ಹುವಾವೇ ನೋವಾ 10 SE ಲಾಂಚ್! ಕೆಲವೇ ನಿಮಿಷಗಳಲ್ಲಿ 100% ಚಾರ್ಜ್ ಸಾಮರ್ಥ್ಯ!
ಹುವಾವೇ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ತನ್ನ ವಿವಿಧ ಸ್ಮಾರ್ಟ್‌ಫೋನ್‌ಗಳ ಮೂಲಕ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಸದ್ಯ ಇದೀಗ ಹುವಾವೇ ಕಂಪೆನಿ ಹೊಸ ಹುವಾವೇ ನೋವಾ 10 SE ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಒಳಗೊಂಡಿದೆ.
ಹೌದು, ಹುವಾವೇ ಕಂಪನಿ ಹೊಸ ಹುವಾವೇ ನೋವಾ 10 SE ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಹುವಾವೇ ನೋವಾ 10 SE ಡಿಸ್‌ಪ್ಲೇ ರಚನೆ ಹೇಗಿದೆ?
ಹುವಾವೇ ನೋವಾ 10 SE ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 270Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಡಿಸ್‌ಪ್ಲೇ ಹೋಲ್-ಪಂಚ್ ಕಟೌಟ್ ಅನ್ನು ಹೊಂದಿದೆ.
ಹುವಾವೇ ನೋವಾ 10 SE ಪ್ರೊಸೆಸರ್ ಯಾವುದು?
ಹುವಾವೇ ನೋವಾ 10 SE ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು HarmonyOS 2 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಮೆಮೊರಿ ಕಾರ್ಡ್ ಅನ್ನು ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಹುವಾವೇ ನೋವಾ 10 SE ಕ್ಯಾಮೆರಾ ಸೆಟ್‌ಅಪ್?
ಹುವಾವೇ ನೋವಾ 10 SE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಸೂಪರ್ ವೈಡ್ ಆಂಗಲ್, ಸೂಪರ್ ಮ್ಯಾಕ್ರೋ, ಪೋರ್ಟ್ರೇಟ್ ಮೋಡ್, ಪನೋರಮಾ, ಟೈಮ್-ಲ್ಯಾಪ್ಸ್ ಫೋಟೋಗ್ರಫಿಯನ್ನು ಬೆಂಬಲಿಸಲಿದೆ.
ಹುವಾವೇ ನೋವಾ 10 SE ಬ್ಯಾಟರಿ ಬ್ಯಾಕ್‌ಅಪ್?
ಹುವಾವೇ ನೋವಾ 10 SE ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂಧ 38 ನಿಮಿಷಗಳಲ್ಲಿ ಫೋನ್ ಅನ್ನು 100% ಚಾರ್ಜ್ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, ಬ್ಲೂಟೂತ್ 5, GPS, AGPS, NFC, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸಾರ್, ಕಂಪಾಸ್, ಗುರುತ್ವಾಕರ್ಷಣೆ ಸಂವೇದಕ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ಹುವಾವೇ ನೋವಾ 10 SE ಬೆಲೆ ಮತ್ತು ಲಭ್ಯತೆ
ಹುವಾವೇ ನೋವಾ 10 SE ಸ್ಮಾರ್ಟ್‌ಫೋನ್ 8GB RAM + 128GB ಇಂಟರ್ ಸ್ಟೋರೇಜ್ ಆಯ್ಕೆಯ ಬೆಲೆ CNY 1,949 (ಸುಮಾರು 48,900ರೂ) ಗೆ ನಿಗದಿಪಡಿಸಲಾಗಿದೆ. ಹಾಗೆಯೇ 8GB RAM + 256GB ಇಂಟರ್ ಸ್ಟೋರೇಜ್ ಆಯ್ಕೆಯು CNY 2,249 (ಸುಮಾರು 53,600ರೂ) ಬೆಲೆಯನ್ನು ಹೊಂದಿದೆ. ಇದು ಗೋಲ್ಡ್ ಬ್ಲ್ಯಾಕ್ ಮತ್ತು ಮಿಂಟ್ ಗ್ರೀನ್ ಬಣ್ಣಗಳ ಜೊತೆಗೆ ಸಿಲ್ವರ್ ಶೇಡ್ ಕಲರ್ ಆಯ್ಕೆಗಳಲ್ಲಿ ದೊರೆಯಲಿದೆ.


Click it and Unblock the Notifications








