ಹುವಾವೇ ಎಂಜಾಯ್‌ 10e ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಟೆಕ್‌ ಜಗತ್ತಿನಲ್ಲಿ ವಿಶ್ವ ಪ್ರಸಿದ್ಧಿ ಪಡೆದಿರುವ ಬ್ರ್ಯಾಂಡ್‌ಗಳಲ್ಲಿ ಒಂದಾದ ಹುವಾವೇ ಕಂಪೆನಿ ಹೊಸತನದ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಪ್ರತಿ ಸ್ಮಾರ್ಟ್‌ಫೋನ್‌ ಆವೃತ್ತಿಯಲ್ಲೂ ಆಕರ್ಷಕ ಫೀಚರ್ಸ್‌ಗಳನ್ನ ಪರಿಚಯಿಸುತ್ತಲೇ ಬಂದಿದೆ. ಇದೀಗ ತನ್ನ ಎಂಜಾಯ್‌ 10 ಸಿರೀಸ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಇದು ಹಿಂದಿನ ಆವೃತ್ತಿಗಿಂತ ಹೊಸ ವಿನ್ಯಾಸವನ್ನ ಹೊಂದಿದೆ ಎಂದು ಕಂಪೆನಿ ಹೇಳಿಕೊಂಡಿದೆ.

ಹೌದು

ಹೌದು, ಚೀನಾದ ಸ್ಮಾರ್ಟ್‌ಫೋನ್‌ ದೈತ್ಯ ಹುವಾವೇ ಕಂಪೆನಿ ತನ್ನ ಹೊಸ ಹುವಾವೇ ಎಂಜಾಯ್‌ 10e ಸ್ಮಾರ್ಟ್‌ಫೋನ್‌ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಹುವಾವೇ ಎಂಜಾಯ್‌ 10e ಸ್ಮಾರ್ಟ್‌ಫೋನ್‌, ಹುವಾವೇ ಎಂಜಾಯ್ 10, ಎಂಜಾಯ್ 10 ಎಸ್ ಮತ್ತು ಎಂಜಾಯ್ 10 ಪ್ಲಸ್ ಡಿವೈಸ್‌ನ ಮುಂದುವರೆದ ಆವೃತ್ತಿಯಾಗಿದೆ. ಸದ್ಯ ಈ ಆವೃತ್ತಿಯ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್‌ ನಾಚ್‌ ಶೈಲಿಯ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಒಳಗೊಂಡಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಈ ಸ್ಮಾರ್ಟ್‌ಫೋನ್‌ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಹೊಂದಿರುವ 6.3-ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ರಚನೆಯ ವಿನ್ಯಾಸ 20: 9 ಅನುಪಾತವನ್ನು ಹೊಂದಿದೆ. ಅಲ್ಲದೆ ಸ್ಕ್ರೀನ್-ಟು-ಬಾಡಿ 88.4% ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ ಹೊಂದಿದ್ದು, 267 ppi ಪಿಕ್ಸೆಲ್‌ ರೆಸಲ್ಯೂಶನ್‌ ಸಾಂದ್ರತೆಯನ್ನ ಒಳಗೊಂಡಿದೆ. ಇನ್ನು ವಿಡಿಯೋ ಕರೆಗಳು ಹಾಗೂ ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಹುವಾವೇ ಎಂಜಾಯ್‌ 10e ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ ಪಿ 35 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಅಂಡ್ರಾಯ್ಡ್‌ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು 4GB RAM ಮತ್ತು 64GB ಹಾಗೂ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯಲ್ಲಿ ಈ ಸ್ಮಾರ್ಟ್‌ಫೋನ್‌ ಲಭ್ಯವಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ f/ 1.8 ಲೆನ್ಸ್, ಎಲ್ಇಡಿ ಫ್ಲ್ಯಾಷ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ f/ 2.4 ಲೆನ್ಸ್‌ ಅನ್ನು ಹೊಂದಿದೆ. ಇದರ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಈ ಕ್ಯಾಮೆರಾ ಟಚ್‌ ಟು ಫೋಕಸ್‌, ಡಿಜಿಟಲ್‌ ಜೂಮ್‌, ಆಟೋ ಫ್ಲಾಶ್‌, ಹಾಗೂ 1080p ವೀಡಿಯೊ ರೆಕಾರ್ಡಿಂಗ್‌ ಸಾಮರ್ಥ್ಯವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಹುವಾವೇ ಎಂಜಾಯ್‌ 10e ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 10w ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌, 4G VOLTE ಅನ್ನು ಬೆಂಬಲಿಸಲಿದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಆಕ್ಸೆಲೆರೊಮೀಟರ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಚೀನಾದಲ್ಲಿ, ಹುವಾವೇ ಎಂಜಾಯ್ 10e ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಿದ್ದು, 4GB RAM ಮತ್ತು 64GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆ RMB 999 (ಅಂದಾಜು 10,300.ರೂ) ಆಗಿದ್ದರೆ, 6GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯ ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆ RMB 1,199 (ಸುಮಾರು 12,400 ರೂ.) ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮಿಡ್‌ನೈಟ್ ಬ್ಲ್ಯಾಕ್, ಪರ್ಲ್ ವೈಟ್ ಮತ್ತು ಎಮರಾಲ್ಡ್ ಗ್ರೀನ್ ಕಲರ್‌ಗಳ ಆಯ್ಕೆಯಲ್ಲಿ ಲಭ್ಯವಿದ್ದು, ಇದೇ ಮಾರ್ಚ್ 5 ರಿಂದ ಸ್ಮಾರ್ಟ್‌ಫೋನ್ ಮಾರಾಟವಾಗಲಿದೆ.

Best Mobiles in India

English summary
Huawei Enjoy 10e is the fourth smartphone in the Enjoy 10 series. It comes with a waterdrop notch display and is powered by MediaTek Helio P35 SoC.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X