Home
ಸುದ್ದಿಜಾಲ

ಹಾನರ್‌ X40 GT ಫೋನ್‌ ಲಾಂಚ್‌!..66W ವೇಗದ ಚಾರ್ಜಿಂಗ್‌ ವಿಶೇಷ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಬ್ರ್ಯಾಂಡ್‌ಗಳಲ್ಲಿ ಹಾನರ್‌ ಕಂಪೆನಿ ಕೂಡ ಒಂದು. ಕೆಲವು ವಿಶೇಷ ಫೀಚರ್ಸ್‌ಗಳನ್ನು ಒಳಗೊಂಡ ಸ್ಮಾರ್ಟ್‌ಫೋನ್‌ಗಳ ಮೂಲಕ ದೈತ್ಯ ಕಂಪೆನಿಗಳಿಗೂ ಪೈಪೋಟಿ ನೀಡುವ ಹಾದಿಯಲ್ಲಿ ಸಾಗಿದೆ. ಅದೇ ಹಾದಿಯಲ್ಲಿ ಇದೀಗ ಹೊಸ ಹಾನರ್‌ X40 GT ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ.

ಹಾನರ್‌ X40 GT

ಹೌದು, ಹಾನರ್‌ ಕಂಪೆನಿ ಹೊಸ ಹಾನರ್‌ X40 GT ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 144Hz ರಿಪ್ರೆಶ್‌ ರೇಟ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 4,800mAh ಬ್ಯಾಟರಿ ಸಾಮರ್ಥ್ಯ ಒಳಗೊಂಡಿದ್ದು, 66W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ ವಿವರ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಹಾನರ್‌ X40 GT ಸ್ಮಾರ್ಟ್‌ಫೋನ್‌ 6.81 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇ ಹೊಂದಿದೆ. ಇದು 1080 x 2388 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಈ ಡಿಸ್‌ಪ್ಲೇ 89.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದ್ದು, 385 ಪಿಪಿಐ ಸಾಂದ್ರತೆ ಹೊಂದಿದೆ. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಮತ್ತು 480Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲವನ್ನು ಹೊಂದಿದೆ.

ಪ್ರೊಸೆಸರ್‌ ಬಲವೇನು?

ಪ್ರೊಸೆಸರ್‌ ಬಲವೇನು?

ಹಾನರ್‌ X40 GT ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಆಧಾರಿತ ಮ್ಯಾಜಿಕ್ UI 6.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ RAM ಅನ್ನು ಹೆಚ್ಚುವರಿ 7GB ವರೆಗೆ ವಿಸ್ತರಿಸಬಹುದು. ಇದು ಗೇಮಿಂಗ್‌ಗೆ ಪೂರಕವಾದ ಫೀಚರ್ಸ್‌ಗಳನ್ನು ಕೂಡ ಒಳಗೊಂಡಿದೆ.

ತ್ರಿವಳಿ ಕ್ಯಾಮೆರಾ

ತ್ರಿವಳಿ ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮೆರಾದಲ್ಲಿ ಎಲ್ಇಡಿ ಫ್ಲ್ಯಾಷ್ ಅನ್ನು ಕೂಡ ಅಳವಡಿಸಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಹಾನರ್‌ X40 GT ಸ್ಮಾರ್ಟ್‌ಫೋನ್‌ 4,800mAh ಬ್ಯಾಟರಿ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 66W ವೇಗ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್, Wi-Fi, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ನೀಡಲಾಗಿದೆ. ಜೊತೆಗೆ ಅಕ್ಸೆಲೆರೊಮೀಟರ್, ಗೈರೊ ಮೀಟರ್‌, ಕಂಪಾಸ್‌, ವರ್ಚುವಲ್ ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹಾನರ್‌ X40 GT ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 8GB RAM + 256GB ಸ್ಟೋರೇಜ್ ಆಯ್ಕೆಗೆ CNY 1,999 (ಅಂದಾಜು 22,900ರೂ) ಬೆಲೆ ಹೊಂದಿದೆ. ಹಾಗೆಯೇ ಇದರ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು CNY 2,299 (ಸುಮಾರು 26,300ರೂ) ಬೆಲೆ ಪಡೆದುಕೊಂಡಿದೆ. ಇನ್ನು ಈ ಫೋನ್‌ ಅನ್ನು ಮ್ಯಾಜಿಕ್ ನೈಟ್ ಬ್ಲ್ಯಾಕ್, ರೇಸಿಂಗ್ ಬ್ಲ್ಯಾಕ್ ಮತ್ತು ಟೈಟಾನಿಯಂ ಎಂಪ್ಟಿ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನಿನ ಜಾಗತಿಕ ಲಬ್ಯತೆ ಮತ್ತು ಬೆಲೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇನ್ನು ಕೂಡ ಬಹಿರಂಗವಾಗಿಲ್ಲ.

Best Mobiles in India

English summary
Honor X40 GT With 66W Fast Charging Support Launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+