ಹುವಾವೇ ಎಂಜಾಯ್ 20 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ!
ಟೆಕ್ ವಲಯದಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆನೂ ಭರವಿಲ್ಲ. ಹೇಳಿಕೇಳಿ ಇದು ಸ್ಮಾರ್ಟ್‌ಫೋನ್ ಜಮಾನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇದೆ. ಈಗಾಗಲೇ ಹಲವು ಕಂಪೆನಿಗಳು ತಮ್ಮ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿವೆ. ತಮ್ಮ ವಿಶೇಷ ಫೀಚರ್ಸ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರಾಂಡ್ ಆಗಿ ಗುರುತಿಸಿಕೊಂಡಿವೆ. ಇದರಲ್ಲಿ ಹುವಾವೇ ಕಂಪೆನಿ ಕೂಡ ಒಂದಾಗಿದ್ದು, ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ಹುವಾವೇ ಕಂಪೆನಿ ತನ್ನ ಹೊಸ 5G ಸ್ಮಾರ್ಟ್‌ಫೋನ್ ಹುವಾವೇ ಎಂಜಾಯ್ 20 ಪ್ರೊ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 800 SoC ಪ್ರೊಸೆಸರ್ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಹುವಾವೇ ಎಂಜಾಯ್ 20ಪ್ರೊ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿನ್ಯಾಸ ಹಾಗೂ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಹುವಾವೇ ಎಂಜಾಯ್ 20 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದ್ದು, 6.5-ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನ ಹೊಂದಿದ್ದು, 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಉತ್ತಮ ವಿನ್ಯಾಶ ಹೊಂದಿದ್ದು, ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಇಎಂಯುಐ 10.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಇಂಟರ್ ಸ್ಟೊರೇಜ್ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವೆರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಹುವಾವೇ ಎಂಜಾಯ್ 20 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,000mAh ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 22.5W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G , 4G VOLTE, ವೈ-ಫೈ, ಬ್ಲೂಟೂತ್, GPS ,ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್ ಮತ್ತು ಮ್ಯಾಗ್ನೆಟೋಮೀಟರ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಹುವಾವೇ ಎಂಜಾಯ್ 20 ಪ್ರೊ ಸ್ಮಾರ್ಟ್‌ಫೋನ್ CNY1,999 (ಸುಮಾರು 21,500 ರೂ)ಗೆ ನಿಗದಿಪಡಿಸಲಾಗಿದೆ, ಮತ್ತು ಇದರ 8GB RAM ಮಾದರಿಗೆ CNY2,299 (ಸುಮಾರು 24,800 ರೂ.) ಬೆಲೆ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಎರಡೂ ಆವೃತ್ತಿಗಳನ್ನು ಡಾರ್ಕ್ ಬ್ಲೂ, ಗ್ಯಾಲಕ್ಸಿ ಸಿಲ್ವರ್ ಮತ್ತು ಮ್ಯಾಜಿಕ್ ನೈಟ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ನೀಡಲಾಗುವುದು ಎಂದು ಕಂಪೆನಿ ಹೇಳಿಕೊಂಡಿದೆ.


Click it and Unblock the Notifications








