ಹಾನರ್ x10 ಸ್ಮಾರ್ಟ್‌ಫೋನ್ ಬಿಡುಗಡೆ! ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ವಿಶೇಷ!
ಚೀನಾದ ಟೆಕ್ ದೈತ್ಯ ಹುವಾವೇ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಪ್ರಸಿದ್ಧಿಯನ್ನ ಪಡೆದುಕೊಂಡಿದೆ. ತನ್ನ ವಿಶೇಷ ವಿನ್ಯಾಸ ಹಾಗೂ ಸ್ಮಾರ್ಟ್‌ಫೋನ್ ಮಾದರಿಯಿಂದ ಜಾಗತಿಕವಾಗಿ ಜನಪ್ರಿಯತೆಯನ್ನ ಸಾಧಿಸಿದೆ. ಇನ್ನು ಹುವಾವೇ ಕಂಪೆನಿ ತನ್ನ ಸಬ್‌ಬ್ರ್ಯಾಂಡ್ ಹಾನರ್ ಸ್ಮಾರ್ಟ್‌ಫೋನ್‌ಗಳನ್ನು ಸಹ ಪರಿಚಯಿಸಿ ಸೈ ಎನಿಸಿಕೊಂಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಹಾನರ್ ಬ್ರ್ಯಾಂಡ್ ಹೆಸರಿನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಹಾನರ್ ಬಿಡುಗಡೆ ಮಾಡಿದೆ.

ಹೌದು, ಹಾನರ್ ಕಂಪೆನಿ ತನ್ನ ಹೊಸ ಹಾನರ್ x10 ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 5G ನೆಟ್‌ವರ್ಕ್ ಅನ್ನು ಬೆಂಬಲಿಸಲಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕಿರಿನ್ 820SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಹಾನರ್ x10 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.63-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್ ಎಚ್‌ಡಿ + ರೆಸಲ್ಯೂಶನ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಈ ಡಿಸ್‌ಪ್ಲೇ ಬಾಡಿ ಟು ರೇಶಿಯೋ 92% ಸ್ಕ್ರೀನ್ ಅನ್ನು ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕಿರಿನ್ 820 SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6 GB RAM + 64 GB ಮತ್ತು 6 GB RAM + 128GB ಹಾಗೂ 8GB RAM + 128GB ಆಂತರಿಕ ಸಂಗ್ರಹ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಹಾನರ್ x10 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 40 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,300mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 22.5W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4GLTE , ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ V5.1 ಮತ್ತು GPS ಅನ್ನು ಬೆಂಬಲಿಸಲಿದೆ. ಜೊತೆಗೆ 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಬೆಂಬಲಿಸಲಿದೆ.

ಬೆಲೆ ಮತ್ತು ಇತರೆ
ಹಾನರ್ x10 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 6GB RAM+ 64GB ಸ್ಟೋರೇಜ್ ರೂಪಾಂತರದ ಬೆಲೆ RMB 1,899 (ಅಂದಾಜು 20,200 ರೂ.) 6GB RAM+ 128GB ಸ್ಟೋರೇಜ್ ಆಯ್ಕೆಯ ಸ್ಮಾರ್ಟ್‌ಫೋನ್ RMB 2,199 (ಅಂದಾಜು 23,400 ರೂ.) ಹಾಗೂ 8GB RAM + 128GB ಸಂಗ್ರಹ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಬೆಲೆ RMB 2,399 (ಸರಿಸುಮಾರು 25,500 ರೂ)ಗೆ ಲಭ್ಯವಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಮೇ 26 ರಿಂದ ಮಾರಾಟವಾಗಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಲೈಟ್‌ಸ್ಪೀಡ್ ಸಿಲ್ವರ್, ಪ್ರೋಬಿಂಗ್ ಬ್ಲ್ಯಾಕ್ ಮತ್ತು ರೇಸಿಂಗ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications





