Just In
- 55 min ago
MusicLM :ಗೂಗಲ್ನಿಂದ ಹೊಸ ಟೂಲ್; ಇದು ಪಠ್ಯವನ್ನು ಸಂಗೀತವಾಗಿ ಪರಿವರ್ತಿಸಲಿದೆ!
- 1 hr ago
WhatsApp New Features : ಶೀಘ್ರದಲ್ಲೇ ವಾಟ್ಸಾಪ್ ಸೇರಲಿದೆ ಅಚ್ಚರಿಯ ಫೀಚರ್ಸ್! ಏನೆಲ್ಲಾ ಉಪಯೋಗಗಳು!
- 1 hr ago
ಜಿಯೋ ಗ್ರಾಹಕರೆ, ಈ ರೀಚಾರ್ಜ್ ಪ್ಲ್ಯಾನ್ ಅನ್ನು ಖಂಡಿತಾ ನೀವು ಇಷ್ಟ ಪಡ್ತೀರಿ!?
- 20 hrs ago
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
Don't Miss
- News
ಡಿಕೆಶಿ ಪತ್ನಿ ನನಗೆ ಕಾಂಗ್ರೆಸ್ ತೊರೆಯದಂತೆ ಕೋರಿದ್ದರು: ರಮೇಶ್ ಜಾರಕಿಹೊಳಿ
- Finance
ಅದಾನಿ ಗ್ರೂಪ್ನ 413 ಪುಟಗಳ ಪ್ರತಿಕ್ರಿಯೆ: ಹಿಂಡನ್ಬರ್ಗ್ ಹೇಳುವುದೇನು?
- Movies
'ಕ್ರಾಂತಿ' ₹100 ಕೋಟಿ ಕ್ಲಬ್ ಸೇರಿದ್ದು ಹೇಗೆ? ಥಿಯೇಟರ್ನಿಂದ ಎಷ್ಟು? ಟಿವಿ ರೈಟ್ಸ್ನಿಂದ ಎಷ್ಟು?
- Automobiles
ಬಹುನೀರಿಕ್ಷಿತ 'ಅಲ್ಟ್ರಾವೈಲೆಟ್ F77' ಬೈಕ್ ಹೇಗಿದೆ ಗೋತ್ತಾ.. ಇಲ್ಲಿದೆ ವಿಮರ್ಶೆ
- Lifestyle
ಫೆಬ್ರವರಿ ತಿಂಗಳಿನಲ್ಲಿ ಜನಿಸಿದವರ ಕುರಿತ ಆಸಕ್ತಿಕರ ಸಂಗತಿಗಳಿವು
- Sports
ನೀವೇ ನಮಗೆ ಸ್ಪೂರ್ತಿ: ಕಿರಿಯರ ಸಾಧನೆಗೆ ಹರ್ಮನ್ಪ್ರೀತ್ ಕೌರ್ ಮುಕ್ತಕಂಠದ ಶ್ಲಾಘನೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಹೆಚ್‌ಟಿಸಿ ವೈಲ್ಡ್‌ಫೈರ್ R70 ಸ್ಮಾರ್ಟ್‌ಫೋನ್ ಲಾಂಚ್!
ತೈವಾನ್ ಮೂಲದ ಸ್ಮಾರ್ಟ್‌ಫೋನ್ ಕಂಪೆನಿ ಹೆಚ್‌ಟಿಸಿ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಜನಪ್ರಿಯತೆ ಪಡೆದುಕೊಂಡಿತ್ತು. ಅಲ್ಲದೆ ಆಕರ್ಷಕ ಫೀಚರ್ಸ್‌ಗಳನ್ನು ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್ ವಲಯದಲ್ಲಿ ಸೈ ಎನಿಸಿಕೊಂಡಿತ್ತು. ಆದರೆ ಇತ್ತೀಚಿನ ಕೆಲ ವರ್ಷಗಳಲ್ಲಿ ಯಾವುದೇ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡದಿದ್ದ ಹೆಚ್‌ಟಿಸಿ ಕಂಪೆನಿ ಇದೀಗ ಹೊಸ ಸ್ಮಾರ್ಟ್‌ಫೋನ್ ಅನ್ನು ಭಾರತ ಮತ್ತು ಥೈಲ್ಯಾಂಡ್ ದೇಶದ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ.

