ಭಾರತದಲ್ಲಿ Honor X9b ಸ್ಮಾರ್ಟ್‌ಫೋನ್ ಅನಾವರಣ: ವಾವ್ಹ್ ಎನಿಸುವ ಫೀಚರ್ಸ್!
ಹಾನರ್ ಸಂಸ್ಥೆಯ ಬಹು ನಿರೀಕ್ಷಿತ Honor X9b ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಅಲ್ಟ್ರಾ-ಬೌನ್ಸ್ ಆಂಟಿ-ಡ್ರಾಪ್ 360-ಡಿಗ್ರಿ ತಂತ್ರಜ್ಞಾನವನ್ನು ಹೊಂದಿದೆ. ಇದು ಏರ್‌ಬ್ಯಾಗ್ ಕುಷನಿಂಗ್‌ನೊಂದಿಗೆ ಹನಿಗಳನ್ನು ತಡೆದುಕೊಳ್ಳುವುದಕ್ಕೆ ಸೂಕ್ತವಾಗಿ ವಿನ್ಯಾಸಗೊಳಿಸಲಾಗಿದೆ.
ಹೌದು, Honor X9b ಸ್ಮಾರ್ಟ್‌ಫೋನ್ ಭಾರತದಲ್ಲಿ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ 4nm ಆಧಾರಿತ Qualcomm Snapdragon 6 Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಸಿಂಗಲ್ ಚಾರ್ಜಿಂಗ್‌ನಲ್ಲಿ ಇಡೀ ದಿನ ಬ್ಯಾಟರಿ ಬಾಳಿಕೆಯನ್ನು ನೀಡಲಿದೆ. ಹಾಗಾದ್ರೆ Honor X9b ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Honor X9b ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
Honor X9b ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1200 x 2652 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇಯು 19.9:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಜೊತೆಗೆ 429 PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದ್ದು, 1.07 ಶತಕೋಟಿ ಬಣ್ಣಗಳನ್ನು ಹೊಂದಿದೆ ಮತ್ತು DCI-P3 ಬಣ್ಣದ ಹರವು 100% ಅನ್ನು ಒಳಗೊಂಡಿದೆ.
Honor X9b ಪ್ರೊಸೆಸರ್ ಯಾವುದು?
Honor X9b ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13-ಆಧಾರಿತ MagicOS 7.2 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಮಾಹಿತಿಯಿಲ್ಲ.
Honor X9b ಕ್ಯಾಮೆರಾ ಸೆಟಪ್ ಏನಿದೆ?
Honor X9b ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಮತ್ತು ಡೆಪ್ತ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಹಿಂಭಾಗದ ಕ್ಯಾಮೆರಾ 8x ವರೆಗೆ ಡಿಜಿಟಲ್ ಜೂಮ್ ನೀಡಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
Honor X9b ಬ್ಯಾಟರಿ ಮತ್ತು ಇತರೆ
Honor X9b ಸ್ಮಾರ್ಟ್‌ಫೋನ್ 5800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು 35W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಗ್ರಾವಿಟಿ ಸೆನ್ಸರ್, ಫಿಂಗರ್‌ಪ್ರಿಂಟ್ ಸೆನ್ಸರ್, ಗೈರೊಸ್ಕೋಪ್, ಕಂಪಾಸ್, ಆಂಬಿಯೆಂಟ್ ಲೈಟ್ ಸೆನ್ಸರ್ ಅನ್ನು ಹೊಂದಿದೆ.
Honor X9b ಬೆಲೆ ಮತ್ತು ಲಭ್ಯತೆ
Honor X9b ಸ್ಮಾರ್ಟ್‌ಫೋನ್ ಭಾರತದಲ್ಲಿ 8GB+256GB ಸ್ಟೋರೇಜ್ ಆಯ್ಕೆಯು 25,999ರೂ ಬೆಲೆಯನ್ನು ಹೊಂದಿದೆ. ಇದು ಮಿಡ್‌ನೈಟ್ ಬ್ಲಾಕ್ ಮತ್ತು ಸನ್‌ರೈಸ್ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು. ಈ ಸ್ಮಾರ್ಟ್‌ಫೋನ್ ಫೆಬ್ರವರಿ 16 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಮಾರಾಟವಾಗಲಿದೆ. ಇದನ್ನು ಅಮೆಜಾನ್ ಮತ್ತು ದೇಶಾದ್ಯಂತ ಸುಮಾರು 1,800 ಚಿಲ್ಲರೆ ಅಂಗಡಿಗಳಲ್ಲಿ ಮಾರಾಟವಾಗಲಿದೆ. ಅಲ್ಲದೆ ಸ್ಮಾರ್ಟ್‌ಫೋನ್ ಅನ್ನು ICICI ಬ್ಯಾಂಕ್ ಕಾರ್ಡ್ ಬಳಸಿ ಖರೀದಿಸಿದರೆ 3,000ರೂ ರಿಯಾಯಿತಿ ಲಭ್ಯವಾಗಲಿದೆ.


Click it and Unblock the Notifications








