HTC ವೈಲ್ಡ್ ಫೈರ್ E3 ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

|

ತೈವಾನ್‌ ಮೂಲದ ಸ್ಮಾರ್ಟ್‌ಫೋನ್‌ ಕಂಪೆನಿ HTC ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಜನಪ್ರಿಯತೆ ಪಡೆದುಕೊಂಡಿದೆ. ಹಲವು ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡ ಫೋನ್ ಸರಣಿಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಪ್ರಾರಂಭಿಕ ಹಂತದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದ ಹೆಚ್‌ಟಿಸಿ ಇತ್ತೀಚಿನ ವರ್ಷಗಳಲ್ಲಿ ಕಾಣದಂತಾಗಿತ್ತು. ಸದ್ಯ ಇದೀಗ ಹೆಚ್‌ಟಿಸಿ ಕಂಪೆನಿಯು ಹೊಸದೊಂದು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ.

HTC ಸ್ಮಾರ್ಟ್‌ಫೋನ್

ಹೌದು, HTC ಸ್ಮಾರ್ಟ್‌ಫೋನ್‌ ಕಂಪೆನಿ ಇದೀಗ ಹೊಸ HTC ವೈಲ್ಡ್‌ಫೈರ್‌ E3‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಪೋನ್ ಹೆಚ್‌ಟಿಸಿಯ ವೈಲ್ಡ್‌ಫೈರ್‌ ಸರಣಿಯ ಮುಂದುವರೆದ ಆವೃತ್ತಿಯಾಗಿದ್ದು, ಬಜೆಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಹಾಗಾದರೇ HTC ವೈಲ್ಡ್‌ಫೈರ್‌ E3 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಅನ್ನೋದನ್ನ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಹೆಚ್‌ಟಿಸಿ ವೈಲ್ಡ್ ಫೈರ್ E3 ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51-ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಆಗಿದ್ದು, ವಾಟರ್‌ ಡ್ರಾಪ್‌ ನಾಚ್‌ ಶಯಲಿಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಹಿಲಿಯೊ P22 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಸಹ ನೀಡಿದೆ.

ಕ್ಯಾಮೆರಾ

ಕ್ಯಾಮೆರಾ

ಹೆಚ್‌ಟಿಸಿ ವೈಲ್ಡ್‌ ಫೈರ್‌ E3 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದ್ದು, ಎಲ್‌ಇಡಿ ಫ್ಲ್ಯಾಷ್ ಹೊಂದಿದೆ. ಜೊತೆಗೆ 1080p ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4000mAh ಬ್ಯಾಟರಿಯನ್ನು ಹೊಂದಿದ್ದು, ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ 4.2, ಯುಎಸ್‌ಬಿ-ಸಿ, 3.5mm ಆಡಿಯೊ ಜ್ಯಾಕ್, ಅನ್ನು ಬೆಂಬಲಿಸಲಿದೆ

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹೆಚ್‌ಟಿಸಿ ವೈಲ್ಡ್ ಫೈರ್ E3 ಬೆಲೆ ಸ್ಮಾರ್ಟ್‌ಫೋನ್‌ ಸದ್ಯ ಯುರೋಪ್‌ನಲ್ಲಿ ಬಿಡುಗಡೆ ಆಗಿದ್ದು, ಇದರ ಬೆಲೆ 150 ಯುರೋಗಳು (ಅಂದಾಜು 13,000 ರೂ). ಆಗಿದೆ. ಇದು ನೀಲಿ ಮತ್ತು ಕಪ್ಪು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಯಾವಾಗ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಇನ್ನು ಲಭ್ಯವಾಗಿಲ್ಲ.

Best Mobiles in India

English summary
The phone comes with a 4,000mAh battery, up to 128GB storage, and HD+ display.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X