ಹೆಚ್‌ಟಿಸಿ ಡಿಸೈರ್ 20 ಪ್ರೊ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

|

ಥೈವಾನ್‌ ಮೂಲದ ಸ್ಮಾರ್ಟ್‌ ಫೋನ್‌ ತಯಾರಿಕಾ ಸಂಸ್ಥೆ ಹೆಚ್‌ಟಿಸಿ ಕಂಪೆನಿ ಬಹು ದಿನಗಳ ನಂತರ ಮತ್ತೆ ಟೆಕ್‌ ಮಾರುಕಟ್ಟೆಯಲ್ಲಿ ಸದ್ದು ಮಾಡ್ತಿದೆ. ಕೆಲವು ವರ್ಷಗಳ ಹಿಂದೆ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಹೆಚ್‌ಟಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್‌ಟಿಸಿ ಕಂಪೆನಿ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದ್ದು ಕಡಿಮೆ ಅಂತಾನೇ ಅನ್ನಬಹುದು. ಆದರೆ ಇದೀಗ ಮತ್ತೇ ಮಾರುಕಟ್ಟೆಗೆ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ದತೆ ನಡೆಸಿದೆ.

ಸ್ಮಾರ್ಟ್‌ಫೋನ್‌

ಹೌದು, ಥೈವಾನ್‌ ಮೂಲದ ಸ್ಮಾರ್ಟ್‌ಫೋನ್‌ ಕಂಪೆನಿ ಹೆಚ್‌ಟಿಸಿ ತನ್ನ ಹೊಸ ಹೆಚ್‌ಟಿಸಿ ಡಿಸೈರ್‌20 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಮಧ್ಯಮ ಶ್ರೇಣಿಯ ಬೆಲೆಯಲ್ಲಿ ಲಭ್ಯವಾಗಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹೊಸ ವಿನ್ಯಾಸದಲ್ಲಿ ಲಬ್ಯವಾಗಲಿದೆ ಎನ್ನಲಾಗ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು, ಹಾಗೂ ವಿನ್ಯಾಸ ಹೇಗಿದೆ ಅನ್ನೊದು ಗೂಗಲ್‌ ಪ್ಲೇ ಕನ್ಸೋಲ್ ಪಟ್ಟಿಯಲ್ಲಿ ಲೀಕ್‌ ಆಗಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಹೆಚ್‌ಟಿಸಿ ಡಿಸೈರ್ 20 ಪ್ರೊ ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಅನ್ನು ಹೊಂದಿದ್ದು, 6.54 ಇಂಚಿನ ಡಿಸ್‌ಪ್ಲೇಯನ್ನ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಸ್ಕೀಮ್ಯಾಟಿಕ್ಸ್ ಫೋನ್‌ನ ಮೇಲಿನ ಎಡ ಭಾಗದಲ್ಲಿ ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನ ನೀಡಲಾಗಿದೆ. ಇನ್ನು ಈ ಡಿಸ್‌ಪ್ಲೇಯು AMOLED ಸ್ಕ್ರೀನ್‌ ಪ್ಯಾನಲ್‌ ಹೊಂದಿರುವ ಸಾಧ್ಯತೆ ಇದ್ದು, ಇದು ಎಲ್ಸಿಡಿ ವಿನ್ಯಾಸವನ್ನ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 ಚಿಪ್‌ಸೆಟ್‌ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗ್ತಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ ಮತ್ತು ಬ್ಯಾಟರಿ ವಿಶೇಷ

ಕ್ಯಾಮೆರಾ ಮತ್ತು ಬ್ಯಾಟರಿ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ವಿನ್ಯಾಸ ಹಾಗೂ ಕ್ಯಾಮೆರಾ ಸೆಟ್‌ಅಪ್‌ ಹೇಗಿರಲಿದೆ ಅನ್ನೊದರ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ ಆಗಿರುವುದರಿಂದ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿಗೆ ಬರುವ ಸಾಧ್ಯತೆ ಇದೆ. ಇದಲ್ಲದೆ ಇದರ ಬ್ಯಾಟರಿ ಪ್ಯಾಕ್ಅಪ್‌ ಕೂಡ ಉತ್ತಮವಾಗಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಇನ್ನು ಈ ಡಿಸೈರ್ 20 ಪ್ರೊ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಬಗ್ಗೆ ಇನ್ನೂ ಯಾವುದೇ ವಿಷಯ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಸುಮಾರು 15,000 ರೂ. ಬೆಲೆಯಲ್ಲಿ ಲಭ್ಯವಾಗಲಿದೆ ಎನ್ನಲಾಗ್ತಿದೆ.

Best Mobiles in India

English summary
HTC had used low-end MediaTek chipsets in its similar devices launched in the past, but it seems to have moved on to Qualcomm Snapdragon chipsets now, starting with the HTC Desire 20 Pro.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X