ಹೌದು, ಹೊಸತನಕ್ಕೆ ಹೆಸರಾಗಿದ್ದ ಹೆಚ್‌ಟಿಸಿ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ಹೊಸ ಹೆಚ್‌ಟಿಸಿ ವೈಲ್ಡ್‌ಫೈರ್ R70 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಪ್ರೈಸ್ ಟ್ಯಾಗ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹೆಚ್‌ಟಿಸಿಯ ವೈಲ್ಡ್‌ಫೈರ್ ಸರಣಿಯ ಮುಂದುವರೆದ ಆವೃತ್ತಿಯಾಗಿದ್ದು, 10W ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ 4000mAh ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಒಳಗೊಂಡಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ

ಡಿಸ್‌ಪ್ಲೇ ವಿನ್ಯಾಸ
ಈ ಸ್ಮಾರ್ಟ್‌ಫೋನ್ ಬೆಜೆಲ್‌ಲೆಸ್ ಡಿಸ್‌ಪ್ಲೇಯನ್ನ ಹೊಂದಿದ್ದು, ಇದು 6.53 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇಯು ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿದ್ದು, ಇದರ ಸ್ಕ್ರೀನ್ ರೆಸಲ್ಯೂಶನ್ ಉತ್ತಮವಾಗಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಇನ್ನು ಈ ಡಿಸ್‌ಪ್ಲೇ ರಚನೆಯ ಅನುಪಾತ 19.5:9 ರಷ್ಟಿದೆ. ಇದಲ್ಲದೆ ಡಿಸ್‌ಪ್ಲೇ ppi ಪಿಕ್ಸೆಲ್ ಸಾಂದ್ರತೆ ಉತ್ತಮವಾಗಿದ್ದು, ವಿಡಿಯೋ ವೀಕ್ಷಣೆ ಹಾಗೂ ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್
ಹೆಚ್‌ಟಿಸಿ ವೈಲ್ಡ್‌ಫೈರ್ R70 ಸ್ಮಾರ್ಟ್‌ಫೋನ್ G71 MP2 ಡ್ಯುಯಲ್-ಕೋರ್ ಮತ್ತು 770MHz ಫ್ರಿಕ್ವೆನ್ಸಿ ಹೊಂದಿರುವ ಮೀಡಿಯಾ ಟೆಕ್ ಹಿಲಿಯೊ P23 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 9 ಒಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ನೀಡಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮಾದರಿ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್, ಹಾಗೂ ಮೂರನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಈ ಕ್ಯಾಮೆರಾದಲ್ಲಿ ಟಚ್ ದಿ ಫೋಕಸ್ ಹಾಗೂ ಎಲ್‌ಇಡಿ ಫ್ಲ್ಯಾಶ್ ಅನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಹೆಚ್‌ಟಿಸಿ ವೈಲ್ಡ್‌ಫೈರ್ R70 ಸ್ಮಾರ್ಟ್‌ಫೋನ್ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ನೀಡಲಾಗಿದ್ದು, 10W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ 2.0 ಫೋರ್ಟ್ ಅನ್ನು ಬೆಂಬಲಿಸಲಿದೆ. ಅಲ್ಲದೆ 3.5mm ಆಡಿಯೋ ಜ್ಯಾಕ್ ಅನ್ನು ಸಹ ಬೆಂಬಲಿಸಲಿದೆ. ಇದರ ಜೊತೆಗೆ ಈ ಸ್ಮಾರ್ಟ್‌ಫೋನ್‌ನಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೆನ್ಸಾರ್ ಅನ್ನು ಸಹ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ ಸದ್ಯ ಭಾರತ ಮತ್ತು ಥೈಲ್ಯಾಂಡ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಬೆಲೆಯ ಬಗ್ಗೆ ಇನ್ನು ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಈ ಸ್ಮಾರ್ಟ್‌ಫೋನ್ ನೀಲಿ ಮತ್ತು ಕಪ್ಪು ಬಣ್ಣದ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470