Just In
Don't Miss
- News
ಬೆಂಗಳೂರಿನ ಸಬ್ಅರ್ಬನ್ ರೈಲು ಕಾರಿಡಾರ್ಗಳಿಗೆ ಹೂವುಗಳ ಹೆಸರು
- Movies
ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ನಟ ಜೂ.ಎನ್ ಟಿ ಆರ್: ಯಾವ ಶೋ?
- Sports
ಐಎಸ್ಎಲ್: ಗೋವಾಕ್ಕೆ ಫೈನಲ್ ಪಂಚ್ ನೀಡುವ ಗುರಿಯಲ್ಲಿ ಮುಂಬೈ
- Finance
ಮಾರ್ಚ್ 08ರಂದು ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ
- Lifestyle
ದಿನ ಭವಿಷ್ಯ: ನಿಮ್ಮ ರಾಶಿ ಸೋಮವಾರ ಹೇಗಿರಲಿದೆ ನೋಡಿ
- Automobiles
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹುವಾವೇ ಮೇಟ್ X2 ಸ್ಮಾರ್ಟ್‌ಫೋನ್ ಬಿಡುಗಡೆ!..ಫೋಲ್ಡಿಂಗ್ ಡಿಸ್‌ಪ್ಲೇ ವಿಶೇಷ!
ಪ್ರತಿಷ್ಠಿತ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಹುವಾವೇ ಸಂಸ್ಥೆಯು ಈಗಾಗಲೇ ಹಲವು ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಆಕರ್ಷಸಿದೆ. ಇದೀಗ ಕಂಪನಿಯು ತನ್ನ ಬಹುನಿರೀಕ್ಷಿತ ಹುವಾವೇ ಮೇಟ್ X2 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ಹುವಾವೇ ಮೇಟ್ X ಫೋನಿನ ಮುಂದಿನ ಆವೃತ್ತಿ ಇದಾಗಿದೆ. ಹೊಸ ಹುವಾವೇ ಮೇಟ್ X2 ಸ್ಮಾರ್ಟ್‌ಫೋನ್ ಫೋಲ್ಡಿಂಗ್ ಡಿಸ್ಲೇ ಮಾದರಿಯಿಂದ ಗಮನ ಸೆಳೆದಿದೆ.

ಹೌದು, ಹುವಾವೇ ಸಂಸ್ಥೆಯು ನೂತನವಾಗಿ ಹುವಾವೇ ಮೇಟ್ X2 ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಸಂಪೂರ್ಣ ಹೈ ಎಂಡ್ ಫೀಚರ್ಸ್ ಫೀಚರ್ಸ್‌ಗಳನ್ನು ಒಳಗೊಂಡಿದೆ. ಆಕ್ಟಾ ಕೋರ್ ಕಿರನ್ 9000 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಇದರೊಂದಿಗೆ 8GB RAM ಮತ್ತು 512GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ಹುವಾವೇ ಮೇಟ್ X2 ಸ್ಮಾರ್ಟ್‌ಫೋನ್ ಸ್ಕ್ರೀನ್ ಫೋಲ್ಡ್ ಮಾದರಿಯಲ್ಲಿದ್ದು, ಹೊರ ಭಾಗ್ ಸ್ಕ್ರೀನ್ 1,160x2,700 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.45 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ OLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಒಳ ಸ್ಕ್ರೀನ್ 2,200x2,480 ಪಿಕ್ಸಲ್ ರೆಸಲ್ಯೂಶನ್ ಹೊಂದಿದ್ದು, 8 ಇಂಚಿನ OLED ಡಿಸ್‌ಪ್ಲೇಯನ್ನು ಪಡೆದಿದೆ. 90Hz ರೀಫ್ರೇಶ್ ರೇಟ್ ಹಾಗೂ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ.

ಯಾವ ಪ್ರೊಸೆಸರ್
ಹುವಾವೇ ಮೇಟ್ X2 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕಿರನ್ 9000 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲವನ್ನು ಪಡೆದಿದೆ. ಇದರೊಂದಿಗೆ ಈ 8GB RAM ಮತ್ತು 512GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ನ್ಯಾನೋ ಮೈಕ್ರೋ ಮೆಮೊರಿ ಕಾರ್ಡ್ ಮೂಲಕ 256GB ವರೆಗೂ ಹೆಚ್ಚುವರಿ ಬಾಹ್ಯ ಮೆಮೊರಿ ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ ವಿನ್ಯಾಸ
ಹುವಾವೇ ಮೇಟ್ X2 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಮೂರನೇ ಕ್ಯಾಮೆರಾವು 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ ಹಾಗೆಯೇ ನಾಲ್ಕನೇ ಕ್ಯಾಮೆರಾ 8ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿವೆ. ಇನ್ನು ಸೆಲ್ಫಿಗಾಗಿ 16-ಮೆಗಾಪಿಕ್ಸೆಲ್ ಸೆನ್ಸಾರ್ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ
ಹುವಾವೇ ಮೇಟ್ X2 ಸ್ಮಾರ್ಟ್‌ಫೋನ್ 4500mAh ಬ್ಯಾಟರಿ ಬ್ಯಾಕ್‌ಅಪ್ ಪವರ್ ಅನ್ನು ಹೊಂದಿದ್ದು, 55W ಸಾಮರ್ಥ್ಯ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಇದಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ಡ್ಯುಯಲ್-ಬ್ಯಾಂಡ್ ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್, ಎನ್ಎಫ್ಸಿ, ಮತ್ತು ಚಾರ್ಜಿಂಗ್ಗಾಗಿ ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ.

ಬೆಲೆ ಎಷ್ಟು?
ಹುವಾವೇ ಮೇಟ್ X2 ಸ್ಮಾರ್ಟ್‌ಫೋನ್ 8GB + 256GB ವೇರಿಯಂಟ್ ಬೆಲೆ ಚೀನಾದಲ್ಲಿ CNY 17,999 (ಭಾರತದಲ್ಲಿ ಅಂದಾಜು 2.01 ಲಕ್ಷ ಎನ್ನಲಾಗಿದೆ). ಅದೇ ರೀತಿ 8GB + 512GB ವೇರಿಯಂಟ್ ದರವು CNY 18,999 (ಭಾರತದಲ್ಲಿ ಅಂದಾಜು 2,12 ಲಕ್ಷ ಎನ್ನಲಾಗಿದೆ).
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190