Home
ಸುದ್ದಿಜಾಲ

ಹುವಾವೇ ಮೇಟ್‌ Xs ಫೊಲ್ಡೇಬಲ್ ಸ್ಮಾರ್ಟ್‌ಫೋನ್‌ ಬಿಡುಗಡೆ!

ಸ್ಮಾರ್ಟ್‌ಪೋನ್‌ ವಲಯದ ವಿಸ್ಮಯ ಅಂತಾನೇ ಕರೆಸಿಕೊಳ್ಳುವ ಫೊಲ್ಡೇಬಲ ಸ್ಮಾರ್ಟ್‌ಫೋನ್‌ ಈಗಾಗ್ಲೆ ಟೆಕ್‌ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸೌಂಡ್‌ ಮಾಡ್ತಿದೆ. ಇಂತಹದೊಂದು ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಬಹುದು ಅನ್ನೊ ನಿರೀಕ್ಷೆಯನ್ನು ಕಾಣದ ಸ್ಮಾರ್ಟ್‌ಫೋನ್‌ ಪ್ರಿಯರ ನಡುವೆ ಫೊಲ್ಡೇಬಲ್‌ ಸ್ಮಾರ್ಟ್‌ಫೋನ್‌ ಬಗ್ಗೆ ಭಾರಿ ಜನ್ರಪಿಯತೆಯನ್ನ ಪಡೆದುಕೊಂಡಿದೆ. ಇನ್ನು ಈಗಾಗ್ಲೆ ಮಾರುಕಟ್ಟೆಗೆ ಫೊಲ್ಡೇಬಲ್‌ ಸ್ಮಾರ್ಟ್‌ಫೋನ್‌ ಪರಿಚಯಿಸಿದ ಕೆಲವೇ ಕಲೆ ಕಂಪೆನಿಗಳಲ್ಲಿ ಹುವಾವೇ ಕಂಪೆನಿ ಕೂಡ ಒಂದಾಗಿದೆ. ಇದೀಗ ಹುವಾವೇ ಕಂಪೆನಿ ತನ್ನ ಮತ್ತೊಂದು ಹೊಸ ಫೊಲ್ಡೇಬಲ್‌ ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ.

