Home
ಸುದ್ದಿಜಾಲ

ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಹಾನರ್‌ X5! ಪ್ರೊಸೆಸರ್‌ ಯಾವುದು?

ಹಾನರ್‌ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸ್ಟೈಲಿಶ್‌ ಲುಕ್‌, ವೈವಿಧ್ಯಮಯ ಡಿಸೈನ್‌ಗಳಿಗೆ ಹಾನರ್‌ ಫೋನ್‌ಗಳು ಹೆಸರುವಾಸಿಯಾಗಿವೆ. ಸದ್ಯ ಇದೀಗ ಹಾನರ್‌ ಕಂಪೆನಿ ಟೆಕ್ ಮಾರುಕಟ್ಟೆಯಲ್ಲಿ ಸದ್ದಿಲ್ಲದೆ ಹೊಸ ಹಾನರ್‌ X5 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕೆಲವು ಆಯ್ದ ಮಾರುಕಟ್ಟೆಗಳಲ್ಲಿ ಮಾತ್ರ ಬಿಡುಗಡೆಯಾಗಿದೆ. ಇನ್ನು ಹಾನರ್‌ X5 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G25SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹಾನರ್‌

ಹೌದು, ಹಾನರ್‌ ಕಂಪೆನಿ ಹೊಸ ಹಾನರ್‌ X5 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಪಡೆದಿದೆ. ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗೆಯೇ 2GB RAM ಮತ್ತು 32GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಹಾನರ್‌ X5 ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ವೀಡಿಯೋ ಕರೆ ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಹಾನರ್‌ X5 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G25SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 Go ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ಪಡೆದಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಹಾನರ್‌ X5 ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಒಳಗೊಂಡಿದೆ. ಇದು LED ಫ್ಲಾಷ್‌ ಅನ್ನು ಬೆಂಬಲಿಸಲಿದೆ. ಇದು 1080p ವೀಡಿಯೊ ಶೂಟಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 5ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಹಾನರ್‌ X5 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಡಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಮೈಕ್ರೋ USB ಪೋರ್ಟ್, 3.5mm ಜ್ಯಾಕ್, VoLTE, ವೈಫೈ, ಬ್ಲೂಟೂತ್ ಮತ್ತು ಡ್ಯುಯಲ್ ಸಿಮ್ ಅನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹಾನರ್‌ X5 ಸ್ಮಾರ್ಟ್‌ಫೋನ್‌ ಆಯ್ದ ಮಾರುಕಟ್ಟೆಗಳಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಬೆಲೆ ಅಂದಾಜು 99 ಯುರೋಗಳಿಗೆ ನಿಗದಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸನ್‌ರೈಸ್‌ ಆರೇಂಜ್‌, ಒಶಿಯನ್‌ ಬ್ಲೂ, ಮಿಡ್‌ನೈಟ್‌ ಬ್ಲ್ಯಾಕ್‌ ಬಣ್ಣಗಳಲ್ಲಿ ನೀಡಲಾಗುತ್ತದೆ.

ಹಾನರ್‌

ಇದಲ್ಲದೆ ಹಾನರ್‌ ಕಂಪೆನಿ ಇತ್ತೀಚಿಗೆ ಹಾನರ್‌ X40 GT ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಹಾನರ್‌ X40 GT ಸ್ಮಾರ್ಟ್‌ಫೋನ್‌ 6.81 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 144Hz ರಿಪ್ರೆಶ್‌ ರೇಟ್‌ ಬೆಂಬಲಿಸಲಿದೆ. ಇದು 4,800mAh ಬ್ಯಾಟರಿ ಸಾಮರ್ಥ್ಯ ಒಳಗೊಂಡಿದ್ದು, 66W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ.

Best Mobiles in India

English summary
Honor X5 With Android 12 Go Launched In global market
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+