Home
ಸುದ್ದಿಜಾಲ

ಇಂದು ಹಾನರ್‌ X9b 5G ಫಸ್ಟ್‌ ಸೇಲ್‌!..ಭರ್ಜರಿ ಆಫರ್‌ ಕೂಡಾ ಲಭ್ಯ!

ಹಾನರ್‌ ಮೊಬೈಲ್ ಸಂಸ್ಥೆಯ ಹೊಸದಾಗಿ ಭಾರತದಲ್ಲಿ ಬಿಡುಗಡೆ ಮಾಡಿರುವ ಹಾನರ್‌ X9b 5G (Honor X9b 5G) ಮೊಬೈಲ್‌ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಫೆ. 16) ಮಧ್ಯಾಹ್ನ 12 ರಿಂದ ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ ಮೂಲಕ ಮೊದಲ ಮಾರಾಟ ಆರಂಭಿಸಲಿದೆ.

ಹೌದು, ಹಾನರ್‌ X9b 5G ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮೊದಲ ಸೇಲ್‌ ಶುರು ಮಾಡಲಿದೆ. ಈ ಫೋನ್‌ 108 ಮೆಗಾ ಪಿಕ್ಸಲ್‌ ಪ್ರಾಥಮಿಕ ಕ್ಯಾಮೆರಾ ರಚನೆ ಪಡೆದಿದ್ದು, 5800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಇನ್ನು ಈ ಫೋನಿನ 25,999ರೂ. ಪ್ರೈಸ್‌ಟ್ಯಾಗ್‌ ಹೊಂದಿದ್ದು, ಎಕ್ಸ್‌ಚೇಂಜ್‌ ಹಾಗೂ ಬ್ಯಾಂಕ್‌ ಆಫರ್‌ ಸಹ ಗ್ರಾಹಕರಿಗೆ ದೊರೆಯುತ್ತದೆ.

ಇಂದು ಹಾನರ್‌ X9b 5G ಫಸ್ಟ್‌ ಸೇಲ್‌!..ಭರ್ಜರಿ ಆಫರ್‌ ಕೂಡಾ ಲಭ್ಯ!

ಇನ್ನು ಈ ಫೋನ್‌ ಸ್ನಾಪ್‌ಡ್ರಾಗನ್‌ 6 ಜೆನ್‌ 1 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದು 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಹಾಗದರೇ ಹಾನರ್‌ X9b 5G ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಹಾನರ್‌ X9b 5G - ಫೀಚರ್ಸ್‌

ಹಾನರ್‌ X9b 5G ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1200 x 2652 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇಯು 19.9:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಸಪೋರ್ಟ್‌ ಮಾಡುತ್ತದೆ.

ಇಂದು ಹಾನರ್‌ X9b 5G ಫಸ್ಟ್‌ ಸೇಲ್‌!..ಭರ್ಜರಿ ಆಫರ್‌ ಕೂಡಾ ಲಭ್ಯ!

ಹಾನರ್‌ನ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 6 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ MagicOS 7.2 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ.

ಈ ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನಲ್ಲಿ ಇದೆ. ದ್ವಿತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್ ಮತ್ತು ಡೆಪ್ತ್ ಸೆನ್ಸಾರ್‌ ಹಾಗೂ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಅಲ್ಲದೇ 8x ವರೆಗೆ ಡಿಜಿಟಲ್ ಜೂಮ್ ಸೌಲಭ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಹಾನರ್‌ X9b 5G ಮೊಬೈಲ್‌ 5,800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಅನುಗುಣವಾಗಿ 35W ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ ಗ್ರಾವಿಟಿ ಸೆನ್ಸರ್, ಫಿಂಗರ್‌ಪ್ರಿಂಟ್ ಸೆನ್ಸರ್, ಗೈರೊಸ್ಕೋಪ್, ಕಂಪಾಸ್‌, ಆಂಬಿಯೆಂಟ್ ಲೈಟ್ ಸೆನ್ಸರ್ ಅನ್ನು ಕಾಣಬಹುದಾಗಿದೆ.

ಈ ಮೊಬೈಲ್‌ 8GB + 256GB ಸ್ಟೋರೇಜ್ ಆಯ್ಕೆಯನ್ನು ಹೊಂದಿದ್ದು, ಇದರ ಬೆಲೆಯು 25,999ರೂ ಆಗಿದೆ. ಗ್ರಾಹಕರು ಈ ಫೋನ್‌ ಅನ್ನು ICICI ಬ್ಯಾಂಕ್ ಕಾರ್ಡ್ ಬಳಸಿ ಖರೀದಿಸಿದರೆ 3,000ರೂ. ಡಿಸ್ಕೌಂಟ್‌ ದೊರೆಯುತ್ತದೆ. ಇನ್ನು ಇದು ಮಿಡ್‌ನೈಟ್ ಬ್ಲಾಕ್ ಮತ್ತು ಸನ್‌ರೈಸ್ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ. ಈ ಸ್ಮಾರ್ಟ್‌ಫೋನ್‌ ಫೆಬ್ರವರಿ 16 ರಂದು ಅಮೆಜಾನ್ ಮೂಲಕ ಮಾರಾಟ ಆರಂಭಿಸಲಿದೆ.

Best Mobiles in India

English summary
Honor x9b 5G First Sale Today via Amazon India. Check Price and offers and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+