ಹೌದು

ಹೌದು, ಚೀನಾದ ಟೆಕ್‌ ದೈತ್ಯ ಎನಿಸಿಕೊಂಡಿರುವ ಹುವಾವೇ ಸ್ಮಾರ್ಟ್‌ಫೋನ್‌ ಕಂಪೆನಿ ತನ್ನ ಹೊಸ ಹುವಾವೇ ಮೇಟ್‌ Xs ಫೊಲ್ಡೇಬಲ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈಗಾಗ್ಲೆ ಹುವಾವೇ ಮೇಟ್‌ ಫೊಲ್ಡೇಬಲ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿರುವ ಹುವಾವೇ ಈ ಮೇಟ್‌ Xs ಸ್ಮಾರ್ಟ್‌ಫೋನ್‌ ಅನ್ನು ಚೀನಾದ ಹೊರಗಿನ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದು, ಮಾರ್ಚ್‌ ತಿಂಗಳಿನಿಂದ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಹುವಾವೇ ಮೇಟ್‌ Xs ಫೊಲ್ಡೇಬಲ್‌ಸ್ಮಾರ್ಟಫೋನ್‌ 2200x2480 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಉತ್ತಮ ಪಿಕ್ಸೆಲ್‌ ಸಾಂದ್ರತೆಯನ್ನ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇಯು 8ಇಂಚು ಇರುವುದರಿಂದ ಪೂರ್ತಿ ತೆರೆದಾಗ ಟ್ಯಾಬ್‌ ಮಾದರಿಯಲ್ಲಿ ಕಾಣಲಿದ್ದು, ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವವನ್ನು ನೀಡಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಮೇಟ್ ಫೊಲ್ಡೇಬಲ್‌ ಹಾಗೂ ಮೇಟ್‌ Xs ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಒಂದೇ ತೆರನಾಗಿದ್ದು ವಿನ್ಯಾಸದಲ್ಲಿ ಸ್ವಲ್ಪ ಬದಲಾವಣೆಯಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಹಿಸಿಲಿಕಾನ್‌ಕಿರಿನ್‌ 990 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಇನ್ನು ಲಭ್ಯವಾಗಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಹುವಾವೇ ಮೇಟ್‌ Xs ಫೊಲ್ಡೇಬಲ್‌ಸ್ಮಾರ್ಟಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು ಮುಖ್ಯ ಕ್ಯಾಮೆರಾ 40ಮೆಗಾ ಪಿಕ್ಸೆಲ್‌, ಎರಡನೇ ಕ್ಯಾಮೆರಾ 16ಮೆಗಾ ಪಿಕ್ಸೆಲ್‌ , ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಆರ್‌ ಹೊಂದಿದ್ದು, ನಾಳ್ಕನೇ ಕ್ಯಾಮೆರಾ ಹೊಂದಿರುವ ಮೆಗಾ ಪಿಕ್ಸೆಲ್‌ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದಲ್ಲದೆ ಸೆಲ್ಪಿ ಕ್ಯಾಮೆರಾದ ಫಿಚರ್ಸ್‌ಗಳ ಬಗ್ಗೆ ಕೂಡ ಮಾಹಿತಿಯನ್ನ ಕಂಪೆನಿ ಎಲ್ಲಿಯೂ ಬಿಟ್ಟುಕೊಟ್ಟಿಲ್ಲ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದ್ದು, ಉತ್ತಮ ಬ್ಯಾಟರಿ ಬಾಳಿಕೆಯನ್ನ ನೀಡಲಿದೆ. ಕಳೆದ ಆವೃತ್ತಿಯ ಸ್ಮಾರ್ಟ್‌ಫೋನ್‌ 45w ವೇಗದ ಚಾರ್ಜಿಂಗ್‌ಅನ್ನು ಬೆಂಬಲಿಸಿತ್ತು. ಆದರೆ ಈ ಸ್ಮಾರ್ಟ್‌ಫೋನ್‌ ವೇಗದ ಚಾರ್ಜಿಂಗ್‌ ಬೆಂಬಲದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಫೋರ್ಟ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹುವಾವೇ ಮೇಟ್‌ Xs ಫೊಲ್ಡೇಬಲ್‌ಸ್ಮಾರ್ಟಫೋನ್ ಸದ್ಯ ಯುಎಸ್‌ನಲ್ಲಿ ಬಿಡುಗಡೆಯಾಗಿದ್ದು, ಮಾರ್ಚ್‌ ತಿಂಗಳಲ್ಲಿ ತನ್ನ ಮಾರಾಟವನ್ನ ಆರಂಭಿಸಲಿದೆ. ಸದ್ಯ ಇದರ ಬೆಲೆ ಯುರೋ 2,499 (ಅಂದಾಜು 1,93,000 ರೂ.) ಆಗಿದೆ. ಚೀನಾದ ಮಾರುಕಟ್ಟೆ ಬಿಟ್ಟು ಯುರೋಪ್‌ ರಾಷ್ಟ್ರಗಳಲ್ಲಿ ಈ ಸ್ಮಾರ್ಟ್‌ಫೋನ್‌ ಮಾರಾಟವಾಗಲಿದ್ದು, ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವುದರ ಬಗ್ಗೆ ಯಾವುದೇ ಮಾಹಿತಿಯನ್ನ ಕಂಪೆನಿ ಬಿಟ್ಟುಕೊಟ್ಟಿಲ್ಲ.

Best Mobiles in India

English summary
Huawei Mate Xs price is set at EUR 2,499 (roughly Rs. 1,93,000) and it will go on sale next month.to know more kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+