾನರ್ ಮ್ಯಾಜಿಕ್ Vs ಅನ್ನು ಕೂಡ ಸಹ ಅನಾವರಣಗೊಳಿಸಿದೆ. ಹಾಗಾದ್ರೆ ಈ ಸರಣಿಯ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ ಮ್ಯಾಜಿಕ್ 5 ಪ್ರೊ ವಿಶೇಷತೆ ಏನು?
ಹಾನರ್ ಮ್ಯಾಜಿಕ್ 5 ಪ್ರೊ ಸ್ಮಾರ್ಟ್‌ಫೋನ್ 6.81 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ MagicOS 7.1 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಮತ್ತು ಮೂರನೇ ಕ್ಯಾಮೆರಾ ಕೂಡ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 5,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಸೂಪರ್‌ಚಾರ್ಜ್ ಚಾರ್ಜರ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್‌ಗಾಗಿ 50W ಬೆಂಬಲಿಸಲಿದೆ.

ಹಾನರ್ ಮ್ಯಾಜಿಕ್ 5 ಫೀಚರ್ಸ್ ಹೇಗಿದೆ?
ಹಾನರ್ ಮ್ಯಾಜಿಕ್ 5 ಸ್ಮಾರ್ಟ್‌ಫೋನ್ 6.73 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ MagicOS 7.1 ನಲ್ಲಿ ಕಾರ್ಯನಿರ್ವಹಿಸಲಿದೆ. ಅಲ್ಲದೆ ಪ್ರೊ ಮಾದರಿಯಲ್ಲಿಯೇ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 54 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಜೊತೆಗೆ 5,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಹಾನರ್ ಮ್ಯಾಜಿಕ್ Vs ವಿಶೇಷತೆ ಏನು?
ಹಾನರ್ ಮ್ಯಾಜಿಕ್ Vs ಸ್ಮಾರ್ಟ್‌ಫೋನ್ 6.45 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ MagicOS 7.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 54 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಸೂಪರ್‌ಚಾರ್ಜ್ ಚಾರ್ಜರ್ ಅನ್ನು ಬೆಂಬಲಿಸಲಿದೆ.

ಹಾನರ್ ಮ್ಯಾಜಿಕ್ 5 ಸರಣಿಯ ಬೆಲೆ ಮತ್ತು ಲಭ್ಯತೆ
ಹಾನರ್ ಮ್ಯಾಜಿಕ್ 5 ಸ್ಮಾರ್ಟ್‌ಫೋನ್ ಬೆಲೆ EUR 899 (ಅಂದಾಜು 78,800ರೂ.) ಹೊಂದಿದೆ. ಇನ್ನು ಹಾನರ್ ಮ್ಯಾಜಿಕ್ 5 ಪ್ರೊ ಸ್ಮಾರ್ಟ್‌ಫೋನ್ ಬೆಲೆ EUR 1199 (ಅಂದಾಜು 1,05,100ರೂ)ಒಳಗೊಂಡಿದೆ. ಇದಲ್ಲದೆ ಹಾನರ್ ಮ್ಯಾಜಿಕ್ Vs ಸ್ಮಾರ್ಟ್‌ಫೋನ್ ಬೆಲೆ ಯುರೋ 1599 (ಅಂದಾಜು 1,40,300ರೂ)ಆಗಿದೆ. ಈ ಸ್ಮಾರ್ಟ್‌ಫೋನ್‌ಗಳು ಕಪ್ಪು, ಗ್ಲೇಸಿಯರ್ ಬ್ಲೂ, ಮೆಡೋ ಗ್ರೀನ್, ಆರೆಂಜ್ ಮತ್ತು ಕೋರಲ್ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಬರಲಿದೆ.


Click it and Unblock the Notifications








