ಹಾನರ್‌ನಿಂದ ಹೊಸ ಸ್ಮಾರ್ಟ್‌ಫೋನ್ ಲಾಂಚ್!..ಸ್ಟೈಲಿಶ್ ಡಿಸೈನ್‌ಗೆ ಗ್ರಾಹಕರು ಫಿದಾ!
ಹಾನರ್ ಕಂಪೆನಿಯ ಫೋನ್‌ಗಳು ಸಖತ್ ಸ್ಟೈಲಿಶ್ ಹಾಗೂ ಟ್ರೆಂಡಿ ಲುಕ್‌ಗೆ ಹೆಸರುವಾಸಿಯಾಗಿವೆ. ಇದೇ ಕಾರಣಕ್ಕೆ ಗ್ಲೋಬಲ್ ಮಾರುಕಟ್ಟೆಯಲ್ಲಿ ತನ್ನದೇ ಆದ ಪ್ರಾಬಲ್ಯವನ್ನು ಸಾಧಿಸಿದೆ. ಸದ್ಯ ಇದೀಗ ತನ್ನ ಹೊಸ ಹಾನರ್ X50i ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಟೆಕ್ ವಲಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.
ಹೌದು, ಹಾನರ್ X50i ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಮಿಡಿಯಾಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಒಳಗೊಂಡಿದೆ? ಇದರ ವಿಶೇಷತೆ ಏನು? ಇದೆಲ್ಲದರ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ X50i ಡಿಸ್‌ಪ್ಲೇ ರಚನೆ ಹೇಗಿದೆ?
ಹಾನರ್ X50i ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080x2,388 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 19.9:9 ರಚನೆಯ ಅನುಪಾತವನ್ನು ಹೊಂದಿದೆ.
ಹಾನರ್ X50i ಪ್ರೊಸೆಸರ್ ಯಾವುದು?
ಹಾನರ್ X50i ಸ್ಮಾರ್ಟ್‌ಫೋನ್ ಅಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ MagicOS 7.1 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ವರ್ಚುವಲ್ RAM ವಿಸ್ತರಣೆಗೆ ಕೂಡ ಅವಕಾಶ ನೀಡಲಾಗಿದೆ.

ಹಾನರ್ X50i ಕ್ಯಾಮೆರಾ ಸೆಟ್‌ಅಪ್
ಹಾನರ್ X50i ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಎಲ್ಇಡಿ ಫ್ಲ್ಯಾಷ್ ಅನ್ನು ಕೂಡ ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಹಾನರ್ X50i ಬ್ಯಾಟರಿ ಬ್ಯಾಕ್‌ಅಪ್ ಹೇಗಿದೆ?
ಹಾನರ್ X50i ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 35W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11a/b/g/n/ac, ಬ್ಲೂಟೂತ್ 5, GPS, AGPS, Beidou, Glonass ಮತ್ತು USB Type-C ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸಾರ್, ಕಂಪಾಸ್, ಪ್ರಾಕ್ಸಿಮಿಟಿ ಲೈಟ್ ಸೆನ್ಸಾರ್ ಅನ್ನು ಹೊಂದಿದೆ.
ಹಾನರ್ X50i ಬೆಲೆ ಮತ್ತು ಲಭ್ಯತೆ
ಹಾನರ್ X50i ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 1,399 (ಸುಮಾರು 16,600ರೂ) ಬೆಲೆ ಪಡೆದಿದೆ. ಇನ್ನು ಇದರ ಟಾಪ್-ಎಂಡ್ 12GB RAM + 256GB ಸ್ಟೋರೇಜ್ ಮಾಡೆಲ್ ಆಯ್ಕೆಯು CNY 1,699 (ಸುಮಾರು 20,000ರೂ)ಬೆಲೆ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಅನ್ನು ಏಪ್ರಿಕಾಟ್ ಫ್ಲವರ್ ಫೆದರ್, ಮ್ಯಾಜಿಕ್ ನೈಟ್ ಬ್ಲ್ಯಾಕ್, ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದು. ಈ ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.


Click it and Unblock the Notifications








