ಸೈಲೆಂಟ್ ಆಗಿ ಎಂಟ್ರಿ ಕೊಟ್ಟ ಹಾನರ್ x8b ಸ್ಮಾರ್ಟ್‌ಫೋನ್! ಫೀಚರ್ಸ್ ಮಾತ್ರ ಚಿಂದಿ!
ಹಾನರ್ ಕಂಪೆನಿ ಸೈಲೆಂಟ್ ಆಗಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್ ಅನ್ನು ಹಾನರ್ x8b ಎಂದು ಹೆಸರಿಸಲಾಗಿದ್ದು, ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌ನಲ್ಲಿದೆ.
ಹೌದು, ಹಾನರ್ x8b ಸ್ಮಾರ್ಟ್‌ಫೋನ್ ಟೆಕ್ ವಲಯದಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ. 50 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಒಳಗೊಂಡಿರುವುದು ಎಲ್ಲರ ಗಮನಸೆಳೆಯುವಂತೆ ಮಾಡಿದೆ. ಇನ್ನು ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದ್ದು, 35W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗಾದ್ರೆ ಹಾನರ್ x8b ಸ್ಮಾರ್ಟ್‌ಫೋನ್ ಏನೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹಾನರ್ x8b ಡಿಸ್‌ಪ್ಲೇ ರಚನೆ
ಹಾನರ್ x8b ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2412 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 3240Hz ಪಿಡಬ್ಲ್ಯೂಎಂ ಡಿಮ್ಮಿಂಗ್ ಅನ್ನು ಬೆಂಬಲಿಸಲಿದೆ. ಜೊತೆಗೆ 2,000 ನಿಟ್‌ಗಳವರೆಗೆ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.
ಹಾನರ್ x8b ಪ್ರೊಸೆಸರ್ ಯಾವುದು?
ಹಾನರ್ x8b ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 ಮತ್ತು ಮ್ಯಾಜಿಕ್ ಓಎಸ್ 7.2 ಯುಐನಲ್ಲಿ ರನ್ ಆಗಲಿದೆ. ಹಾಗೆಯೇ 8GB RAM + 128GB ಸಂಗ್ರಹಣೆ, 8GB RAM + 256GB ಸಂಗ್ರಹಣೆ, ಮತ್ತು 8GB RAM + 512GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೆರಿಯೆಂಟ್ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಹಾನರ್ x8b ಕ್ಯಾಮೆರಾ ಸೆಟಪ್ ಏನಿದೆ?
ಹಾನರ್ x8b ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಹಾನರ್ x8b ಬ್ಯಾಟರಿ ಮತ್ತು ಇತರೆ
ಹಾನರ್ x8b ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದ್ದು, 35W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VolTE, ವೈ-ಫೈ 802.11 ಎಸಿ, ಬ್ಲೂಟೂತ್ 5.0 ಜಿ, ಜಿಪಿಎಸ್, ಯುಎಸ್‌ಬಿ-ಸಿ ಪೋರ್ಟ್ ಮತ್ತು ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಫೀಚರ್ಸ್‌ಗಳೊಂದಿಗೆ ಬರಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಒಳಗೊಂಡಿದೆ.

ಹಾನರ್ x8b ಬೆಲೆ ಮತ್ತು ಲಭ್ಯತೆ
ಹಾನರ್ x8b ಸ್ಮಾರ್ಟ್‌ಫೋನ್ $240 (ಅಂದಾಜು 19,916ರೂ) ಆರಂಭಿಕ ಬೆಲೆಯಲ್ಲಿ ಲಭ್ಯವಾಗಲಿದೆ. ಇದು ಮಿಡ್ನೈಟ್ ಬ್ಲ್ಯಾಕ್, ಟೈಟಾನಿಯಂ ಬೆಳ್ಳಿ ಮತ್ತು ಮನಮೋಹಕ ಹಸಿರು ಕಲರ್ ಆಯ್ಕೆಗಳಲ್ಲಿ ಬರಲಿದೆ. ಇನ್ನು ಸ್ಮಾರ್ಟ್‌ಫೋನ್ ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ಇನ್ನು ಇತ್ತೀಚಿಗೆ ಹಾನರ್ ಕಂಪೆನಿ ಹಾನರ್ ಮ್ಯಾಜಿಕ್ 6 ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಫೋನ್‌ನ ಡಿಸ್‌ಪ್ಲೇ ಆಂಟಿ ಬೌನ್ಸ್ ಡಿಸ್‌ಪ್ಲೇ ಟೆಕ್ನಾಲಜಿಯನ್ನು ಹೊಂದಿದ್ದು, 360-ಡಿಗ್ರಿ ಪ್ರೊಟೆಕ್ಷನ್‌ನೊಂದಿಗೆ ಬರಲಿದೆ.


Click it and Unblock the Notifications








