Home
ಸುದ್ದಿಜಾಲ

ಸದ್ದಿಲ್ಲದೆ ಎಂಟ್ರಿ ಕೊಟ್ಟ ಹಾನರ್‌ X7b ಸ್ಮಾರ್ಟ್‌ಫೋನ್‌!..108MP ಕ್ಯಾಮೆರಾ ಆಯ್ಕೆ!

ಸ್ಮಾರ್ಟ್‌ಫೋನ್‌ ವಲಯದಲ್ಲಿ ಹಾನರ್‌ ಕಂಪೆನಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಎಲ್ಲರ ಗಮನಸೆಳೆದಿದೆ. ಇದಿಗ ಸದ್ದಿಲ್ಲದೆ ಹೊಸ ಹಾನರ್‌ X7b ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಹಾನರ್‌ X7b ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 35W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗಾದ್ರೆ ಹಾನರ್‌ X7b ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್‌ ನೀಡಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ದಿಲ್ಲದೆ ಎಂಟ್ರಿ ಕೊಟ್ಟ ಹಾನರ್‌ X7b ಸ್ಮಾರ್ಟ್‌ಫೋನ್‌!108MP ಕ್ಯಾಮೆರಾ ಆಯ್ಕೆ

ಹಾನರ್‌ X7b ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಹಾನರ್‌ X7b ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಜೊತೆಗೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದ್ದು, 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 87.3% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿದೆ.

ಹಾನರ್‌ X7b ಪ್ರೊಸೆಸರ್‌ ಯಾವುದು?
ಹಾನರ್‌ X7b ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಮ್ಯಾಜಿಕ್ಓಎಸ್ 7.2 ನೊಂದಿಗೆ ಬರಲಿದೆ. ಹಾಗೆಯೇ 6GB RAM + 128GB ಮತ್ತು 8GB RAM + 256GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಿದೆ.

ಸದ್ದಿಲ್ಲದೆ ಎಂಟ್ರಿ ಕೊಟ್ಟ ಹಾನರ್‌ X7b ಸ್ಮಾರ್ಟ್‌ಫೋನ್‌!108MP ಕ್ಯಾಮೆರಾ ಆಯ್ಕೆ

ಹಾನರ್‌ X7b ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಹಾನರ್‌ X7b ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಹಾನರ್‌ X7b ಬ್ಯಾಟರಿ ಮತ್ತು ಇತರೆ
ಹಾನರ್‌ X7b ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 35W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ವರ್ಚುವಲ್ ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ಸದ್ದಿಲ್ಲದೆ ಎಂಟ್ರಿ ಕೊಟ್ಟ ಹಾನರ್‌ X7b ಸ್ಮಾರ್ಟ್‌ಫೋನ್‌!108MP ಕ್ಯಾಮೆರಾ ಆಯ್ಕೆ

ಹಾನರ್‌ X7b ಬೆಲೆ ಮತ್ತು ಲಭ್ಯತೆ
ಹಾನರ್‌ X7b ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಆದರಿಂದ ಇದರ ಬೇಸ್‌ ಮಾಡೆಲ್‌ Honor X7b ಅನ್ನು ಫ್ಲೋಯಿಂಗ್ ಸಿಲ್ವರ್, ಎಮರಾಲ್ಡ್ ಗ್ರೀನ್ ಮತ್ತು ಮಿಡ್ನೈಟ್ ಬ್ಲಾಕ್ ಬಣ್ಣಗಳಲ್ಲಿ ನೀಡಲಾಗುತ್ತದೆ. ಇದರ ಬೆಲೆ $249 (ಅಂದಾಜು 20,721ರೂ) ಆಗಿದೆ. ಆದರೆ ಮಾರುಕಟ್ಟೆ ಪ್ರದೇಶವನ್ನು ಅವಲಂಬಿಸಿ ಬೆಲೆ ಬದಲಾಗುತ್ತದೆ ಎನ್ನಲಾಗಿದೆ. ಇದು ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಹಾನರ್‌ ಇತ್ತೀಚಿಗೆ ಭಾರತಕ್ಕೆ ರೀ ಎಂಟ್ರಿ ನೀಡಿರುವುದರಿಂದ ಈ ಸ್ಮಾರ್ಟ್‌ಫೋನ್‌ ಕೂಡ ಭಾರತಕ್ಕೆ ಬರುವ ಸಾಧ್ಯತೆಯಿದೆ.

Best Mobiles in India

English summary
Honor X7b Smartphone With Triple Rear Cameras Launched Globally
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+