ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಹಾನರ್ ಪ್ಲೇ 4 ಸರಣಿಯ ಸ್ಮಾರ್ಟ್‌ಫೋನ್!
ಚೀನಾದ ಟೆಕ್ ದೈತ್ಯ ಹುವಾವೇ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿರುವ ಹುವಾವೇ ಜಾಗತಿಕ ಮಟ್ಟದಲ್ಲಿಯೂ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ. ಇನ್ನು ಹುವಾವೇ ತನ್ ಸಬ್ ಬ್ರಾಂಡ್ ಹಾನರ್ ಬ್ರಾಂಡ್ ಹೆಸರಿನಲ್ಲಿಯೂ ಹಲವು ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಸದ್ಯ ಇದೀಗ ಮತ್ತೇ ಹಾನರ್ ಬ್ರಾಂಡ್ ಅಡಿಯಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ.

ಹೌದು, ಹುವಾವೇ ಸಬ್ ಬ್ರಾಂಡ್ ಹಾನರ್ ಕಂಪೆನಿ ತನ್ನ ಹಾನರ್ ಪ್ಲೇ 4 ಸರಣಿಯ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದ್ದು, ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ. ಇನ್ನು ಈ ಹೊಸ ಸರಣಿಯಲ್ಲಿ ಹಾನರ್ ಪ್ಲೇ 4 ಮತ್ತು ಪ್ಲೇ 4 ಪ್ರೊ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಲಿವೆ ಎನ್ನಲಾಗ್ತಿದೆ. ಇನ್ನು ಬಿಡುಗಡೆ ಆಗಲಿರುವ ಹಾನರ್ ಪ್ಲೇ ಸರಣಿಯಲ್ಲಿ ಹಾನರ್ ಪ್ಲೇ 4 ಸರಣಿಯ ಸ್ಮಾರ್ಟ್‌ಫೋನ್ ಒಳಗೊಂಡಿರುವ ಫೀಚರ್ಸ್ ಹಾಗೂ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಬನ್ನಿರಿ.

ಡಿಸ್‌ಪ್ಲೇ
ಹಾನರ್ ಪ್ಲೇ 4 ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.81 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇದು ಫುಲ್ ಎಚ್‌ಡಿ + ರೆಸಲ್ಯೂಶನ್ ಹೊಂದಿರುವ ಡಿಸ್‌ಪ್ಲೇ ಆಗಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಡಿಸ್‌ಪ್ಲೇ IPS LCD ವಿನ್ಯಾಸವನ್ನ ಹೊಂದಿದ್ದು, 294ppi ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿದೆ ಎಂದು ಹೇಳಲಾಗ್ತಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 800 ಆಕ್ಟಾ-ಕೋರ್ ಪ್ರೊಸೆಸರ್ ವೇಗವನ್ನ ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗ್ತಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM+ 64GB, 6GB RAM +128GB, 8GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ ಎನ್ನಲಾಗ್ತಿದೆ.

ಕ್ಯಾಮೆರಾ ವಿನ್ಯಾಸ
ಈ ಸ್ಮಾರ್ಟ್‌ಫೋನ್ ಕ್ವಾಡ್-ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಹಾನರ್ ಪ್ಲೇ 4 ಸ್ಮಾರ್ಟ್‌ಫೋನ್ 4200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಅಲ್ಲದೆ ಇದು 40W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ ಏನು ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ.


Click it and Unblock the Notifications




