ಎದುರಾಳಿಗಳಿಗೆ ನಡುಕ! 108MP ಕ್ಯಾಮೆರಾ.. 6600mAh ಬ್ಯಾಟರಿ.. ಬರಲಿದೆ ಹೊಸ Honor ಫೋನ್; ಬೆಲೆ ಎಷ್ಟು?
ಹಾನರ್ ಸಂಸ್ಥೆಯು ಭಾರತದಲ್ಲಿ ಹೊಸ 5G ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಕಂಪನಿಯು ಕಳೆದ ವರ್ಷ ಫೆಬ್ರವರಿಯಲ್ಲಿ Honor X9b ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಇದು 5,800mAh ಬ್ಯಾಟರಿ ಮತ್ತು 108MP ಕ್ಯಾಮೆರಾದೊಂದಿಗೆ ಬಂದಿತ್ತು. ಇದರ ಬೆಲೆ 25,999 ರೂ. ಆಗಿದೆ. ಈಗ ಮುಂದಿನ ತಿಂಗಳು ಕಂಪನಿಯು ಈ ಫೋನಿನ ಉತ್ತರಾಧಿಕಾರಿಯಾಗಿ ಹಾನರ್ X9C (Honor X9C 5G) ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ ಈ ಮೊಬೈಲ್‌ನ ಮೊಕ್ರೋ ಸೈಟ್ ಕಾಣಿಸಿಕೊಂಡಿದೆ. ಈ ಮೂಲಕ ಭಾರತದಲ್ಲಿ ಬಿಡುಗಡೆಯನ್ನು ಖಚಿತಪಡಿಸಲಾಗಿದೆ.
ಹಾನರ್ X9C 5G ಮೊಬೈಲ್ 108MP ಕ್ಯಾಮೆರಾ ಹೊಂದಿರುತ್ತದೆ. ಇದು 6600mAh ದೊಡ್ಡ ಬ್ಯಾಟರಿಯೊಂದಿಗೆ ಬರಲಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದು 6.78 ಇಂಚಿನ ಡಿಸ್ಪ್ಲೇ ಹೊಂದಿರಲಿದೆ. ಜೊತೆಗೆ 12GB RAM + 512GB ಸ್ಟೋರೇಜ್, 16MP ಸೆಲ್ಫಿ ಕ್ಯಾಮೆರಾ ಮತ್ತು 66W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತದೆ. ಈ ಫೋನಿನ ಬಿಡುಗಡೆ ದಿನಾಂಕ ತಿಳಿಯಲು ಮುಂದೆ ಓದಿ.

ಭಾರತದಲ್ಲಿ ಹಾನರ್ X9C 5G ಬಿಡುಗಡೆ ಯಾವಾಗ?
ಹಾನರ್ X9C 5G ಫೋನ್ ಭಾರತದಲ್ಲಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ಆದರೆ, ಕಂಪನಿಯು ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿಲ್ಲ. ಇದನ್ನು ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ (Amazon) ಪಟ್ಟಿ ಮಾಡಲಾಗಿದೆ. ಈ ಫೋನಿನ ಟೀಸರ್ ಫೋಟೋ ಈ ವೆಬ್‌ಪುಟದಲ್ಲಿ ಲೈವ್ ಮಾಡಲಾಗಿದೆ. ವರದಿಯ ಪ್ರಕಾರ, ಹಾನರ್ X9C ಮೊಬೈಲ್ ಅನ್ನು ಫೆಬ್ರವರಿ 15 ರಂದು ಭಾರತದಲ್ಲಿ ಬಿಡುಗಡೆ ಮಾಡಬಹುದು ಎಂದು ಹೇಳಲಾಗುತ್ತಿದೆ.
ಹಾನರ್ X9C 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಹಾನರ್ X9C 5G ಸ್ಮಾರ್ಟ್‌ಫೋನ್ 6.78 ಇಂಚಿನ ಡಿಸ್ಪ್ಲೇ ಹೊಂದಿರಲಿದೆ. ಇದು 1224 x 2700 ಪಿಕ್ಸೆಲ್ ರೆಸಲ್ಯೂಶನ್ ಹೊಂದಿರುವ ಪೂರ್ಣ ಎಚ್‌ಡಿ ಪ್ಲಸ್ OLED ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 4000 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಹಾನರ್ X9C 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 ಜೆನ್ 1 ಆಕ್ಟಾಕೋರ್ ಪ್ರೊಸೆಸರ್ ಹೊಂದಿರಲಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ MagicOS 8.0 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಮೊಬೈಲ್ ಗ್ರಾಫಿಕ್ಸ್‌ಗಾಗಿ, ಅಡ್ರಿನೊ A710 ಜಿಪಿಯು ಸಹ ಹೊಂದಿರುತ್ತದೆ.
RAM ಮತ್ತು ಸ್ಟೋರೇಜ್
ಹಾನರ್ X9C 5G ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ ಎರಡು RAM ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಇದು 8GB RAM ಮತ್ತು 12GB RAM ಹೊಂದಿದೆ. ಈ ಫೋನ್ 8GB RAM + 256GB ಸ್ಟೋರೇಜ್, 12GB RAM + 256GB ಸ್ಟೋರೇಜ್ ಮತ್ತು 12GB RAM + 512GB ಸ್ಟೋರೇಜ್ ರೂಪಾಂತರಗಳಲ್ಲಿ ಬರುತ್ತದೆ.

ಕ್ಯಾಮೆರಾ ಸೆಟಪ್
ಹಾನರ್ X9C 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 5 ಮೆಗಾಪಿಕ್ಸೆಲ್ ದ್ವಿತೀಯ (ವೈಡ್ ಆಂಗಲ್ ಲೆನ್ಸ್) ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇರುತ್ತದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಹಾನರ್ X9C 5G ಮೊಬೈಲ್ 6,600mAh ಬ್ಯಾಟರಿಯೊಂದಿಗೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದು ಸಿಲಿಕಾನ್ ಕಾರ್ಬನ್ ಬ್ಯಾಟರಿಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಫೋನ್ 66W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ.


Click it and Unblock the Notifications








