ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಹಾನರ್ ಪ್ಲೇ 40C !..ಸ್ಮಾರ್ಟ್‌ಫೋನ್ ಪ್ರಿಯರಿಗೆ ಹೊಸ ಆಯ್ಕೆ?
ಮೊಬೈಲ್ ಮಾರುಕಟ್ಟೆಯಲ್ಲಿ ಹಾನರ್ ಬ್ರ್ಯಾಂಡ್ ಭಾರಿ ಡಿಮ್ಯಾಂಡ್ ಪಡೆದುಕೊಂಡಿದೆ. ತನ್ನ ವಿಭಿನ್ನ ಲುಕ್‌ನ ಸ್ಮಾರ್ಟ್‌ಫೋನ್‌ಗಳಿಂದ ಸೈ ಎನಿಸಿಕೊಂಡಿದೆ. ಇದೀಗ ಅದರ ಮುಂದುವರೆದ ಭಾಗವಾಗಿ ಹೊಸ ಹಾನರ್ ಪ್ಲೇ 40C ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 5,200mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ಹಾನರ್ ಪ್ಲೇ 40C ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಆಗಿದ್ದು, ಸಿಂಗಲ್ ರಿಯರ್ ಕ್ಯಾಮೆರಾದೊಂದಿಗೆ ಬರಲಿದೆ. ಇನ್ನುಳಿದಂತೆ ಈ ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ ಪ್ಲೇ 40C ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಹಾನರ್ ಪ್ಲೇ 40C ಸ್ಮಾರ್ಟ್‌ಫೋನ್ 6.56-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ನೀಡಲಿದೆ. ಇದು 1612x720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 70% NTSC ಕಲರ್ ಗ್ಯಾಮಟ್ ಅನ್ನು ಪಡೆದುಕೊಂಡಿದೆ.
ಹಾನರ್ ಪ್ಲೇ 40C ಪ್ರೊಸೆಸರ್ ಯಾವುದು?
ಹಾನರ್ ಪ್ಲೇ 40C ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 13-ಆಧಾರಿತ ಮ್ಯಾಜಿಕ್ಓಎಸ್ 7.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ RAM ವಿಸ್ತರಣೆ ತಂತ್ರಜ್ಞಾನವನ್ನು ಬೆಂಬಲಿಸಲಿದೆ.
ಹಾನರ್ ಪ್ಲೇ 40C ಕ್ಯಾಮೆರಾ ಸೆಟ್‌ಅಪ್ ಏನಿದೆ?
ಹಾನರ್ ಪ್ಲೇ 40C ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ರಿಯರ್ ಕ್ಯಾಮೆರಾ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಹಾನರ್ ಪ್ಲೇ 40C ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಹಾನರ್ ಪ್ಲೇ 40C ಸ್ಮಾರ್ಟ್‌ಫೋನ್ 5,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.1, ಯುಎಸ್‌ಬಿ ಟೈಪ್-ಸಿ ಪೋರ್ಟ್, ಜಿಪಿಎಸ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಹೊಂದಿದೆ.
ಹಾನರ್ ಪ್ಲೇ 40C ಬೆಲೆ ಮತ್ತು ಲಭ್ಯತೆ
ಹಾನರ್ ಪ್ಲೇ 40C ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇನ್‌ಬಿಲ್ಟ್ ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 899 (ಸುಮಾರು 10,300ರೂ)ಬೆಲೆ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಮ್ಯಾಜಿಕ್ ನೈಟ್ ಬ್ಲ್ಯಾಕ್, ಇಂಕ್ ಜೇಡ್ ಗ್ರೀನ್ ಮತ್ತು ಸ್ಕೈ ಬ್ಲೂ ಬಣ್ಣದ ರೂಪಾಂತರಗಳಲ್ಲಿ ಲಭ್ಯವಿದೆ. ಇದು ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಇನ್ನು ಹಾನರ್ ಕಂಪೆನಿ ಇತ್ತೀಚಿಗೆ ಹೊಸ ಹಾನರ್ 90 ಲೈಟ್ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ತನ್ನ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯಿಂದ ಗಮನಸೆಳೆದಿದೆ. ಇನ್ನು ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಆಕ್ಟಾ-ಕೋರ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13-ಆಧಾರಿತ MagicOS 7.1 ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 8GB RAM ಮತ್ತು 256GB ಇನ್‌ಬಿಲ್ಟ್ ಸ್ಟೋರೇಜ್ ಅನ್ನು ಒಳಗೊಂಡಿದೆ.


Click it and Unblock the Notifications








