ಶೀಘ್ರದಲ್ಲೇ ಹಾನರ್‌V30 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಚೀನಾದ ಸ್ಮಾರ್ಟ್‌ಫೋನ್‌ ಕಂಪೆನಿಗಳಲ್ಲಿ ಮುಂಚೂಣಿಯಲ್ಲಿರುವ ಸಂಸ್ಥೆಗಳಲ್ಲಿ ಒಂದಾಗಿರುವ ಹುವಾವೇ ಕಂಪೆನಿ ಹಾನರ್‌ ಸ್ಮಾರ್ಟ್‌ಫೋನ್‌ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಅಷ್ಟೇ ಅಲ್ಲ ಆಕರ್ಷಕ ಫೀಚರ್ಸ್‌ಗಳನ್ನ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸೋ ಮೂಲಕ ಹೊಸತನಕ್ಕೆ ಹೆಸರಾಗಿದೆ. ಸದಾ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಹೊಸತನವನ್ನ ಪರಿಚಯಿಸೋ ಹುವಾವೇಯ ಹಾನರ್‌ ಇದೀಗ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ.

ಹೌದು

ಹೌದು, ಚೀನಾ ಮೂಲದ ಜನಪ್ರಿಯ ಕಂಪೆನಿ ಹುವಾವೇ ಸಬ್‌ಬ್ರ್ಯಾಂಡ್‌ ಹಾನರ್‌ ಕಂಪೆನಿ ತನ್ನ ಹೊಸ ಆವೃತ್ತಿಯ ಹಾನರ್ V30 ಸ್ಮಾರ್ಟ್‌ಫೋನ್‌ ಅನ್ನು ಯುರೋಪಿಯನ್ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಇನ್ನು ಈ ಹೊಸ ಹಾನರ್ V30 ಸ್ಮಾರ್ಟ್‌ಫೋನ್‌ನಲ್ಲಿ ಗೂಗಲ್ ಮೊಬೈಲ್ ಸರ್ವೀಸಸ್ (GMS) ಬದಲಿಗೆ ಹುವಾವೇ ಮೊಬೈಲ್ ಸೇವೆ (HMS) ಅಳವಡಿಸಲಾಗಿದೆ ಎನ್ನಲಾಗ್ತಿದ್ದು, ಇದು ಹುವಾವೆಯ ಮೊದಲ HMS ವ್ಯವಸ್ಥೆಯ ಸ್ಮಾರ್ಟ್‌ಫೋನ್ ಆಗಿರುತ್ತದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿ.

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಹಾನರ್ V30 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ ಫುಲ್‌ಹೆಚ್‌ಡಿ ಡಿಸ್‌ಪ್ಲೇ ಹೊಂದಿದ್ದು, ಇದು 6.57-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಪ್ಯಾನಲ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ ಪಂಚ್-ಹೋಲ್ ಕ್ಯಾಮೆರಾ ವಿನ್ಯಾಸವನ್ನು ಹೊಂದಿದೆ. ಅಲ್ಲದೆ 91.46% ಸ್ಕ್ರೀನ್-ಟು-ಬಾಡಿ ಅನುಪಾತ ವನ್ನು ಹೊಂದಿದ್ದು, 400 PPI ಪಿಕ್ಸೆಲ್ ರೆಸಲ್ಯೂಶನ್‌ ಡಿಸ್‌ಪ್ಲೇ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಹಿಸಿಲಿಕಾನ್ ಕಿರಿನ್ 990 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಮೆಮೊರಿ ಕಾರ್ಡ್‌ ಮೂಲಕ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಹಾನರ್ V30 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 40 ಮೆಗಾ ಪಿಕ್ಸೆಲ್‌ f/1.8 ಲೆನ್ಸ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ f/2.4 ಲೆನ್ಸ್‌, ಮೂರನೇ ಕ್ಯಾಮೆರಾ ಕೂಡ 8ಮೆಗಾ ಪಿಕ್ಸೆಲ್‌ f/2.4 ಲೆನ್ಸ್‌ ಅನ್ನು ಒಳಗೊಂಡಿದೆ. ಅಲ್ಲದೆ ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌ ಅನ್ನು ಸಹ ನೀಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್ f/ 2.0 ಲೆನ್ಸ್‌, 8-ಮೆಗಾಪಿಕ್ಸೆಲ್ f/ 2.2 ಲೆನ್ಸ್‌ ಅನ್ನು ಹೊಂದಿರುವ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,200 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಆಪ್‌ ಅನ್ನು ಹೊಂದಿದ್ದು, 40W ಹಾನರ್ ಸೂಪರ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಸಿಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌ v5.0, ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಟೈಫ್‌ ಸಿ ಚಾರ್ಜಿಂಗ್‌ ಫೋರ್ಟ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಳೆದ ವರ್ಷ ಡಿಸೆಂಬರ್‌ ತಿಂಗಳಲ್ಲಿ ಚೀನಾದಲ್ಲಿ ಬಿಡುಗಡೆಯಾಗಿ ಸೃಷ್ಟಿಸಿತ್ತು. ಇದೀಗ ಯುರೋಪ್‌ನಲ್ಲಿ ಬಿಡುಗಡೆಯಾಗಲಿದ್ದು, ಬೆಲೆ ಹಾಗೂ ಲಭ್ಯತೆಯ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
The Honor V30 smartphone will be equipped with HMS service (Huawei Mobile Service), instead of GMS (Google Mobile Services).to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X