ಶೀಘ್ರದಲ್ಲೇ ಹಾನರ್‌ನಿಂದ ಬರಲಿದೆ ಬಿಗ್ ಬ್ಯಾಟರಿ ಫೋಲ್ಡಬಲ್ ಸ್ಮಾರ್ಟ್‌ಫೋನ್!
ಹಾನರ್ ಕಂಪೆನಿ ಇತ್ತೀಚಿನ ದಿನಗಳಲ್ಲಿ ಮತ್ತೆ ತನ್ನ ಹಳೆಯ ಖದರ್ ತೋರಿಸುತ್ತಿದೆ. ಹೊಸ ಶೈಲಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ಧೂಳೆಬ್ಬಿಸುತ್ತಿದೆ. ಇದೀಗ ತನ್ನ ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲು ಹಾತೊರೆಯುತ್ತಿದೆ. ಇದನ್ನು ಹಾನರ್ ಮ್ಯಾಜಿಕ್ ಫ್ಲಿಪ್ ಎಂದು ಗುರುತಿಸಲಾಗಿದ್ದು, ಬಿಗ್ ಬ್ಯಾಟರಿ ಹೊಂದಿರಲಿದೆ ಎನ್ನಲಾಗಿದೆ.
ಹೌದು, ಹಾನರ್ ಮ್ಯಾಜಿಕ್ ಫ್ಲಿಪ್ ಮುಂದಿನ ವರ್ಷ ಟೆಕ್ ವಲಯದಲ್ಲಿ ಅಬ್ಬರಿಸುವ ಸೂಚನೆ ನೀಡಿದೆ. ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳ ವಿನ್ಯಾಸಕ್ಕೆ ಹೊಸ ಟಚ್ ನೀಡುವ ಸಾಧ್ಯತೆಯಿದೆ. ಅದಕ್ಕೆ ಇಂಬು ಕೊಡುವಂತೆ ಈ ಸ್ಮಾರ್ಟ್‌ಫೋನ್ ಬಿಗ್ ಬ್ಯಾಟರಿ ಹೊಂದಿರಲಿದೆ ಎನ್ನುವ ಮಹತ್ವದ ವಿಚಾರ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಾಗಾದ್ರೆ ಹಾನರ್ ಮ್ಯಾಜಿಕ್ ಫ್ಲಿಪ್ ಫೋಲ್ಡಬಲ್ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ ಮ್ಯಾಜಿಕ್ ಫ್ಲಿಪ್
ಹಾನರ್ ಮ್ಯಾಜಿಕ್ ಫ್ಲಿಪ್ ಸ್ಮಾರ್ಟ್‌ಫೋನ್ ಮೊದಲ ಕ್ಲಾಮ್‌ಶೆಲ್ ಫೋಲ್ಡಿಂಗ್ ಸ್ಮಾರ್ಟ್‌ಫೋನ್ ಆಗಿರಲಿದೆ ಎನ್ನಲಾಗಿದೆ. ಈ ಕಾಂಪ್ಯಾಕ್ಟ್ ಫೋಲ್ಡಿಂಗ್ ಡಿವೈಸ್ ಒಳ ಮತ್ತು ಹೊರಭಾಗವನ್ನು ಒಳಗೊಂಡಿರಲಿದೆ. ಅಲ್ಲದೆ ಈ ಮಾದರಿಯು ಮುಂದಿನ ತಲೆಮಾರಿನ ಪ್ರಮುಖ ಮ್ಯಾಜಿಕ್ ವಿ 3 ಆಗಿರಬಹುದು ಎಂಬ ಸುಳಿವು ಸಿಕ್ಕಿದೆ. ಜೊತೆಗೆ ಈ ಫೋಲ್ಡಬಲ್ ಸ್ಮಾರ್ಟ್‌ಫೋನ್‌ನಲ್ಲಿ 4,500Ah ಸಾಮರ್ಥ್ಯದ ಬ್ಯಾಟರಿ ಅಳವಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದು ಸಾಧ್ಯವಾದರೆ ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಾಗಲಿರುವ ಅತಿದೊಡ್ಡ ಬ್ಯಾಟರಿ ಪ್ಯಾಕ್ ಹೊಂದಿರುವ ಫ್ಲಿಪ್ ಫೋನ್ ಆಗಿರಲಿದೆ. ಇದಲ್ಲದೆ ಹಾನರ್ ತನ್ನ ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್‌ನಲ್ಲಿ ಉಪಗ್ರಹ ಸಂಪರ್ಕ ಮತ್ತು ವೇರಿಯಬಲ್ ಅಪರ್ಚರ್‌ನಂತಹ ಹೊಸ ಫೀಚರ್ಸ್‌ಗಳನ್ನು ಸೇರಿಸಲು ಯೋಜಿಸುತ್ತಿದೆ ಎಂದು ಟಿಪ್‌ಸ್ಟರ್ ವರದಿ ಮಾಡಿದೆ. ಇನ್ನು ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8 Gen 3 SoC ನಿಂದ ರನ್ ಆಗುವ ನಿರೀಕ್ಷೆ ಇಡಲಾಗಿದೆ.

ಹಾನರ್ ಮ್ಯಾಜಿಕ್ ಫ್ಲಿಪ್ ಫೀಚರ್ಸ್ ಹೇಗಿದೆ?
ಹಾನರ್ ಮ್ಯಾಜಿಕ್ ಫ್ಲಿಪ್ ಸ್ಮಾರ್ಟ್‌ಫೋನ್ ಮೇನ್ ಡಿಸ್‌ಪ್ಲೇ 6.79 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಆಗಿರಲಿದೆ. ಇದು 1080 x 2520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಜೊತೆಗೆ ಡಿಸ್‌ಪ್ಲೇ 1200 ನೀಟ್ಸ್ ಬ್ರೈಟ್‌ನೆಸ್ ಬೆಂಬಲಿಸುವ ಸಾಧ್ಯತೆಯಿದೆ.
ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8 Gen 3 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 256 GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ ಎಂದು ವರದಿಯಾಗಿದೆ. ಇದು ಮೆಮೊರಿ ಕಾರ್ಡ್ ಸ್ಲಾಟ್ ಹೊಂದಿರುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ ಎನ್ನಲಾಗಿದೆ. ಇದರೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ವರದಿಯಾಗಿದೆ.

ಹಾನರ್ ಮ್ಯಾಜಿಕ್ ಫ್ಲಿಪ್ ಸ್ಮಾರ್ಟ್‌ಫೋನ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವ ಮಾಹಿತಿಯಂತೆ 4,500Ah ಸಾಮರ್ಥ್ಯದ ಬ್ಯಾಟರಿ ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, VoLTE, ಬ್ಲೂಟೂತ್ v5.3, ವೈಫೈ, NFC, USB-C v2.0 ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇದು 2024 ರ ಮೊದಲ ತ್ರೈಮಾಸಿಕದಲ್ಲಿ ಘೋಷಣೆಯಾಗುವ ನಿರೀಕ್ಷೆಯಿದೆ.


Click it and Unblock the Notifications








