HDFC ಯಿಂದ 75,000ರೂ. ಗಳ ವಿದ್ಯಾರ್ಥಿ ವೇತನ ಪಡೆಯಬೇಕೆ?: ಅರ್ಜಿ ಸಲ್ಲಿಸಲು ಸರಳ ಮಾರ್ಗ!
ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಹೆಚ್‌ಡಿಎಫ್‌ಸಿ ಬ್ಯಾಂಕ್ ಗ್ರಾಹಕರ ನಡುವೆ ಹಣದ ವ್ಯವಹಾರ ಮಾಡುವ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ಹೆಸರು ಪಡೆದಿದೆ. ಅಂತೆಯೇ ಪ್ರತಿವರ್ಷ ಹೆಚ್‌ಡಿಎಫ್‌ಸಿ ಬ್ಯಾಂಕ್ ವತಿಯಿಂದ ಪರಿವರ್ತನ್‌ನ ECS ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಈ ಮೂಲಕ ವಿದ್ಯಾರ್ಥಿಗಳು 75,000 ರೂ. ಗಳವರೆಗೆ ಹಣಕಾಸಿನ ನೆರವು ಪಡೆದುಕೊಳ್ಳಬಹುದಾಗಿದೆ.
ಹೌದು, ಪರಿವರ್ತನ್‌ನ ECS ವಿದ್ಯಾರ್ಥಿವೇತನ 2022-23 ಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಅಧಿಕೃತ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗಿದ್ರೆ, ಎಷ್ಟನೇ ತರಗತಿಯ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರು, ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ಏನು, ಅರ್ಜಿ ಸಲ್ಲಿಸುವುದು ಹೇಗೆ ಎಂಬ ಪ್ರಮುಖ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಿದ್ದೇವೆ ಓದಿರಿ.

ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು?
ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಬಹುದಾಗಿದ್ದು, ಅದರಂತೆ 1 ನೇ ತರಗತಿಯಿಂದ ಯುಜಿ ಮತ್ತು ಪಿಜಿ ಓದುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರು. ಹಾಗೆಯೇ ಹಣಕಾಸಿನ ಸಮಸ್ಯೆಯಿಂದಾಗಿ ಶಿಕ್ಷಣದ ವೆಚ್ಚವನ್ನು ಭರಿಸಲು ಸಾಧ್ಯವಾಗದ ಮತ್ತು ಶಾಲೆಯಿಂದ ಹೊರಗುಳಿಯುವ ಅಪಾಯದಲ್ಲಿರುವ ವಿದ್ಯಾರ್ಥಿಗಳಿದ್ದರೆ ಕೂಡಲೇ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಸುಲಭ ಮಾರ್ಗ ಕಲ್ಪಿಸಿರುವ ಬ್ಯಾಂಕ್ ಇದರಲ್ಲಿ ಮೂರು ವಿಭಾಗಗಳನ್ನು ಮಾಡಿದೆ. ಅಂದರೆ ಒಂದರಿಂದ ಪಿಯುಸಿವರೆಗೆ, ಡಿಗ್ರಿ ಹಾಗೂ ಸ್ನಾತಕೋತ್ತರ ಎಂಬ ಮೂರು ಆಯ್ಕೆಗಳಿದ್ದು, ನೀವು ಯಾವ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದೀರೋ ಆ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಅದಕ್ಕೂ ಮೊದಲು ನೀವು ಕನಿಷ್ಠ 55 % ನೊಂದಿಗೆ ಹಿಂದಿನ ತರಗತಿ ಪಾಸ್ ಆಗಿರಬೇಕು, 2.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ 15 ಮಾರ್ಚ್ 2023 ಕೊನೇ ದಿನಾಂಕವಾಗಿದೆ.

