ಎಂಟ್ರಿಗೂ ಮುನ್ನವೇ ಅರ್ಭಟಿಸುತ್ತಿದೆ ಹಾನರ್ ಮ್ಯಾಜಿಕ್ 6 ಪ್ರೊ: ಏನೆಲ್ಲಾ ನಿರೀಕ್ಷೆ
ಮೊಬೈಲ್ ಮಾರುಕಟ್ಟೆಯಲ್ಲಿ ಹಾನರ್ ಬ್ರ್ಯಾಂಡ್‌ನ ಫೋನ್‌ಗಳಿಗೆ ಭಾರಿ ಡಿಮ್ಯಾಂಡ್ ಇದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನಸೆಳೆದಿರುವ ಹಾನರ್ ಇದೀಗ ಹೊಸ ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ಫೆಬ್ರವರಿ 25 ರಂದು ಪ್ರಾರಂಭವಾಗುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್ 2024 ಈವೆಂಟ್‌ನಲ್ಲಿ ಅನಾವರಣಗೊಳ್ಳಲಿದೆ.
ಹೌದು, ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧವಾಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಜೊತೆಗೆ 5600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ವೇಗದ ಚಾರ್ಜಿಂಗ್ ಅನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ ಮ್ಯಾಜಿಕ್ 6 ಪ್ರೊ ರಚನೆ ಹೇಗಿದೆ?
ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ 6.8 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ OLED LTPO ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 2800×1280 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿರಲಿದೆ. ಇದು ಡೈನಾಮಿಕ್ 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.
ಹಾನರ್ ಮ್ಯಾಜಿಕ್ 6 ಪ್ರೊ ಪ್ರೊಸೆಸರ್ ಯಾವುದು?
ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು Honor MagicOS 8.0 ಬೆಂಬಲದೊಂದಿಗೆ ರನ್ ಆಗಲಿದೆ. ಅಲ್ಲದೆ ತಡೆರಹಿತ ಮಾನವ-ಯಂತ್ರ ಸಂವಹನಕ್ಕಾಗಿ AI- ಚಾಲಿತ ಉದ್ದೇಶವನ್ನು ಗುರುತಿಸುತ್ತದೆ. ಹಾಗೆಯೇ 12GB RAM + 512GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ.
ಹಾನರ್ ಮ್ಯಾಜಿಕ್ 6 ಪ್ರೊ ಕ್ಯಾಮೆರಾ ಸೆಟಪ್
ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ಡೈನಾಮಿಕ್ ಲೆನ್ಸ್ ಅನ್ನು ಹೊಂದಿದೆ. ಇದು ನಿಖರವಾದ ಫೋಕಸಿಂಗ್, ಅತ್ಯುತ್ತಮ ಕಡಿಮೆ-ಬೆಳಕಿನ ಕಾರ್ಯಕ್ಷಮತೆಗಾಗಿ ಬುದ್ಧಿವಂತ ವೇರಿಯಬಲ್ ಅಪರ್ಚರ್ ಪಡೆದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾವನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 180 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಅಲ್ಟ್ರಾ-ಟೆಲಿಫೋಟೋ ಲೆನ್ಸ್ ಹೊಂದಿದೆ. ಇದಲ್ಲದೆ 50ಮೆಗಾಪಿಕ್ಸೆಲ್ +TOF ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಹಾನರ್ ಮ್ಯಾಜಿಕ್ 6 ಪ್ರೊ ಬ್ಯಾಟರಿ ಮತ್ತು ಇತರೆ
ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ 5600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ವೇಗದ ಚಾರ್ಜಿಂಗ್ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್‌ನೊಂದಿಗೆ ಬರಲಿದೆ ಎನ್ನಲಾಗಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಇರಲಿದೆ ಎಂದು ಅಂದಾಜಿಸಲಾಗಿದೆ.
ಹಾನರ್ ಮ್ಯಾಜಿಕ್ 6 ಪ್ರೊ ಬೆಲೆ ಮತ್ತು ಲಭ್ಯತೆ
ಹಾನರ್ ಮ್ಯಾಜಿಕ್ 6 ಪ್ರೊ ಸ್ಮಾರ್ಟ್‌ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ ಎಂಟ್ರಿ ಆಗುವ ಮುನ್ನವೇ ಡೀಲಾಬ್ಸ್ ಯುರೋಪ್ ಮತ್ತು ಯುಕೆಯಲ್ಲಿ ಮ್ಯಾಜಿಕ್ 6 ಪ್ರೊ ಬೆಲೆ ಬಹಿರಂಗವಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಫ್ರಾನ್ಸ್ ಮತ್ತು ಇಟಲಿಯಂತಹ EU ಪ್ರದೇಶಗಳಲ್ಲಿ ಮ್ಯಾಜಿಕ್ 6 ಪ್ರೊ 1299.90 ಯುರೋ (ಅಂದಾಜು 1,15,751ರೂ) ಬೆಲೆಯನ್ನು ಹೊಂದಿರಲಿದೆ. ಇದು ಹಸಿರು ಮತ್ತು ಕಪ್ಪು ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications








