ಎಂಟ್ರಿ ಲೆವೆಲ್ 5G ಸ್ಮಾರ್ಟ್‌ಫೋನ್ ಪರಿಚಯಿಸಿದ ಹಾನರ್! 6,000mAh ಬ್ಯಾಟರಿ ಬ್ಯಾಕ್‌ಅಪ್!
ವಿಶೇಷ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾದ ಹಾನರ್ ಬ್ರ್ಯಾಂಡ್ ಹೊಸ 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಎಂಟ್ರಿ ಲೆವೆಲ್ 5G ಫೋನ್ ಆಗಿದ್ದು, ಹಾನರ್ ಪ್ಲೇ 50 ಪ್ಲಸ್ ಎಂದು ಹೆಸರಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ನೊಂದಿಗೆ ಎಂಟ್ರಿ ನೀಡಿದೆ.
ಹೌದು, ಹಾನರ್ ಪ್ಲೇ 50 ಪ್ಲಸ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಈ ಸ್ಮಾರ್ಟ್‌ಫೋನ್ 35W ವೇಗದ ಚಾರ್ಜಿಂಗ್ ಅನ್ನು ಕೂಡ ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಎಂಟ್ರಿ ನೀಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ ಪ್ಲೇ 50ಪ್ಲಸ್ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಹಾನರ್ ಪ್ಲೇ 50ಪ್ಲಸ್ ಸ್ಮಾರ್ಟ್‌ಫೋನ್ 6.8 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇದು 20:09 ರಚನೆಯ ಅನುಪಾತವನ್ನು ಹೊಂದಿದ್ದು, 850 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.
ಹಾನರ್ ಪ್ಲೇ 50 ಪ್ಲಸ್ ಪ್ರೊಸೆಸರ್ ಯಾವುದು?
ಹಾನರ್ ಪ್ಲೇ 50ಪ್ಲಸ್ ಸ್ಮಾರ್ಟ್‌ಫೋನ್ ಡೈಮೆನ್ಸಿಟಿ 6020 ಚಿಪ್‌ಸೆಟ್ ಅನ್ನು ಹೊಂದಿದ್ದು, ಮ್ಯಾಜಿಕ್ ಓಎಸ್ 7.2-ಆಧಾರಿತ ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಮಾಹಿತಿಯಿಲ್ಲ.
ಹಾನರ್ ಪ್ಲೇ 50 ಪ್ಲಸ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ಹಾನರ್ ಪ್ಲೇ 50 ಪ್ಲಸ್ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರೊಂದಿಗೆ LED ಫ್ಲ್ಯಾಷ್ ಅನ್ನು ಹೊಂದಿದೆ.
ಹಾನರ್ ಪ್ಲೇ 50 ಪ್ಲಸ್ ಬ್ಯಾಟರಿ ಮತ್ತು ಇತರೆ
ಹಾನರ್ ಪ್ಲೇ 50 ಪ್ಲಸ್ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 35W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸ್ಪೀಕರ್‌ಗಳು, 3.5 ಎಂಎಂ ಆಡಿಯೊ ಜ್ಯಾಕ್, ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಡ್ಯುಯಲ್ ಸಿಮ್, 5 ಜಿ, ವೈ-ಫೈ 802.11ac, ಬ್ಲೂಟೂತ್ 5.1, ಜಿಪಿಎಸ್, ಮತ್ತು USB-C ಪೋರ್ಟ್ ಅನ್ನು ಒಳಗೊಂಡಿದೆ.
ಹಾನರ್ ಪ್ಲೇ 50 ಪ್ಲಸ್ ಬೆಲೆ ಮತ್ತು ಲಭ್ಯತೆ
ಹಾನರ್ ಪ್ಲೇ 50 ಪ್ಲಸ್ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ 1,399 ಯುವಾನ್ (ಅಂದಾಜು 16,275ರೂ)ಬೆಲೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಮ್ಯಾಜಿಕ್ ನೈಟ್ ಬ್ಲಾಕ್, ಮೊ ಯುಕಿಂಗ್ (ಹಸಿರು), ಸ್ಟಾರ್ ಪರ್ಪಲ್ ಮತ್ತು ಸ್ಟ್ರೀಮಿಂಗ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಬಿಡುಗಡೆ ಆಗಲಿದೆ ಎಂಬ ನಿರೀಕ್ಷೆ ಟೆಕ್ ವಲಯದಲ್ಲಿದೆ.


Click it and Unblock the Notifications








