10.4 ಇಂಚಿನ ಡಿಸ್‌ಪ್ಲೇ ಹೊಂದಿರುವ ಹುವಾವೇ ಮೇಟ್‌ಪ್ಯಾಡ್‌ ಟ್ಯಾಬ್ಲೆಟ್‌ ಬಿಡುಗಡೆ!

|

ಚೀನಾದ ಟೆಕ್‌ ದೈತ್ಯ ಹುವಾವೇ ಟೆಕ್‌ ಮಾರುಕಟ್ಟೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ ಪ್ರಾಡಕ್ಟ್‌ಗಳಿಂದಲೇ ಗುರುತಿಸಿಕೊಂಡಿದೆ. ತನ್ನ ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಜಾಗತಿಕವಾಗಿ ಉತ್ತಮ ಮಾರುಕಟ್ಟೆಯನ್ನ ಹೊಂದಿದೆ. ಇನ್ನು ಟೆಕ್‌ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್‌ ಮಾತ್ರವಲ್ಲದೆ ತನ್ನ ಆಕರ್ಷಕ ಮಾದರಿಯ ಟ್ಯಾಬ್‌ಗಳಿಂದಲೂ ಹುವಾವೇ ಸೈ ಎನಿಸಿಕೊಂಡಿದೆ. ಅಲ್ಲದೆ ತನ್ನ ಗ್ರಾಹಕರಿಗೆ ಪ್ರತಿ ಭಾರಿಯು ಹೊಸ ಫೀಚರ್ಸ್‌ಗಳನ್ನ ಪರಿಚಯಿಸುವ ಮೂಲಕ ನೆಚ್ಚಿನ ಬ್ರ್ಯಾಂಡ್‌ ಎಂದೆನಿಸಿಕೊಂಡಿದೆ.

ಚೀನಾದ

ಹೌದು, ಚೀನಾದ ಸ್ಮಾರ್ಟ್‌ಫೋನ್‌ ದೈತ್ಯ ಎನಿಸಿಕೊಂಡಿರುವ ಹುವಾವೇ ತನ್ನ ಹೊಸ ಹುವಾವೇ ಮೇಟ್‌ ಪ್ಯಾಡ್‌ ಟ್ಯಾಬ್ಲೆಟ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಟ್ಯಾಬ್‌ ಹೊಸ ಆಕರ್ಷಕ ವಿನ್ಯಾಸವನ್ನ ಹೊಂದಿದ್ದು, ಇಂದಿನ ಯುವಜನತೆಯ ಆಶಯಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಇನ್ನು ಈ ಟ್ಯಾಬ್‌ 10.4 ಇಂಚಿನ ಡಿಸ್ಪ್ಲೇ ಹೊಂದಿದ್ದು, ಉತ್ತಮ ಸ್ಕ್ರೀನ್‌ ಅನ್ನು ಹೊಂದಿದೆ. ಅಲ್ಲದೆ ಈ ಹುವಾವೇ ಮೇಟ್‌ಪ್ಯಾಡ್, 7250mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಅಷ್ಟಕ್ಕೂ ಈ ಟ್ಯಾಬ್‌ ಇನ್ನು ಯಾವೆಲ್ಲಾ ಫೀಚಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಹುವಾವೇ ಮೇಟ್‌ಪ್ಯಾಡ್ ಟ್ಯಾಬ್‌ 2000x1200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 10.4-ಇಂಚಿನ ಡಿಸ್‌ಪ್ಲೆಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಐಪಿಎಸ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 470 ನಿಟ್ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ. ಅಲ್ಲದೆ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್

ಪ್ರೊಸೆಸರ್

ಈ ಟ್ಯಾಬ್ಲೆಟ್ ಕಂಪನಿಯ ಸ್ವಂತ ಆಕ್ಟಾ-ಕೋರ್ ಕಿರಿನ್ 810 ಪ್ರೊಸೆಸರ್ ಎಆರ್ಎಂ ಮಾಲಿ-ಜಿ 52 ಎಂಪಿ 6 ಜಿಯುಪಿ ಹೊಂದಿದೆ. ಇನ್ನು ಈ ಟ್ಯಾಬ್ಲೆಟ್‌ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಈ ಟ್ಯಾಬ್ಲೆಟ್‌ 4GB RAM 64GB, 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಟ್ಯಾಬ್ಲೆಟ್‌ ವೀಡಿಯೊ ಕರೆ ಮಾಡಲು ಅನುಕೂಲವಾಗುವಂತೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅಲ್ಲದೆ 8 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಜೊತೆಗೆ ಟಚ್‌ ಟು ಫೋಕಸ್‌, ಹಾಗೂ ಜೂಮ್‌ ಡಿಜಿಟಲ್‌ ಫೀಚರ್ಸ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಹುವಾವೇ ಮೇಟ್‌ಪ್ಯಾಡ್ 7250mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಅನ್ನು ಬೆಂಬಲಿಸಲಿದೆ. ಅಲ್ಲದೆ ಈ ಟ್ಯಾಬ್ಲೆಟ್ ನಾಲ್ಕು ಮೈಕ್ರೊಫೋನ್ ಮತ್ತು ಕ್ವಾಡ್ ಸ್ಪೀಕರ್‌ಗಳನ್ನು ಹೊಂದಿದೆ. ಇದು EMUI 10.1 ಸಾನ್ಸ್ ಗೂಗಲ್ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಸ್ಟೈಲಸ್, ಎಂ-ಪೆನ್ಸಿಲ್ ಸಹ ಟ್ಯಾಬ್ಲೆಟ್ನೊಂದಿಗೆ ಬರುತ್ತದೆ. ಇನ್ನು ಈ ಹುವಾವೇ ಮೇಟ್‌ಪ್ಯಾಡ್ ಚೀನಾದಲ್ಲಿ CNY 1,899 ಆರಂಭಿಕ ಬೆಲೆಗೆ (ಅಂದಾಜು 20,400 ರೂ.) ಲಭ್ಯವಾಗಲಿದೆ.

Most Read Articles
Best Mobiles in India

English summary
Huawei has launched a new tablet in China. Check full price, specifications, and features of the new device.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X