ಹುವಾವೇ ಸಬ್‌ಬ್ರಾಂಡ್‌ ಹಾನರ್ ನಿಂದ ಹಾನರ್‌ ಪ್ಲೇ 9A ಸ್ಮಾರ್ಟ್‌ಫೋನ್ ಬಿಡುಗಡೆ!

|

ಚೀನಾದ ಟೆಕ್‌ ದೈತ್ಯ ಹುವಾವೆ ಕಂಪೆನಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತನ್ನದೇ ಆದ ಪ್ರಾಬಲ್ಯವನ್ನ ಹೊಂದಿದೆ. ಜಾಗತಿಕವಾಗಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರಾಂಡ್‌ಗಳಲ್ಲಿ ಹುವಾವೇ ಕೂಡ ಒಂದಾಗಿದೆ. ಇದಲ್ಲದೆ ಹುವಾವೇ ತನ್ನ ಸಬ್‌ಬ್ರಾಂಡ್‌ ಹಾನರ್‌ ಸ್ಮಾರ್ಟ್‌ಫೋನ್‌ಗಳನ್ನು ಸಹ ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿತ್ತು. ಈಗಾಗಲೇ ಹಾನರ್‌ ಬ್ರಾಂಡ್‌ನ ಹಲವು ಆವೃತ್ತಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಬ್ಯವಿವೆ. ಇದೀಗ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಹಾನರ್‌ ಪರಿಚಯಿಸಿದೆ.

ಹೌದು

ಹೌದು, ಹುವಾವೇ ಕಂಪೆನಿಯ ಸಬ್‌ಬ್ರಾಂಡ್‌ ಹಾನರ್‌ ತನ್ನ ಹೊಸ ಆವೃತ್ತಿಯ ಹಾನರ್ ಪ್ಲೇ 9A ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್, 2.3 GHz, ಕಾರ್ಟೆಕ್ಸ್ A53 , ಮೀಡಿಯಾ ಟೆಕ್ ಹಿಲಿಯೋ P35 ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ ವಿ 10 (ಕ್ಯೂ) ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಮಾರ್ಥ್ಯವನ್ನು ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಬೆಲೆ RMB 900 (ಅಂದಾಜು 9,570 ರೂ.) ಆಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಹಾನರ್ ಪ್ಲೇ 9A ಸ್ಮಾರ್ಟ್‌ಫೋನ್‌ 720 x 1560 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.3 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಐಪಿಎಸ್‌ ಎಲ್‌ಸಿಡಿ ವಿನ್ಯಾಸವನ್ನು ಹೊಂದಿದ್ದು, ಇದರ ಪಿಕ್ಸೆಲ್‌ ಸಾಂದ್ರತೆ 273ppi ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದ್ದು ಬೆಜೆಲ್‌ ಲೆಸ್‌ ಡಿಸ್‌ಪ್ಲೇ ಆಗಿದೆ. ಜೊತೆಗೆ ಈ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ 82.52% ಅನುಪಾತವನ್ನ ಒಳಗೊಂಡಿದೆ. ಇದಲ್ಲದೆ ಇದು ಟಚ್‌ಸ್ಕ್ರಿನ್‌ ಹಾಗೂ ಕೆಪ್ಯಾಸಿಟಿವ್‌ ಟಚ್‌ಸ್ಕ್ರೀನ್‌, ಮಲ್ಟಿ ಟಚ್‌ ಸ್ಕ್ರೀನ್‌ ಅನ್ನು ಸಹ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ ವಿ 10 ಆಪರೇಟಿಂಗ್‌ ಸಿಸ್ಟಂ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕವೂ 256GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸುವ ಸಾಮರ್ಥ್ಯವನ್ನ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಹಾನರ್ ಪ್ಲೇ 9A ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ ವೈಡ್‌ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದ್ದು, ಇದು 1080p ವೀಡಿಯೋ ರೆಕಾರ್ಡ್‌ ಸಾಮರ್ಥ್ಯವನ್ನ ಒಳಗೊಂಡಿದೆ.ಅಲ್ಲದೆ ಈ ಕ್ಯಾಮೆರಾಗಳ ಜೊತೆಗೆ ಎಲ್‌ಇಡಿ ಫ್ಲ್ಯಾಷ್‌ ಅನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿಯನ್ನ ಕಂಪೆನಿ ನೀಡಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ಮತ್ತು VoLTE ಬೆಂಬಲ, 2.4GHz Wi-Fi b / g / n ಮತ್ತು ಬ್ಲೂಟೂತ್ 5.0 ಅನ್ನು ಬೆಂಬಲಿಸಲಿದೆ. ಜೊತೆಗೆ ಮೈಕ್ರೋ ಯುಎಸ್‌ಬಿ ಪೋರ್ಟ್, ಎಫ್‌ಎಂ ರೇಡಿಯೋ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಈ ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಇನ್ನು ಲಭ್ಯವಿಲ್ಲ. ಆದರೆ ಚೀನಾದ ಮಾರುಕಟ್ಟೆಯಲ್ಲಿ ಲಬ್ಯವಾಗಲಿದೆ. ಇನ್ನು ಇದರ ಬೆಲೆಯನ್ನ ನೊಡುವುದಾದರೆ ಈ ಸ್ಮಾರ್ಟ್‌ಫೋನ್‌ RMB 900(ಅಂದಾಜು 9,570 ರೂ.) ಬೆಲೆಯನ್ನ ಹೊಂದಿದ್ದು, ನೈಟ್ ಬ್ಲ್ಯಾಕ್, ಬ್ಲೂ ಎಮರಾಲ್ಡ್ ಮತ್ತು ಜಾಸ್ಪರ್ ಗ್ರೀನ್ ಸೇರಿದಂತೆ ಮೂರು ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
The top features of the Honor Play 9A are a 5,000mAh battery, 6.3-inch display, dual rear camera setup and more. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X