ಹುವಾವೇ ಎಂಜಾಯ್‌Z 5G ಸ್ಮಾರ್ಟ್‌ಫೋನ್‌ ಲಾಂಚ್‌!

|

ಚೀನಾದ ಟೆಕ್‌ ದೈತ್ಯ ಹುವಾವೇ ಜಾಗತಿಕವಾಗಿ ಪ್ರಸಿದ್ಧಿಯಾಗಿರುವ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ಅಲ್ಲದೆ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿದೆ. ಇನ್ನು ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿದೆ. ಸದ್ಯ ಇದೀಗ ಹುವಾವೇ ಎಂಜಾಯ್ Z 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಹುವಾವೇ ಎಂಜಾಯ್‌ Z 5G ಸ್ಮಾರ್ಟ್‌ಫೋನ್‌

ಹೌದು, ಹುವಾವೇ ಕಂಪೆನಿ ತನ್ನ ಹೊಸ ಮಾದರಿಯ ಹುವಾವೇ ಎಂಜಾಯ್‌ Z 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಚೀನಾದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ಹುವಾವೇ ಕಂಪೆನಿ ತನ್ನದೇ ಆದ ಕಿರಿನ್ ಪ್ರೊಸೆಸರ್ ಬದಲಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 800 5G ಚಿಪ್‌ಸೆಟ್ ಅನ್ನು ಬಳಸಿರುವ ಹುವಾವೇ ಕಂಪನಿಯ ಮೊದಲ ಸ್ಮಾರ್ಟ್‌ಫೋನ್ ಇದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಹುವಾವೇ ಎಂಜಾಯ್‌ Z 5G ಸ್ಮಾರ್ಟ್‌ಫೋನ್‌ 2400 x 1080 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ + ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್‌ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 180Hz ನ ಟಚ್‌ ಮಾಡ್ಯೂಲ್‌ ರೇಟ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಡಿಸ್‌ಪ್ಲೇಯು 91.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, ಡ್ಯೂಡ್ರಾಪ್ ದರ್ಜೆ ವಿನ್ಯಾಸವನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 800 ಪ್ರೊಸೆಸರ್ ಅನ್ನು ಹೊಂದಿದ್ದು, ಇದು ಇದು ಆಕ್ಟಾ-ಕೋರ್ 5 ಜಿ ಚಿಪ್‌ಸೆಟ್ ಆಗಿದೆ. ಅಲ್ಲದೆ ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್ 6GB RAM ಮತ್ತು 64GB ಇಂಟರ್‌ ಸ್ಟೋರೇಜ್ ಅನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ f/ 2.4 ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನ ನೀಡಲಾಗಿದೆ. ಜೊತೆಗೆ ಇದರಲ್ಲಿ ಉತ್ತಮ ವೀಡಿಯೊ ರೆಕಾರ್ಡಿಂಗ್‌ಗಾಗಿ ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ ಅನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಹುವಾವೇ ಎಂಜಾಯ್‌ Z 5G ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 22.5W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್ 6GB RAM ಮತ್ತು 64GB ಇಂಟರ್‌ ಸ್ಟೋರೇಜ್ ರೂಪಾಂತರದ ಬೆಲೆ RMB 1,699 ಆಗಿದೆ. ಇದಲ್ಲದೆ 8GB RAM ಮತ್ತು 128GB ಆಂತರಿಕ ಸಂಗ್ರಹಣೆ ಸಾಮರ್ಥ್ಯದ ರೂಪಾಂತರದ ಬೆಲೆ RMB 2,199 (ಸುಮಾರು 23,400 ರೂ.) ಬೆಲೆಯನ್ನ ನಿಗದಿಪಡಿಸಲಾಗಿದೆ. ಡಾರ್ಕ್‌ ಬ್ಲೂ, ಸಕುರಾ ಸ್ನೋ ಕ್ಲಿಯರ್ ಸ್ಕೈ ಮತ್ತು ಮ್ಯಾಜಿಕ್ ನೈಟ್ ಬ್ಲ್ಯಾಕ್‌ ಕಲರ್‌ಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Huawei Enjoy Z 5G ditches Kirin processor for MediaTek Dimensity 800 5G processor. This makes it one of the cheapest 5G smartphone right now.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X