Home
ಸುದ್ದಿಜಾಲ

ಹಾನರ್‌ ಪ್ಲೇ 4 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ!

ಚೀನಾದ ಟೆಕ್ ದೈತ್ಯ ಹುವಾವೇ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ವಿಭಿನ್ನ ವಿಶೇಷ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಹುವಾವೇ ತನ್ನ ಸಬ್‌ಬ್ರಾಂಡ್‌ ಹಾನರ್‌ ಮೂಲಕವೂ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಸದ್ಯ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿರುವ ಹಾನರ್‌ ತನ್ನ ಮತ್ತೊಂದು ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ.

ಹುವಾವೇ

ಹೌದು, ಹುವಾವೇ ಸಬ್‌ಬ್ರಾಂಡ್‌ ಹಾನರ್‌ ತನ್ನ ಹಾನರ್ ಪ್ಲೇ 4 ಮತ್ತು ಹಾನರ್ ಪ್ಲೇ 4 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್‌ಗಳು ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ಗಳು 5G ನೆಟ್‌ವರ್ಕ್‌ ಅನ್ನು ಬೆಂಬಲಿಸುತ್ತವೆ ಎಂದು ಕಂಪೆನಿ ಹೇಳಿಕೊಂಡಿದೆ. ಇನ್ನು ಈ ಹಾನರ್ ಪ್ಲೇ 4 ಸರಣಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಹಾನರ್‌ ಪ್ಲೇ 4 ಪ್ರೊ ಸ್ಮಾರ್ಟ್‌ಫೋನ್‌ ವಿನ್ಯಾಸ ಹಾಗೂ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಹಾನರ್‌ ಪ್ಲೇ 4 ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.57 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಸಾಮರ್ಥ್ಯವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ TFT ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಹೊಂದಿದೆ. ಗೇಮಿಂಗ್‌ ಮಾದರಿ ಹಾಗೂ ವೀಡಿಯೋ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಹುವಾವೇ ಹಿಸಿಲಿಕಾನ್ ಕಿರಿನ್ 990 SoC ಪ್ರೊಸೆಸರ್‌ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಹಾನರ್‌ ಪ್ಲೇ 4 ಪ್ರೊ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಸೆಟ್‌ಅಪ್‌ ಹೊಂದಿದೆ. ಇದಲ್ಲದೆ ಮುಖ್ಯ ಕ್ಯಾಮೆರಾ 40 ಮೆಗಾಪಿಕ್ಸೆಲ್ ಸೆನ್ಸಾರ್‌ F/ 1.8 ಲೆನ್ಸ್ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ ಎನ್ನಲಾಗ್ತಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಹಾನರ್‌ ಪ್ಲೇ 4 ಪ್ರೊ ಸ್ಮಾರ್ಟ್‌ಫೋನ್‌ 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 40W ವರೆಗೆ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ ವಿ 5.1, GPS, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್,ಸೆನ್ಸಾರ್‌ ಅನ್ನು ಬೆಂಬಲಿಸಲಿದೆ. ಇನ್ನು ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹಾನರ್ ಪ್ಲೇ 4 ಪ್ರೊ ಸ್ಮಾರ್ಟ್‌ಫೋನ್‌ ಬೆಲೆ CNY 2,899 (ಸುಮಾರು 30,800ರೂ)ಗೆ ನಿಗದಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮ್ಯಾಜಿಕಲ್ ನೈಟ್ ಬ್ಲ್ಯಾಕ್, ಮೆಚಾ ಬ್ಲೂ ಮತ್ತು ಐಸ್ಲ್ಯಾಂಡ್ ಇಲ್ಯೂಷನ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Honor Play 4 Pro have been launched as the latest smartphone by the Huawei sub-brand Honor.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+