Home
ಸುದ್ದಿಜಾಲ

HTC ವೈಲ್ಡ್‌ಫೈರ್‌ E ಲೈಟ್‌ ಸ್ಮಾರ್ಟ್‌ಫೋನ್‌ ಬಿಡುಗಡೆ!

ತೈವಾನ್‌ ಮೂಲದ ಸ್ಮಾರ್ಟ್‌ಫೋನ್‌ ಕಂಪೆನಿ HTC ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಜನಪ್ರಿಯತೆ ಪಡೆದುಕೊಂಡಿದೆ. ಹಲವು ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡ ಫೋನ್ ಸರಣಿಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಆದರೆ ಇತ್ತೀಚಿನ ದಿನಗಳ ಕಾಣದಂತಾಗಿದ್ದ HTC ಕಂಪನಿಯು ಇದೀಗ ಹೊಸದೊಂದು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಗ್ರಾಹಕರ ಗಮನ ಸೆಳೆದಿದೆ.

ಮೊಬೈಲ್

ಹೌದು, HTC ಮೊಬೈಲ್ ಕಂಪೆನಿ ಈಗ ಹೊಸ HTC ವೈಲ್ಡ್‌ಫೈರ್‌ E ಲೈಟ್‌ ಸ್ಮಾರ್ಟ್‌ಫೋನ್‌ ಅನ್ನು ದಕ್ಷಿಣ ಆಫ್ರಿಕಾದಲ್ಲಿ ಬಿಡುಗಡೆ ಮಾಡಿದೆ. ಈ ಪೋನ್ ಹೆಚ್‌ಟಿಸಿಯ ವೈಲ್ಡ್‌ಫೈರ್‌ ಸರಣಿಯ ಮುಂದುವರೆದ ಆವೃತ್ತಿಯಾಗಿದ್ದು, ಎಂಟ್ರಿ ಲೆವೆಲ್ ಮಾದರಿಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಪೂರ್ಣ HD 1080p ವಿಡಿಯೋ ರೆಕಾರ್ಡಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗಾದರೇ HTC ವೈಲ್ಡ್‌ಫೈರ್‌ E ಲೈಟ್‌ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

HTC ವೈಲ್ಡ್‌ಫೈರ್‌ E ಲೈಟ್‌ ಸ್ಮಾರ್ಟ್‌ಫೋನ್‌ 720x1,440 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 5.45 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇಯು ವಿಡಿಯೋ ವೀಕ್ಷಣೆ ಹಾಗೂ ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

HTC ವೈಲ್ಡ್‌ಫೈರ್‌ E ಲೈಟ್‌ ಸ್ಮಾರ್ಟ್‌ಫೋನ್‌ 1.8GHz ಸಾಮರ್ಥ್ಯದ ಮೀಡಿಯಾ ಟೆಕ್ ಹಿಲಿಯೋ A20 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಪಡೆದುಕೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ 2GB RAM ಮತ್ತು 16GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸ್ಟೋರೇಜ್ ವಿಸ್ತರಿಸುವ ಅವಕಾಶ ನೀಡಿಲ್ಲ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

HTC ವೈಲ್ಡ್‌ಫೈರ್‌ E ಲೈಟ್‌ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 0.3 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಬಲದಲ್ಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಈ ಕ್ಯಾಮೆರಾದಲ್ಲಿ ಪೂರ್ಣ HD 1080p ವಿಡಿಯೋ ರೆಕಾರ್ಡಿಂಗ್ ಸೌಲಭ್ಯ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

HTC ವೈಲ್ಡ್‌ಫೈರ್‌ E ಲೈಟ್‌ ಸ್ಮಾರ್ಟ್‌ಫೋನ್‌ 3,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ನೀಡಲಾಗಿದ್ದು, 5V/ 1A ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು ಬ್ಲೂಟೂತ್ ವಿ 5, ವೈ-ಫೈ 802.11 ಎಸಿ, ಮೈಕ್ರೋ-ಯುಎಸ್ಬಿ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಹೆಚ್ಚಿನದನ್ನು ಒಳಗೊಂಡಿವೆ. ಮಂಡಳಿಯಲ್ಲಿನ ಸಂವೇದಕಗಳಲ್ಲಿ ಆಂಬಿಯೆಂಟ್ ಲೈಟ್ ಸೆನ್ಸಾರ್, ಸಾಮೀಪ್ಯ ಸಂವೇದಕ, ಫಿಂಗರ್‌ಪ್ರಿಂಟ್ ಸಂವೇದಕ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

HTC ವೈಲ್ಡ್‌ಫೈರ್‌ E ಲೈಟ್‌ ಸ್ಮಾರ್ಟ್‌ಫೋನ್‌ ಬೇಸ್‌ ವೇರಿಯಂಟ್‌ ಬೆಲೆಯು ದಕ್ಷಿಣ ಆಫ್ರಿಕಾದಲ್ಲಿ ZAR 1,549 (ಭಾರತದಲ್ಲಿ ಅಂದಾಜು 7,600ರೂ. ಎನ್ನಲಾಗಿದೆ). ಈ ಫೋನ್ ಕಪ್ಪು ಬಣ್ಣದ ಆಯ್ಕೆಯಲ್ಲಿ ಲಭ್ಯವಿದೆ.

Best Mobiles in India

English summary
HTC Wildfire E lite features an 8-megapixel primary rear camera.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+