ಹಾನರ್ ಪ್ಲೇ 6C ಸ್ಮಾರ್ಟ್‌ಫೋನ್ ಬಿಡುಗಡೆ!..ಪ್ರೊಸೆಸರ್ ಯಾವುದು?
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹಾನರ್ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಜನಪ್ರಿಯತೆಯನ್ನು ಪಡೆದಿವೆ. ತನ್ನ ಭಿನ್ನ ಪ್ರೊಸೆಸರ್ ಹಾಗೂ ಕ್ಯಾಮೆರಾ ಫೀಚರ್ಸ್‌ಗಳಿಗೆ ಹೆಸರುವಾಸಿಯಾಗಿದೆ. ಸದ್ಯ ಇದೀಗ ಟೆಕ್ ಮಾರುಕಟ್ಟೆಗೆ ಹೊಸ ಹಾನರ್ ಪ್ಲೇ 6C ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಸ್ನಾಪ್‌ಡ್ರಾಗನ್ 4 ಸರಣಿ ಚಿಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಹಾನರ್ ಕಂಪೆನಿ ಹೊಸ ಹಾನರ್ ಪ್ಲೇ 6C ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಬಜೆಟ್ ಬೆಲೆಯ 5 ಫೋನ್ ಇದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮ್ಯಾಜಿಕ್ ನೈಟ್ ಬ್ಲ್ಯಾಕ್, ಅರೋರಾ ಬ್ಲೂ ಮತ್ತು ಟೈಟಾನಿಯಂ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೆ ರಚನೆ ಮತ್ತು ವಿನ್ಯಾಸ
ಹಾನರ್ ಪ್ಲೇ 6C ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್ ಬಲ ಹೇಗಿದೆ?
ಹಾನರ್ ಪ್ಲೇ 6C ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 480 5G ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಮ್ಯಾಜಿಕ್ ಯುಐ 5.0 ಆಪರೇಟಿಂಗ್ ಸಿಸ್ಟಂನಲ್ಲಿ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ಯಾವುದು?
ಹಾನರ್ ಪ್ಲೇ 6C ಸ್ಮಾರ್ಟ್‌ಫೋನ್ 13ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದರ ರಿಯರ್ ಪ್ಯಾನಲ್ ಎಲ್ಇಡಿ ಫ್ಲ್ಯಾಷ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 5 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಹಾನರ್ ಪ್ಲೇ 6C ಸ್ಮಾರ್ಟ್‌ಫೋನ್ 22.5W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, Wi-Fi 802.11ac, ಬ್ಲೂಟೂತ್ 5.1, GPS, USB-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದು ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಹಾನರ್ ಪ್ಲೇ 6C ಸ್ಮಾರ್ಟ್‌ಫೋನ್ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯ ಬೆಲೆ 1,099 ಯುವಾನ್ (ಅಂದಾಜು 12,792ರೂ.)ಆಗಿದೆ. ಇದರ 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ 1,299 ಯುವಾನ್ (ಅಂದಾಜು 15,120ರೂ.) ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮ್ಯಾಜಿಕ್ ನೈಟ್ ಬ್ಲ್ಯಾಕ್, ಅರೋರಾ ಬ್ಲೂ ಮತ್ತು ಟೈಟಾನಿಯಂ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಇದಲ್ಲದೆ ಹಾನರ್ ಕಂಪನಿ ಶೀಘ್ರದಲ್ಲೇ ಹಾನರ್ X40 ಸರಣಿಯ ಫೋನ್ Honor X40 GT ಲಾಂಚ್ ಮಾಡಲು ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 888 4G ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ದೃಡೀಕೃತ ಮೂಲಗಳು ತಿಳಿಸಿವೆ.


Click it and Unblock the Notifications








