ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ ಲಾಂಚ್: ಡ್ಯುಯಲ್‌ ಕ್ಯಾಮೆರಾ!

|

ಹುವಾವೇ ಮೊಬೈಲ್ ತಯಾರಿಕಾ ಸಂಸ್ಥೆಯು ಈಗಾಗಲೇ 'ಎಂಜಾಯ್' ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿ ಗ್ರಾಹಕರು ಗಮನ ಸೆಳೆದಿದೆ. ಇತ್ತೀಚಿಗೆ ಹುವಾವೇ ಎಂಜಾಯ್ ಎಂಜಾಯ್ 20 SE ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿತ್ತು. ಅದರ ಬೆನ್ನಲ್ಲೇ ಈಗ ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ ಅನ್ನು ಇಂದು ಬಿಡುಗಡೆ ಮಾಡಿದೆ. ಈ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ P35 SoC ಪ್ರೊಸೆಸರ್ ಬಲವನ್ನು ಒಳಗೊಂಡಿದೆ.

ಹುವಾವೇ

ಹೌದು, ಹುವಾವೇ ಸಂಸ್ಥೆಯು ಹೊಸದಾಗಿ ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ ಅನ್ನು ಇಂದು (ಅ.20) ಚೀನಾದಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಮಾದರಿಯಲ್ಲಿ ಕಾಣಿಸಿಕೊಂಡಿದ್ದು, 4GB RAM ಮತ್ತು 128GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನಿನ ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಜೊತೆಗೆ ಹುವಾವೇ ಸೂಪರ್ ಸೌಂಡ್ ಅನ್ನು ಹೊಂದಿದೆ ಇನ್ನುಳಿದಂತೆ ಎಂಜಾಯ್ 20e ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್‌ ರೆಸಲ್ಯೂಶನ್ ಜೊತೆಗೆ 6.3 ಇಂಚಿನ ಹೆಚ್‌ಡಿ ಪ್ಲಸ್‌ TFT IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 278ppi ಪಿಕ್ಸಲ್ ಡೆನಸಿಟಿ ಹೊಂದಿರುವ ಜೊತೆಗೆ 16.7 ಮಿಲಿಯನ್ ಕಲರ್ಸ್‌ ಹೊಂದಿದೆ. ಹಾಗೆಯೇ 70 ಪರ್ಸೆಂಟ್ NTSC ಕವರೇಜ್ ಹೊಂದಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ P35 SoC ಪ್ರೊಸೆಸರ್ ಹೊಂದಿದೆ. ಇದಕ್ಕೆ ಪೂರಕವಾಗಿ ಹಾರ್ಮನಿ ಓಎಸ್‌ 2 ಸಪೋರ್ಟ್‌ ಪಡೆದಿದೆ. ಈ ಫೋನ್ 4GB RAM ಮತ್ತು 64GB/128GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ 512GB ಮೆಮೊರಿ ಹೆಚ್ಚಿಸುವ ಅವಕಾಶ ಪಡೆದಿದೆ.

ಕ್ಯಾಮೆರಾ ರಚನೆ ಮತ್ತು ಸೆನ್ಸಾರ್

ಕ್ಯಾಮೆರಾ ರಚನೆ ಮತ್ತು ಸೆನ್ಸಾರ್

ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಹಾಗೆಯೇ ಎಡಿಟಿಂಗ್ ಆಯ್ಕೆಗಳನ್ನು ಇದು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ಇತರೆ ಸೌಲಭ್ಯಗಳು

ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ 10W ಸಾಮರ್ಥ್ಯ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್, USB OTG ಮತ್ತು ಮೈಕ್ರೋ-USB ಪೋರ್ಟ್ ಸೇರಿವೆ. ಆನ್‌ಬೋರ್ಡ್ ಸೆನ್ಸರ್‌ಗಳು ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ದಿಕ್ಸೂಚಿ, ಸಾಮೀಪ್ಯ ಸೆನ್ಸರ್ ಮತ್ತು ಗ್ರಾವಿಟಿ ಸೆನ್ಸರ್ ಅನ್ನು ಒಳಗೊಂಡಿವೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಹುವಾವೇ ಎಂಜಾಯ್ 20e ಸ್ಮಾರ್ಟ್‌ಫೋನ್ 4GB RAM + 128GB ಮತ್ತು 4GB RAM/64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. 4GB RAM/64GB ಸ್ಟೋರೇಜ್‌ ವೇರಿಯಂಟ್‌ ಬೆಲೆ ಚೀನಾದಲ್ಲಿ CNY 999 (ಭಾರತದಲ್ಲಿ ಅಂದಾಜು 11,700ರೂ) ಆಗಿದೆ.

Most Read Articles
Best Mobiles in India

English summary
Huawei Enjoy 20e is powered by an octa-core MediaTek Helio P35 SoC paired with 4GB of RAM and up to 128GB of onboard storage.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X