Just In
Don't Miss
- Sports
ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಈ ತಂಡವೇ ಗೆಲ್ಲಲಿದೆ ಎಂದ ಮೈಕಲ್ ವಾನ್
- News
Breaking; ಕೋಲಾರ ಕ್ಷೇತ್ರವೇ ಏಕೆ, ಸಿದ್ದರಾಮಯ್ಯ ಪ್ರತಿಕ್ರಿಯೆ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Movies
"ಪಪ್ಪಾ ನಿನ್ನ ಬೈಸಿಪ್ಸ್ಗಿಂತ ನನ್ನ ಬೈಸಿಪ್ಸ್ ಗಟ್ಟಿ": ನಾನೇ ಬಾಹುಬಲಿ ಎಂದ ಯಥರ್ವ್
- Lifestyle
ತಿಂದ ಆಹಾರ ಸರಿಯಾಗಿ ಜೀರ್ಣವಾಗ್ತಿಲ್ವಾ ಹಾಗಾದ್ರೆ ಈ ಆಸನಗಳನ್ನ ಮಾಡಿ
- Finance
LIC Jeevan Umang: ದಿನಕ್ಕೆ 150 ರೂ ಹೂಡಿಕೆ ಮಾಡಿ, 10 ಲಕ್ಷ ಪಡೆಯಿರಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶೀಘ್ರದಲ್ಲೇ ಬರಲಿದೆ ಹುವಾವೇ ನೋವಾ 7 ಸ್ಮಾರ್ಟ್‌ಫೋನ್ ಸರಣಿ!
ಚೀನಾದ ಟೆಕ್ ದೈತ್ಯ ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದಲೇ ಪ್ರಸಿದ್ಧಿಯನ್ನ ಪಡೆದಿದೆ. ಈಗಾಗಲೇ ಜಾಗತಿಕವಾಗಿ ಪ್ರಸಿದ್ಧಿಯನ್ನ ಪಡೆದುಕೊಮಡಿರುವ ಹುವಾವೇ ತನ್ನ ವಿಶೇಷ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳಿಗೆ ಹಸರುವಾಸಿಯಾಗಿದೆ. ಸದ್ಯ ಈಗಾಗಲೇ ಹಲವು ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಹುವಾವೆ ಇದೀಗ ತನ್ನ ನೋವಾ 7-ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲು ವೇದಿಕೆಯನ್ನ ಸಿದ್ದಪಡಿಸಿಕೊಳ್ತಿದೆ.

ಹೌದು
ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ಹುವಾವೇ ತನ್ನ ಹುವಾವೇ ನೋವಾ 7ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಲಭ್ಯ ಮಾಹಿತಿಯ ಪ್ರಕಾರ ಈ ಸ್ಮಾರ್ಟ್‌ಫೋನ್‌ಗಳು ಇದೇ ಏಪ್ರಿಲ್ 23 ರಂದು ಬಿಡುಗಡೆ ಮಾಡಲಿದೆ ಎಂದು ಖಚಿತಪಡಿಸಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಬಿಡುಗಡೆ ಕುರಿತು ಚೀನಾದ ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ ವೀಬೊದಲ್ಲಿ ಹುವಾವೇ ಘೋಷಣೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳ ಕುರಿತು ಕೆಲವು ವಿಷಯಗಳನ್ನ ಬಹಿರಂಗ ಪಡಿಸಿದ್ದು, ಅದು ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಇನ್ನು ಹುವಾವೇ ನೋವಾ 7 ಸ್ಮಾರ್ಟ್‌ಫೋನ್ ಹೊಸ ವಿನ್ಯಾಸದಲ್ಲಿ ಬರಲಿದ್ದು, ಯುವ ಜನತೆಯ ಆಶಯಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ ಎನ್ನಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ವಿಶೇಷವಾಗಿ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಹೊಸ ಮಾದರಿಯ ಫೀಚರ್ಸ್‌ಗಳನ್ನ ಅಳವಡಿಸಿರುವ ಸಾಧ್ಯತೆ ಇದೆ. ಸದ್ಯ ಲಭ್ಯ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ಗಳು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆ ಇದೆ. ಅಲ್ಲದೆ ಇ ಫೋನ್‌ನ ಪೆರಿಸ್ಕೋಪ್ ಕ್ಯಾಮೆರಾ ಸೆಟಪ್ ಬಗ್ಗೆ ವರದಿಯಾಗಿದ್ದು, ಇದು 50x ಜೂಮ್ ವರೆಗೆ ನೀಡುತ್ತದೆ ಎಂದು ಹೇಳಲಾಗ್ತಿದೆ.

ಅಲ್ಲದೆ ನೋವಾ 7 ಸರಣಿಯ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಮಾಡ್ಯೂಲ್ ಲಂಬವಾಗಿ ಜೋಡಿಸಲಾದ ಕ್ಯಾಮೆರಾಗಳ ಮಾದರಿಯಲ್ಲಿ ಇರಲಿದೆ. ಇನ್ನು ನೋವಾ 7 ಸರಣಿಯಲ್ಲಿ ಹುವಾವೇ ನೋವಾ 7 SE, ನೋವಾ 7, ಮತ್ತು ನೋವಾ 7 ಪ್ರೊ ಸೇರಿವೆ ಎಂದು ಹೇಳಲಾಗ್ತಿದೆ. ಆದರೆ ಇದರ ಬಗ್ಗೆ ಟ್ವಿಟ್ಟರ್ ಪೋಸ್ಟ್‌ನಲ್ಲಿ ಯಾವುದೇ ಮಾಹಿತಿ ನೀಡಿಲ್ಲ. ಇನ್ನು ಮೊದಲೇ ಹೇಳಿದಂತೆ, ಹುವಾವೇ ಸಂಸ್ಥೆಯ ಮುಂಬರುವ ಸರಣಿಯು 5G ನೆಟ್‌ವರ್ಕ್ ಬೆಂಬಲವನ್ನು ಹೊಂದಿರುತ್ತದೆ ಎಂದು ಹಲವಾರು ವರದಿಗಳು ಹೇಳಿವೆ.

ಇದಲ್ಲದೆ ನೋವಾ 7 ಮತ್ತು ನೋವಾ 7 ಪ್ರೊ ಕ್ರಮವಾಗಿ ಕಿರಿನ್ 820SoC ಮತ್ತು ಕಿರಿನ್ 990 SoC ಪ್ರೊಸೆಸರ್ ಹೊಂದಿರಲಿದೆ ಎಂದು ಹೇಳಲಾಗಿದೆ. ಹಾಗೇಯೆ ನೋವಾ 7 ಮತ್ತು ನೋವಾ 7 ಪ್ರೊ ಎರಡೂ 40W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಹುವಾವೇ ನೋವಾ 7se ರೂಪಾಂತರವು 6.5-ಇಂಚಿನ ಹೋಲ್-ಪಂಚ್ ಡಿಸ್ಪ್ಲೇ ಮತ್ತು 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಈ ಫೋನ್ 22.5W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಊಹಿಸಲಾಗಿದೆ. ಸದ್ಯ ಚೀನಾದಲ್ಲಿ ಬಿಡುಗಡೆ ಆಗುವ ದಿನಾಂಕ ಮಾತ್ರ ಬಹಿರಂಗವಾಗಿದ್ದು,ಭಾರತದಲ್ಲಿ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಬ್ಯವಾಗಿಲ್ಲ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470