Home
ಸುದ್ದಿಜಾಲ

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಬಿಡುಗಡೆ ! 66W ಸೂಪರ್ ಫಾಸ್ಟ್ ಚಾರ್ಜಿಂಗ್ ವಿಶೇಷ!

ಹಾನರ್ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಜಾಗತಿಕವಾಗಿ ಭಾರಿ ಬೇಡಿಕೆಯಿದೆ. ಇದಕ್ಕೆ ಅನುಗುಣವಾಗಿ ಹಾನರ್‌ ಕಂಪೆನಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಹಾನರ್‌ ಮ್ಯಾಜಿಕ್‌ 5 ಅಲ್ಟಿಮೇಟ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಹಾನರ್‌ ಮ್ಯಾಜಿಕ್‌ 5 ಅಲ್ಟಿಮೇಟ್ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನಿಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಜೊತೆಗೆ 5,450mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಬಿಡುಗಡೆ !66W ಸೂಪರ್ ಫಾಸ್ಟ್ ಚಾರ್ಜಿಂಗ್

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಫೀಚರ್ಸ್‌ ಹೇಗಿದೆ?

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಸ್ಮಾರ್ಟ್‌ಫೋನ್‌ 6.81 ಇಂಚಿನ ಫುಲ್‌ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,312 x 2,848 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಡಿಸ್‌ಪ್ಲೇ ಕೆಪ್ಯಾಸಿಟಿವ್ ಮಲ್ಟಿ-ಟಚ್ ಬೆಂಬಲ ಮತ್ತು 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಪ್ರೊಸೆಸರ್‌ ಯಾವುದು?

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 ಜನ್ 2 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಮ್ಯಾಜಿಕ್‌OS 7.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಬಿಡುಗಡೆ !66W ಸೂಪರ್ ಫಾಸ್ಟ್ ಚಾರ್ಜಿಂಗ್

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಸ್ಮಾರ್ಟ್‌ಫೋನ್ 5,450mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 66W ಸೂಪರ್ ಫಾಸ್ಟ್ ವೈರ್ಡ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್-ಸಿ ಪೋರ್ಟ್, ಜಿಪಿಎಸ್, ಒಟಿಜಿ ಮತ್ತು ಎನ್‌ಎಫ್‌ಸಿ ಬೆಬಲಿಸಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಆಕ್ಸಿಲೆರೊಮೀಟರ್‌, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಬಿಡುಗಡೆ !66W ಸೂಪರ್ ಫಾಸ್ಟ್ ಚಾರ್ಜಿಂಗ್

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಬೆಲೆ ಮತ್ತು ಲಭ್ಯತೆ

ಹಾನರ್ ಮ್ಯಾಜಿಕ್ 5 ಅಲ್ಟಿಮೇಟ್ ಆವೃತ್ತಿ ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ 16GB RAM ಮತ್ತು 512GB ಇನ್‌ಬಿಲ್ಟ್ ಸ್ಟೋರೇಜ್ ಆಯ್ಕೆಗೆ CNY 6,699 (ಸುಮಾರು 79,200ರೂ) ಬೆಲೆಯನ್ನು ಹೊಂದಿದೆ. ಇದು ಕಪ್ಪು ಮತ್ತು ಕಿತ್ತಳೆ ಬಣ್ಣದ ರೂಪಾಂತರದ ಆಯ್ಕೆಗಳಲ್ಲಿ ಖರೀದಿಸುವುದಕ್ಕೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಬೇರೆ ರಾಷ್ಟ್ರದ ಮಾರುಕಟ್ಟೆಗಳಲ್ಲಿ ಯಾವಾಗ ಲಭ್ಯವಾಗಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ.

Best Mobiles in India

English summary
Honor Magic 5 Ultimate Edition ships with a 50-megapixel primary rear camera accompanied by a 50-megapixel ultra-wide sensor and a 50-megapixel periscope telephoto camera.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+