ಅರ್ಜಿಯನ್ನು ಸಲ್ಲಿಸಲು ಈ ಸರಳ ಮಾರ್ಗ ಅನುಸರಿಸಿ
- *ಮೊದಲು ಹೆಚ್‌ಡಿಎಫ್‌ಸಿ ಅಧಿಕೃತ ಸ್ಕಾಲರ್‌ಶಿಪ್ ಸೈಟ್ ಆಗಿರುವ Buddy4Study ಗೆ ಭೇಟಿ ನೀಡಬೇಕು. ಇದಕ್ಕಾಗಿ ನೀವು https://www.buddy4study.com/page/hdfc-bank-parivartans-ecs-scholarship ನ ಲಿಂಕ್ ಬಳಕೆ ಮಾಡಿಕೊಳ್ಳಬಹುದು
- *ನಂತರ Buddy4Study ಮೇನ್ ಪೇಜ್‌ನ ಬಲಬಾಗದಲ್ಲಿ ಈಗ ಅನ್ವಯಿಸಿ ಎಂಬ ಆಯ್ಕೆ ಕಾಣಿಸಿಕೊಳ್ಳುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.ಇದನ್ನು ಕ್ಲಿಕ್ ಮಾಡಿದ ತಕ್ಷಣ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಮೂರು ವಿಭಾಗಗಳು ಕಾಣಿಸಿಕೊಳ್ಳುತ್ತವೆ.
- * ಬಳಿಕ ನೀವು ನೋಂದಾಯಿತ ಐಡಿ ಬಳಕೆ ಮಾಡಿಕೊಂಡು ಅರ್ಜಿ ಸಲ್ಲಿಕೆಗೆ ಮುಂದಾಗಬೇಕಿದೆ. ಈವರೆಗೂ ನೋಂದಣಿ ಮಾಡಿಕೊಂಡಿಲ್ಲ ಎಂದರೆ ಅದಕ್ಕೆ ಅವಕಾಶ ಇದ್ದು, ಇದರಲ್ಲಿ ನಿಮ್ಮ ಹೆಸರು, ಮೊಬೈಲ್ ಸಂಖ್ಯೆ ಹಾಗೂ ಜಿ-ಮೇಲ್ ಐಡಿ ನೀಡಬೇಕಿದೆ. ಜೊತೆಗೆ ಪಾಸ್‌ವರ್ಡ್ ಕೂಡ ರಚಿಸಿಕೊಳ್ಳಬೇಕಿದೆ.
- * ನಂತರ ನಿಮ್ಮನ್ನು ಹೆಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ ಇಸಿಎಸ್ ವಿದ್ಯಾರ್ಥಿವೇತನ ಅರ್ಜಿ ನಮೂನೆಯ ಪೇಜ್‌ಗೆ ಮರುನಿರ್ದೇಶಿಸಲಾಗುತ್ತದೆ. ಈ ವೇಳೆ ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಪ್ಲಿಕೇಶನ್ ಪ್ರಾರಂಭಿಸಿ ಎಂಬ ಹಸಿರು ಬಣ್ಣದ ಬಟನ್ ಕಾಣಿಸಿಕೊಳ್ಳುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.

- * ಇದಾದ ಬಳಿಕ ಅರ್ಜಿ ಸಲ್ಲಿಸುವ ಪೇಜ್ ತೆರೆದುಕೊಳ್ಳಲಿದ್ದು, ಅಲ್ಲಿ ಕೇಳಲಾಗುವ ಹೆಸರು, ಶಾಲಾ ವಿವರ, ಪೋಷಕರ ವಿವರ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ, ನಂತರ ನಿಮ್ಮ ಶೈಕ್ಷಣಿಕ ಅರ್ಹತೆಯ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ.
- * ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ನೀವು ಪೂರ್ವವೀಕ್ಷಣೆ ಮೇಲೆ ಕ್ಲಿಕ್ ಮಾಡಿ ಏನಾದರೂ ತಪ್ಪುಗಳಿದ್ದರೆ ತಕ್ಷಣಕ್ಕೆ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಇದಕ್ಕೂ ಮೊದಲು ನೀವು ನಿಯಮಗಳು ಮತ್ತು ಷರತ್ತುಗಳನ್ನು ಒಪ್ಪಿಕೊಳ್ಳಬೇಕಿದೆ.
- * ನೀವು ಭರ್ತಿ ಮಾಡಿದ ಎಲ್ಲಾ ಮಾಹಿತಿ ಸರಿಯಾಗಿದ್ದರೆ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ. ಇದಾದ ನಂತರ ಹಲವು ಹಂತದಲ್ಲಿ ನಿಮ್ಮ ಅರ್ಜಿಯನ್ನು ಪರಿಶೀಲಿಸುವ ತಂಡ ನಿಮ್ಮ ಬಡತನ, ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ನಿಮ್ಮ ಬ್ಯಾಂಕ್‌ಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ.


Click it and Unblock the Notifications








