ಗ್ರ್ಯಾಂಡ್ ಎಂಟ್ರಿ ಕೊಟ್ಟ ಹಾನರ್ X50i ಪ್ಲಸ್! ಮಾರುಕಟ್ಟೆಯಲ್ಲಿ ಕಮಾಲ್ ಮಾಡುತ್ತಾ!
ಹಾನರ್ ಕಂಪೆನಿ ಮತ್ತೊಂದು ಸ್ಮಾರ್ಟ್‌ಫೋನ್ ಮೂಲಕ ಕಮಾಲ್ ಮಾಡುವ ಸೂಚನೆ ನೀಡಿದೆ. ಅದಕ್ಕೆ ತಕ್ಕಂತೆ ಹಾನರ್ X50i ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಟೆಕ್ ವಲಯದಲ್ಲಿ ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಕಾರ್ಯದಕ್ಷತೆಯನ್ನು ಪಡೆದಿದೆ. ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ.
ಹೌದು, ಹಾನರ್ X50i ಪ್ಲಸ್ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ ನೀಡುವ ಮೂಲಕ ಭಾರಿ ಸಂಚಲನ ಸೃಷ್ಟಿಸಿದೆ. ಇನ್ನು ಸ್ಮಾರ್ಟ್‌ಫೋನ್ 90Hz ರಿಫ್ರೆಶ್ ರೇಟ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 35W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ X50i ಪ್ಲಸ್ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಹಾನರ್ X50i ಪ್ಲಸ್ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 3240Hz PWM ಡಿಮ್ಮಿಂಗ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 2,000 ನೀಟ್ಸ್ ಬ್ರೈಟ್‌ನೆಸ್ ಅನ್ನು ಉತ್ಪಾದಿಸಲಿದೆ.
ಹಾನರ್ X50i ಪ್ಲಸ್ ಪ್ರೊಸೆಸರ್ ಯಾವುದು?
ಹಾನರ್ X50i ಪ್ಲಸ್ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಮ್ಯಾಜಿಕ್ OS-ಆಧಾರಿತ ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ 8GB ವರ್ಚುವಲ್ RAM ಅನ್ನು ಒಳಗೊಂಡಿದೆ.

ಹಾನರ್ X50i ಪ್ಲಸ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ಹಾನರ್ X50i ಪ್ಲಸ್ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಎಲ್ಇಡಿ ಫ್ಲ್ಯಾಷ್ ಅನ್ನು ಹೊಂದಿದೆ.
ಹಾನರ್ X50i ಪ್ಲಸ್ ಬ್ಯಾಟರಿ ಮತ್ತು ಇತರೆ
ಹಾನರ್ X50i ಪ್ಲಸ್ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 35W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್,ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಒಳಗೊಂಡಿದೆ. ಇದರೊಂದಿಗೆ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ.

ಹಾನರ್ X50i ಪ್ಲಸ್ ಬೆಲೆ ಮತ್ತು ಲಭ್ಯತೆ
ಹಾನರ್ X50i ಪ್ಲಸ್ ಸ್ಮಾರ್ಟ್‌ಫೋನ್ ಚೀನಾದಲ್ಲಿ ಮಾತ್ರ ಅನಾವರಣಗೊಂಡಿದೆ. ಆದರಿಂದ ಇದರ 12GB RAM + 256GB ಸ್ಟೋರೇಜ್ ಆಯ್ಕೆಯು ಸಂಗ್ರಹಣೆ ಮತ್ತು 12 GB RAM + 512 GB ಸಂಗ್ರಹಣೆಯಂತಹ ಎರಡು ಕಾನ್ಫಿಗರೇಶನ್‌ಗಳಲ್ಲಿ ಚೀನಾಕ್ಕೆ ಆಗಮಿಸಿದೆ. ಈ ರೂಪಾಂತರಗಳ ಬೆಲೆ ಕ್ರಮವಾಗಿ 1,599 ಯುವಾನ್ (ಅಂದಾಜು 18,260ರೂ) ಮತ್ತು 1,799 ಯುವಾನ್ (ಅಂದಾಜು 20,545ರೂ) ಬೆಲೆಯನ್ನು ಪಡೆದಿದೆ. ಇದು ಗುಲಾಬಿ, ನೀಲಿ, ಹಸಿರು ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications