ಹಾನರ್ X8a ಸ್ಮಾರ್ಟ್‌ಫೋನ್ ಬಿಡುಗಡೆ! 100 ಮೆಗಾಪಿಕ್ಸೆಲ್ ಕ್ಯಾಮೆರಾ ವಿಶೇಷ?
ಜಾಗತಿಕ ಮಾರುಕಟ್ಟೆಯಲ್ಲಿ ಹಾನರ್ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಹಾನರ್ ಕಂಪೆನಿ ತನ್ನ ವಿಭಿನ್ನ ಶ್ರೇಣಿಯ ಹಾಗೂ ಸ್ಟೈಲಿಶ್ ಲುಕ್ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಹಾನರ್ X8a ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ.

ಹೌದು, ಹಾನರ್ ಕಂಪೆನಿಯ ಹಾನರ್ X8a ಸ್ಮಾರ್ಟ್‌ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 22.5W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಹಾನರ್ X8a ಡಿಸ್‌ಪ್ಲೇ ವಿನ್ಯಾಸ ಹೇಗಿದೆ?
ಹಾನರ್ X8a ಸ್ಮಾರ್ಟ್‌ಫೋನ್ 6.7 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2388 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 89.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 391ಪಿಪಿಐ ಸಾಂದ್ರತೆಯನ್ನು ಹೊಂದಿದೆ.

ಹಾನರ್ X8a ಪ್ರೊಸೆಸರ್ ಯಾವುದು?
ಹಾನರ್ X8a ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಮ್ಯಾಜಿಕ್ UI 6.1 ಔಟ್ ಆಪ್ ದಿ ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದಿಲ್ಲ ಎಂದು ಹೇಳಲಾಗಿದೆ.
ಹಾನರ್ X8a ಕ್ಯಾಮೆರಾ ಸೆಟ್‌ಅಪ್ ಏನಿದೆ?
ಹಾನರ್ X8a ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಹಾನರ್ X8a ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ಹಾನರ್ X8a ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 22.5W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
ಹಾನರ್ X8a ಬೆಲೆ ಎಷ್ಟು?
ಹಾನರ್ X8a ಸ್ಮಾರ್ಟ್‌ಫೋನ್ 6GB RAM + 128GB ಇಂಟರ್ ಸ್ಟೋರೇಜ್ ರೂಪಾಂತರದ ಆಯ್ಕೆಗೆ EUR 220 (ಸುಮಾರು 19,500ರೂ)ಬೆಲೆಗೆ ನಿಗದಿಪಡಿಸಲಾಗಿದೆ. ಇನ್ನು ಮಲೇಷಿಯಾದ ಗ್ರಾಹಕರು ಪ್ರಸ್ತುತ 8GB RAM + 128GB ಇಂಟರ್ ಸ್ಟೋರೇಜ್ ಆಯ್ಕೆಯು RM 999 (ಸುಮಾರು 19,200ರೂ)ಬೆಲೆಯಲ್ಲಿ ಫ್ರೀ ಆರ್ಡರ್‌ಗೆ ಲಭ್ಯವಿದೆ. ಇನ್ನು ಫೆಬ್ರವರಿ 14 ರ ಮೊದಲು ಹಾನರ್ X8a ಸ್ಮಾರ್ಟ್‌ಫೋನ್ ಅನ್ನು ಫ್ರೀ ಆರ್ಡರ್ ಮಾಡುವ ಬಳಕೆದಾರರು ಹಾನರ್ ಬ್ಯಾಂಡ್ 6 ಅನ್ನು ಸಹ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡ್‌ನೈಟ್ ಬ್ಲ್ಯಾಕ್, ಟೈಟಾನಿಯಂ ಸಿಲ್ವರ್ ಮತ್ತು ಸಿಯಾನ್ ಲೇಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








