Home
ಸುದ್ದಿಜಾಲ

ಸದ್ಯದಲ್ಲೇ ಲಾಂಚ್‌ ಆಗಲಿದೆ ಹುವಾವೇ ನೋವಾ 11 SE ಫೋನ್‌! ಫೀಚರ್ಸ್‌ ನಿರೀಕ್ಷೆ ಏನು?

ಟೆಕ್‌ ಲೋಕದಲ್ಲಿ ಹುವಾವೇ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಉತ್ತಮ ಮಾರುಕಟ್ಟೆಯಿದೆ. ತನ್ನ ವಿಭಿನ್ನ ಸ್ಮಾರ್ಟ್‌ಫೋನ್‌ಗಳಿಂದ ಹುವಾವೇ ಕಂಪೆನಿ ಸೈ ಎನಿಸಿಕೊಂಡಿದೆ. ಅದರ ಮುಂದುವರೆದ ಭಾಗವೆಂಬಂತೆ ಹೊಸ ಹುವಾವೇ ನೋವಾ 11 SE ಸ್ಮಾರ್ಟ್‌ಫೋನ್‌ ಪರಿಚಯಿಸಲು ತಯಾರಿ ನಡೆಸಿದೆ. ಇದೀಗ ಈ ಫೋನ್‌ನ ಫೀಚರ್ಸ್‌ ಬಹಿರಂಗವಾಗಿದೆ.

ಹೌದು, ಹುವಾವೇ ನೋವಾ 11 SE ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಇನ್ನು ಹೆಸರಿಸದ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ಯದಲ್ಲೇ ಲಾಂಚ್‌ ಆಗಲಿದೆ ಹುವಾವೇ ನೋವಾ 11 SE ಫೋನ್‌! ಫೀಚರ್ಸ್‌ ನಿರೀಕ್ಷೆ ಏನು

ಹುವಾವೇ ನೋವಾ 11 SE ಡಿಸ್‌ಪ್ಲೇ ರಚನೆ
ಹುವಾವೇ ನೋವಾ 11 SE ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 10 ಬಿಟ್‌ ಕಲರ್‌ಗಳನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ.

ಹುವಾವೇ ನೋವಾ 11 SE ಪ್ರೊಸೆಸರ್‌ ಯಾವುದು?
ಹುವಾವೇ ನೋವಾ 11 SE ಸ್ಮಾರ್ಟ್‌ಫೋನ್‌ ಅಜ್ಞಾತ 2.4GHz ಚಿಪ್‌ಸೆಟ್‌ನಿಂದ ಚಾಲಿತವಾಗಿದ್ದು, 4G ಸಂಪರ್ಕವನ್ನು ನೀಡುತ್ತದೆ. ಇದು ಹಾರ್ಮನಿ OS 4.0 ನೊಂದಿಗೆ ಪೂರ್ವ ಲೋಡ್ ಆಗುತ್ತದೆ. ಹಾಗೆಯೇ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್ ರೂಪಾಂತರದ ಆಯ್ಕೆಗಳಲ್ಲಿ ನೀಡಲಾಗುವುದು ಎಂದು ಅಂದಾಜಿಸಲಾಗಿದೆ.

ಹುವಾವೇ ನೋವಾ 11 SE ಕ್ಯಾಮೆರಾ ಸೆಟ್‌ಅಪ್‌
ಹುವಾವೇ ನೋವಾ 11 SE ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾಗಳೊಂದಿಗೆ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಹುವಾವೇ ನೋವಾ 11 SE ಬ್ಯಾಟರಿ ಮತ್ತು ಇತರೆ
ಹುವಾವೇ ನೋವಾ 11 SE ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ನೊಂದಿಗೆ ಬರಲಿದೆ ಎಂದು ವರದಿಯಾಗಿದೆ.

ಹುವಾವೇ ನೋವಾ 11 SE ಬೆಲೆ ಮತ್ತು ಲಭ್ಯತೆ
ಹುವಾವೇ ನೋವಾ 11 SE ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನೊಂದಿಗೆ ಬರಲಿದೆ. ಇದರ ನಿಖರವಾದ ಬೆಲೆ ವಿವರಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗುವ ನಿರೀಕ್ಷೆಯಿದೆ.

ಇನ್ನು ಇತ್ತೀಚಿಗೆ ಹುವಾವೇ ಕಂಪೆನಿ ಹೊಸ ಹುವಾವೇ ಮೇಟ್‌ 60 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಇನ್ನು ಸ್ಮಾರ್ಟ್‌ಫೋನ್‌ 6.82 ಇಂಚಿನ OLED LTPO ಡಿಸ್‌ಪ್ಲೇಯನ್ನು ಹೊಂದಿದೆ. ಇದು 1Hz- 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದ್ದು, 10-ಬಿಟ್ ಬಣ್ಣಗಳು, P3 ಬಣ್ಣದ ಹರವು ಹೊಂದಿದೆ. ಹುವಾವೇ ಮೇಟ್‌ 60 ಪ್ರೊ ಪ್ಲಸ್‌ ಪ್ರೊಸೆಸರ್‌ ಸಾಮರ್ಥ್ಯ ಹುವಾವೇ ಮೇಟ್‌ 60 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಕಿರಿನ್ 9000s SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಹಾರ್ಮನಿ ಓಎಸ್ 4.0ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

Best Mobiles in India

English summary
Huawei Nova 11 SE smartphone full specifications Revealed
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+