Home
ಸುದ್ದಿಜಾಲ

ಹಾನರ್‌ x10 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

ಚೀನಾದ ಟೆಕ್‌ ದೈತ್ಯ ಹುವಾವೇ ಸಬ್‌ ಬ್ರ್ಯಾಂಡ್‌ ಹಾನರ್‌ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಪ್ರಸಿದ್ಧಿಯಾಗಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದ್ದು, ಗ್ರಾಹಕರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ಇನ್ನು ಈಗಾಗಲೇ ಹಾನರ್‌ x10 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದ್ದು, ಗ್ರಾಹಕರ ನಿರೀಕ್ಷೆ ಕೂಡ ಬೆಟ್ಟದಷ್ಟಿದೆ. ಈ ನಡುವೆ ಹಾನರ್‌ x10 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಹಾನರ್‌ ಸಿದ್ದತೆ ನಡೆಸಿದೆ ಎಂದು ಹೇಳಲಾಗ್ತಿದೆ.

ಹೌದು

ಹೌದು, ಜಾಗತಿಕವಾಗಿ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿರುವ ಹುವಾವೇ ತನ್ನ ಹಾನರ್‌ ಬ್ರ್ಯಾಂಡ್‌ ಅಡಿಯಲ್ಲಿ ಹಾನರ್‌ x10 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಹಾನರ್ 9x ಸ್ಮಾರ್ಟ್‌ಫೋನ್‌ ಮಾದರಿಯಂತೆ ಯಶಸ್ವಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗ್ತಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 5G ಸಂಪರ್ಕವನ್ನು ಬೆಂಬಲಿಸುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೋದು ಟಿಪ್ಸ್ಟರ್ ನಲ್ಲಿ ಲೀಕ್‌ ಆಗಿದೆ. ಸದ್ಯ ಲೀಕ್‌ ಮಾಹಿತಿ ಪ್ರಕಾರ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಹಾನರ್ x10 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರಿನ್‌ ರೆಸಲ್ಯೂಶನ್ ಹೊಂದಿರುವ 6.59 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು 120hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್ ಅನ್ನು ಸಹ ನೀಡಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕಿರಿನ್ 820 SoC ಪ್ರೊಸೆಸರ್‌ ವೇಗವನ್ನ ಪಡೆದುಕೊಮಡಿದ್ದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 4GB RAMಅನ್ನು ಹೊಂದಿದ್ದು, ಇಂಟರ್‌ ಸ್ಟೊರೇಜ್‌ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಣೆ ಬಗ್ಗೆ ಯಾವುದೇ ಮಾಹಿತಿಯನ್ನ ಕಂಪೆನಿ ಬಹಿರಂಗ ಪಡಿಸಿಲ್ಲ.

ಸ್ಮಾರ್ಟಫೋನ್‌

ಇನ್ನು ಈ ಸ್ಮಾರ್ಟಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮೆಗಾಪಿಕ್ಸೆಲ್‌ ಮಾದರಿಯ ಬಗ್ಗೆ ಮಾಹಿತಿ ಲಬ್ಯವಾಗಿಲ್ಲ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 22.5W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಪಂಚ್‌ಹೋಲ್‌ ಮಾದರಿ ಹಾಗೂ ವಾಟರ್‌ಡ್ರಾಪ್‌ ನಾಚ್‌ ಶೈಲಿಯನ್ನ ಹೊಂಡಿದೆಲಿದೆ ಎಂದಯ ಹೇಳಲಾಗಿದೆ. ಜೊತೆಗೆ ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ಹೊಂದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
A mysterious Huawei phone likely to be Honor X10 were spotted on TENAA and MIIT website.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+