Home
ಸುದ್ದಿಜಾಲ

ಹೆಚ್‌ಟಿಸಿ ಡಿಸೈರ್ 20+ ಸ್ಮಾರ್ಟ್‌ಫೋನ್‌ ಲಾಂಚ್‌!..ಫೀಚರ್ಸ್‌ ಏನು?

ತೈವಾನ್‌ ಮೂಲದ ಸ್ಮಾರ್ಟ್‌ಫೋನ್‌ ಕಂಪೆನಿ ಹೆಚ್‌ಟಿಸಿ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಜನಪ್ರಿಯತೆ ಪಡೆದುಕೊಂಡಿತ್ತು. ಅಲ್ಲದೆ ಆಕರ್ಷಕ ಫೀಚರ್ಸ್‌ಗಳನ್ನು ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್‌ ವಲಯದಲ್ಲಿ ಸೈ ಎನಿಸಿಕೊಂಡಿತ್ತು. ಆದರೆ ಇತ್ತೀಚಿನ ಕೆಲ ವರ್ಷಗಳಲ್ಲಿ ಯಾವುದೇ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡದಿದ್ದ ಹೆಚ್‌ಟಿಸಿ ಕಂಪೆನಿ ಕೆಲವು ತಿಂಗಳ ಹಿಂದೆಯಷ್ಟೇ ಮತ್ತೇ ಸ್ಮಾರ್ಟ್‌ಫೋನ್‌ ವಲಯದಲ್ಲಿ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ.

ಹೆಚ್‌ಟಿಸಿ

ಹೌದು, ಹೆಚ್‌ಟಿಸಿ ಕಂಪೆನಿ ತನ್ನ ಹೊಸ ಹೆಚ್‌ಟಿಸಿ ಡಿಸೈರ್ 20+ ಸ್ಮಾರ್ಟ್‌ಫೋನ್‌ ಅನ್ನು ಟೆಕ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು ಜೂನ್‌ನಲ್ಲಿ ಬಿಡುಗಡೆಯಾಗಿದ್ದ ಡಿಸೈರ್ 20 ಪ್ರೊ ಸರಣಿಯ ಮುಂದುವರೆದ ಆವೃತ್ತಿಯಾಗಿದೆ. ಇನ್ನು ಡಿಸೈರ್ 20+ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್, ನೋಚ್ಡ್ ಸೆಲ್ಫಿ ಕ್ಯಾಮೆರಾ ಮತ್ತು ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇದು ಸಿಂಗಲ್‌ RAM ಮತ್ತು ಸ್ಟೋರೇಜ್‌ ಆಯ್ಕೇಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಹೆಚ್‌ಟಿಸಿ ಡಿಸೈರ್‌20+ ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತವನ್ನು ಒಳಗೊಂಡಿರುವ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ 83.1% ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಹೆಚ್‌ಟಿಸಿ ಡಿಸೈರ್‌20+ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ನಿಂದ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ ಎಫ್ / 2.2 ಲೆನ್ಸ್ ಹೊಂದಿರುವ 5 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಡ್ಯುಯಲ್-ಎಲ್ಇಡಿ ಫ್ಲ್ಯಾಷ್ ಸಹ ಇದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಹೆಚ್‌ಟಿಸಿ ಡಿಸೈರ್ 20+ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, QC4.0 ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಜಿಪಿಎಸ್, ಬ್ಲೂಟೂತ್ 5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಇನ್ನುಳಿದಂತೆ ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊ ಸೆನ್ಸರ್, ಡೈನಾಮಿಕ್ ಗ್ರಾವಿಟಿ ಸೆನ್ಸರ್, ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹೆಚ್‌ಟಿಸಿ ಡಿಸೈರ್ 20+ ತೈವಾನ್‌ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ತೈವಾನ್‌ ಮಾರುಕಟ್ಟೆಯಲ್ಲಿ TWD8,490 ( ಅಂದಾಜು 21,700ರೂ.) ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಡಾನ್ ಆರೆಂಜ್ ಮತ್ತು ಟ್ವಿಲೈಟ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಭಾರತದ ಮಾರುಕಟ್ಟೆಗೂ ಎಂಟ್ರಿ ನೀಡುವ ಸಾಧ್ಯತೆ ಇದ್ದು, ಯಾವಾಗ ಬರಲಿದೆ ಎಂಬ ಮಾಹಿತಿಯನ್ನು ಕಂಪೆನಿ ಇನ್ನು ಹಂಚಿಕೊಂಡಿಲ್ಲ.

Best Mobiles in India

English summary
HTC Desire 20+ is backed by a 5,000mAh battery and comes with a notch for the selfie camera.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+