Home
ಸುದ್ದಿಜಾಲ

ಒಂದು ಸಮಯದಲ್ಲಿ ಸಖತ್‌ ಸೌಂಡ್‌ ಮಾಡಿದ್ದ ಹೆಚ್‌ಟಿಸಿಯಿಂದ ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌!

ಹೆಚ್‌ಟಿಸಿ ಕಂಪೆನಿ ತನ್ನ ಮತ್ತೊಂದು ಸ್ಮಾರ್ಟ್‌ಫೋನ್‌ ಮೂಲಕ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಒಂದು ಕಾಲದಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿದ್ದ ಹೆಚ್‌ಟಿಸಿ ಇತ್ತೀಚಿನ ದಿನಗಳಲ್ಲಿಯೂ ತನ್ನ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತಿದೆ. ಅದರಂತೆ ಇದೀಗ ಹೊಸ ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಸ್ಮಾರ್ಟ್‌ಫೋನ್‌ ಅನ್ನು ಸೈಲೆಂಟ್‌ ಆಗಿ ಬಿಡುಗಡೆ ಮಾಡಿದೆ.

ಹೌದು, ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಯುನಿಸೋಕ್‌ ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಂದು ಸಮಯದಲ್ಲಿ ಸಖತ್‌ ಸೌಂಡ್‌ ಮಾಡಿದ್ದ ಹೆಚ್‌ಟಿಸಿಯಿಂದ ಹೊಸ ಫೋನ್‌ ಲಾಂಚ್‌!

ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಡಿಸ್‌ಪ್ಲೇ

ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಸ್ಮಾರ್ಟ್‌ಫೋನ್‌ 6.82 ಇಂಚಿನ IPS LCD ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 720 x 1640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಒಳಗೊಂಡಿದೆ. ಇನ್ನು ಡಿಸ್‌ಪ್ಲೇ ಟಿಯರ್‌ ಡ್ರಾಪ್‌ ನಾಚ್‌ ವಿನ್ಯಾಸವನ್ನು ಹೊಂದಿದ್ದು, 20.5:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಮತ್ತು 450 ನೀಟ್ಸ್‌ ಬ್ರೈಟ್‌ನೆಸ್‌ ಅನ್ನು ನೀಡಲಿದೆ.

ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಪ್ರೊಸೆಸರ್‌ ಯಾವುದು?

ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಸ್ಮಾರ್ಟ್‌ಫೋನ್‌ Unisoc T606 ಚಿಪ್‌ಸೆಟ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಕೂಡ ನೀವು ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶವನ್ನು ನೀಡಲಾಗಿದೆ.

ಒಂದು ಸಮಯದಲ್ಲಿ ಸಖತ್‌ ಸೌಂಡ್‌ ಮಾಡಿದ್ದ ಹೆಚ್‌ಟಿಸಿಯಿಂದ ಹೊಸ ಫೋನ್‌ ಲಾಂಚ್‌!

ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಕ್ಯಾಮೆರಾ ಸೆಟ್‌ಅಪ್‌

ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸ್ನ್ಯಾಪರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಕ್ಯಾಮೆರಾ ಸೆಟ್‌ಅಪ್‌ ನಲ್ಲಿ ಎಲ್‌ಇಡಿ ಫ್ಲ್ಯಾಷ್‌ ಅನ್ನು ಕೂಡ ಅಳವಡಿಸಲಾಗಿದೆ.

ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಸ್ಮಾರ್ಟ್‌ಫೋನ್‌ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಡ್ಯುಯಲ್‌ ಸಿಮ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಸಿ ಪೋರ್ಟ್‌ ಮತ್ತು 3.5mm ಆಡಿಯೊ ಜಾಕ್‌ ಅನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು AI ಫೇಸ್ ಅನ್‌ಲಾಕ್‌ನಂತಹ ಫೀಚರ್ಸ್‌ಗಳನ್ನು ಹೊಂದಿದೆ.

ಒಂದು ಸಮಯದಲ್ಲಿ ಸಖತ್‌ ಸೌಂಡ್‌ ಮಾಡಿದ್ದ ಹೆಚ್‌ಟಿಸಿಯಿಂದ ಹೊಸ ಫೋನ್‌ ಲಾಂಚ್‌!

ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಬೆಲೆ ಮತ್ತು ಲಭ್ಯತೆ

ಹೆಚ್‌ಟಿಸಿ ವೈಲ್ಡ್‌ಫೈರ್‌ E2 ಪ್ಲೇ ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ನೀಲಿ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ವರದಿಯಾಗಿದೆ.

Best Mobiles in India

English summary
HTC Wildfire E2 Play with 48MP quad cameras launched: specs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+