ಹುವಾವೇ ಎಂಜಾಯ್ 20 ಮತ್ತು ಎಂಜಾಯ್ 20 ಪ್ಲಸ್‌ ಸ್ಮಾರ್ಟ್‌ಫೋನ್ ಲಾಂಚ್!

|

ಹುವಾವೇ ಸಂಸ್ಥೆಯು ಎಂಜಾಯ್ 20 ಸ್ಮಾರ್ಟ್‌ಫೋನ್‌ ಸರಣಿಯನ್ನು ಈಗ ಬಿಡುಗಡೆ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್ ಸರಣಿಯು ಎಂಜಾಯ್ 20 ಮತ್ತು ಎಂಜಾಯ್ 20 ಪ್ಲಸ್‌ ಮಾದರಿಗಳನ್ನು ಒಳಗೊಂಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ತ್ರಿವಳಿ ಕ್ಯಾಮೆರಾ ಹಾಗೂ ಅಧಿಕ ಪ್ರೊಸೆಸರ್‌ನಂತಹ ಆಕರ್ಷಕ ಫೀಚರ್ಸ್‌ಗಳನ್ನು ಪಡೆದಿವೆ.

ಹುವಾವೇ

ಹೌದು, ಹುವಾವೇ ಸಂಸ್ಥೆಯು ಎಂಜಾಯ್ 20 ಮತ್ತು ಎಂಜಾಯ್ 20 ಪ್ಲಸ್‌ ಸ್ಮಾರ್ಟ್‌ಫೋನ್‌ಗಳನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಮೀಡಿಯಾಟೆಕ್ Dimensity 720 ಪ್ರೊಸೆಸರ್‌ ಒಳಗೊಂಡಿವೆ. ಹಾಗೆಯೇ ಆಂಡ್ರಾಯ್ಡ್ 10 ಓಎಸ್‌ ಸಪೋರ್ಟ್‌ ಸಹ ಪಡೆದುಕೊಂಡಿವೆ. ಇನ್ನುಳಿದಂತೆ ಎಂಜಾಯ್ 20 ಮತ್ತು ಎಂಜಾಯ್ 20 ಪ್ಲಸ್‌ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳೆನು ಹಾಗೂ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಎಂಜಾಯ್ 20 ಪ್ಲಸ್‌-ಫೀಚರ್ಸ್‌

ಎಂಜಾಯ್ 20 ಪ್ಲಸ್‌-ಫೀಚರ್ಸ್‌

ಎಂಜಾಯ್ 20 ಪ್ಲಸ್‌ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್‌ ರೆಸಲ್ಯೂಶನ್ ಜೊತೆಗೆ 6.63-ಇಂಚಿನ ಪೂರ್ಣ-ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 20: 9 ಆಕಾರ ಅನುಪಾತ ಹೊಂದಿದ್ದು, ಸ್ಕ್ರೀನಿನ ರೀಫ್ರೇಶ್ ರೇಟ್ 90Hz ಆಗಿದೆ. ಇನ್ನು ಈ ಫೋನ್ ಮೀಡಿಯಾಟೆಕ್ Dimensity 720 SoC ಪ್ರೊಸೆಸರ್ ಅನ್ನು ಹೊಂದಿದ್ದು, ಜೊತೆಗೆ 8GB RAM+128GB ಸ್ಟೋರೇಜ್ ಅನ್ನು ಹೊಂದಿದೆ.

ಟ್ರಿಪಲ್

ಎಂಜಾಯ್ 20 ಪ್ಲಸ್‌ ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ತೃತೀಯ ಕ್ಯಾಮೆರಾ ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್‌ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,200mAh ಬ್ಯಾಟರಿಯನ್ನು ಪಡೆದಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ.

ಎಂಜಾಯ್ 20-ಫೀಚರ್ಸ್‌

ಎಂಜಾಯ್ 20-ಫೀಚರ್ಸ್‌

ಎಂಜಾಯ್ 20 ಸ್ಮಾರ್ಟ್‌ಫೋನ್ 720x1,600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 6.6-ಇಂಚಿನ ಪೂರ್ಣ-ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ Dimensity 720 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಜೊತೆಗೆ 6GB/128GB ಸ್ಟೋರೇಜ್ ಆಯ್ಕೆ ಹೊಂದಿದೆ.

ಎಂಜಾಯ್ 20

ಎಂಜಾಯ್ 20 ಫೋನ್ ಸಹ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 5 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ತೃತೀಯ ಕ್ಯಾಮೆರಾ ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 8 ಎಂಪಿ ಸೆನ್ಸಾರ್‌ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಪಡೆದಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹೊಸದಾಗಿ ಲಾಂಚ್ ಆಗಿರುವ ಎಂಜಾಯ್ 20 ಮತ್ತು ಎಂಜಾಯ್ 20 ಪ್ಲಸ್‌ ಸ್ಮಾರ್ಟ್‌ಫೋನ್ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿವೆ. ಎಂಜಾಯ್ 20 ಫೋನಿನ ಆರಂಭಿಕ ವೇರಿಯಂಟ್ ಬೆಲೆಯು CNY 1,699 (ಭಾರತದಲ್ಲಿ ಅಂದಾಜು 18,200ರೂ). ಅದೇ ರೀತಿ ಎಂಜಾಯ್ 20 ಪ್ಲಸ್‌ ಆರಂಭಿಕ ವೇರಿಯಂಟ್ ಬೆಲೆಯು CNY 2,299 (ಭಾರತದಲ್ಲಿ ಅಂದಾಜು 24,700ರೂ) ಎನ್ನಲಾಗಿದೆ.

Best Mobiles in India

English summary
Huawei Enjoy 20 and Enjoy 20 Plus both have 128GB of onboard storage.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X