ಹಾನರ್ ವ್ಯೂ 30 ಪ್ರೊ ಮತ್ತು 9X ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಟೆಕ್‌ ಜಗತ್ತಿನಲ್ಲಿ ವೈವಿಧ್ಯ ಬಗೆಯ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಲೇ ಇರುತ್ತವೆ. ಹೊಸ ಮಾದರಿಯ ಫೀಚರ್ಸ್‌ಗಳನ್ನ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮೂಲಕವೇ ಕೆಲವು ಕಂಪೆನಿಗಳು ಸೌಂಡ್‌ ಕೂಡ ಮಾಡುತ್ತವೆ. ಇವುಗಳಲ್ಲಿ ಹಾನರ್‌ ಕಂಪೆನಿ ಕೂಡ ಒಂದಾಗಿದ್ದು, ಈಗಾಗ್ಲೆ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಬಿಡುಗಡೆ ಮಾಡಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹಾನರ್‌ ಕಂಪೆನಿ ಹೊಸ ಮಾದರಿಯ ಎರಡು ವಿಭಿನ್ನ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ.

ಹೌದು

ಹೌದು, ಹಾನರ್‌ ಕಂಪೆನಿ ಹಾನರ್ ವ್ಯೂ 30 ಪ್ರೊ ಮತ್ತು ಹಾನರ್ 9X ಪ್ರೊ ಎಂಬ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನ ಯುರೋಪ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ವೈವಿಧ್ಯ ಫೀಚರ್ಸ್‌ಗಳನ್ನ ಹೊಂದಿದ್ದು, ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸುವ ಸೂಚನೆ ನೀಡಿವೆ. ಅಷ್ಟಕ್ಕೂ ಈ ಸ್ಮಾರ್ಟ್‌ಫೋನ್‌ಗಳು ಹೊಂದಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ನೋಡಿ.

ಹಾನರ್ ವ್ಯೂ 30 ಪ್ರೊ

ಹಾನರ್ ವ್ಯೂ 30 ಪ್ರೊ

ಹಾನರ್ ವ್ಯೂ 30 ಪ್ರೊ ಸ್ಮಾರ್ಟ್‌ಫೋನ್ ಚೀನಾದಲ್ಲಿ ಬಿಡುಗಡೆಯಾಗಿದ್ದ ಹಾನರ್ ವಿ 30 ಪ್ರೊ ಸ್ಮಾರ್ಟ್‌ಫೋನ್‌ನ ರಿ ಬ್ರಾಂಡೆಡ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ರೆಸಲ್ಯೂಶನ್‌ ಹೊಂದಿರುವ 6.57-ಇಂಚಿನ ಡ್ಯುಯಲ್-ಪಂಚ್ ಹೋಲ್ ಐಪಿಎಸ್ ಎಲ್‌ಸಿಡಿ ಪ್ಯಾನೆಲ್ ಹೊಂದಿರುವ ಫುಲ್‌ ಎಚ್‌ಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಹಿಸಿಲಿಕಾನ್ ಕಿರಿನ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GBಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದ್ದು, ಮೆಮೊರಿ ಕಾರ್ಡ್‌ ಮೂಲಕ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ಮತ್ತು ಬ್ಯಾಟರಿ

ಕ್ಯಾಮೆರಾ ಮತ್ತು ಬ್ಯಾಟರಿ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 40 ಮೆಗಾಪಿಕ್ಸೆಲ್‌,ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ವೈಡ್‌ ಆಂಗಲ್‌ ಲೆನ್ಸ್‌, ಮೂರನಬೇ ಕ್ಯಾಮೆರಾ 8ಮೆಗಾ ಪಿಕ್ಸೆಲ್‌ ಟೆಲಿಫೋಟೋ ಶೂಟರ್‌ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 32ಮೆಗಾ ಪಿಕ್ಸೆಲ್‌ ಹಾಗೂ 8ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,100mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 40W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಲ್ಲದೆ 27W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ಹಾನರ್ 9X ಪ್ರೊ

ಹಾನರ್ 9X ಪ್ರೊ

ಹಾನರ್ 9X ಪ್ರೊ ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.59-ಇಂಚಿನ ಫುಲ್‌ ಎಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಐಪಿಎಸ್ ಎಲ್ಸಿಡಿ ಪ್ಯಾನೆಲ್‌ ಡಿಸ್‌ಪ್ಲೇ ಆಗಿದ್ದು, ಸ್ಕ್ರೀನ್-ಟು-ಬಾಡಿ ಅನುಪಾತ 92% ಇದೆ. ಇದಲ್ಲದೆ ಡಿಸ್‌ಪ್ಲೇಯು 391PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದಲ್ಲದೆ ಹಿಸಿಲಿಕಾನ್‌ ಕಿರಿನ್‌810 SOC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮತ್ತು ಬ್ಯಾಟರಿ

ಕ್ಯಾಮೆರಾ ಮತ್ತು ಬ್ಯಾಟರಿ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ f/ 1.8ಲೆನ್ಸ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೂಪರ್ ವೈಡ್ ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಅಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಹಾನರ್ 9 ಎಕ್ಸ್ ಪ್ರೊ 4,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ವೈ-ಫೈ, ಬ್ಲೂಟೂತ್, ಆಂಬಿಯೆಂಟ್ ಲೈಟ್ ಸೆನ್ಸರ್ ಅನ್ನು ಬೆಂಬಲಿಸಲಿದೆ.

ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆ ಮತ್ತು ಲಭ್ಯತೆ

ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆ ಮತ್ತು ಲಭ್ಯತೆ

ಹಾನರ್ ವ್ಯೂ 30 ಪ್ರೊ ಬೆಲೆ CNY 3,899 (ಸುಮಾರು ರೂ. 39,000) ಆಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಹಾನರ್ 9X ಪ್ರೊ ಯುರೋ 249 (ಅಂದಾಜು ರೂ. 19,400) ಬೆಲೆಯನ್ನ ಹೊಂದಿರುವ ಸಾಧ್ಯತೆ ಇದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಇದೇ ಮಾರ್ಚ್ ತಿಂಗಳಿನಿಂದ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಅಲ್ಲದೆ ಮಿಡ್‌ನೈಟ್ ಬ್ಲ್ಯಾಕ್ ಮತ್ತು ಫ್ಯಾಂಟಮ್ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
As part of the launch, the company also shared relevant information regarding the Honor View 30 Pro and 9X Pro specifications, features, price, and availability.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X