ಹುವಾವೇ ನೋವಾ 7 ಸರಣಿಯಲ್ಲಿ ಮೂರು ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ!
ಚೀನಾದ ಟೆಕ್ ದೈತ್ಯ ಹುವಾವೇ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ದಿಯನ್ನುಪಡೆದುಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳ ಪರಿಚಯಿಸಿ ಜಾಗತಿಕ ಮಾರುಕಟ್ಟೆಯಲ್ಲಿ ನೆಚ್ಚಿನ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿದೆ. ಪ್ರತಿ ಭಾರಿಯು ಹೊಸತನದ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವಲ್ಲಿ ಸೈ ಎನಿಸಿಕೊಂಡಿರುವ ಹುವಾವೇ ಇದೀಗ ತನ್ನ ನೋವಾ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ.

ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ನೋವಾ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಸದ್ಯ ಇದೀಗ ಹುವಾವೇ ನೋವಾ 7 ಪ್ರೊ 5G, ಹುವಾವೇ ನೋವಾ 7 SE 5G, ಮತ್ತು ಹುವಾವೇ ನೋವಾ 7 5G ಫೋನ್‌ಗಳನ್ನ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿವೆ. ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳಲ್ಲಿ ಹುವಾವೇ ನೋವಾ 7 SE 5G ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯನ್ನ ಹೊಂದಿರಲಿದೆ. ಅಲ್ಲದೆ ನೋವಾ 7 ಪ್ರೊ ಸ್ಮಾರ್ಟ್‌ಫೋನ್ ಪ್ರೀಮಿಯಂ ಫೀಚರ್ಸ್‌ಗಳನ್ನ ಹೊಂದಿದೆ. ಇನ್ನು ಈ ಮೂರು ಹೊಸ ಫೋನ್‌ಗಳು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿವೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಹುವಾವೇ ನೋವಾ 7 ಪ್ರೊ 5G ಡಿಸ್‌ಪ್ಲೇ
ಈ ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.57 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಫುಲ್ ಎಚ್‌ಡಿ ಡಿಸ್‌ಪ್ಲೇ ಆಗಿದ್ದು, ಬಾಗಿದ ವಿನ್ಯಾಸದ ಒಎಲ್‌ಇಡಿ ಡಿಸ್‌ಪ್ಲೇ ಇದಾಗಿದೆ. ಇನ್ನು ಈ ಡಿಸ್‌ಪ್ಲೇಯು 89.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನ ಹೊಂದಿದೆ. ಅಲ್ಲದೆ 19.5: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇಯು 392 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೇಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಹುವಾವೇ ನೋವಾ 7 ಪ್ರೊ 5G ಸ್ಮಾರ್ಟ್‌ಫೋನ್ ಹಿಸಿಲಿಕಾನ್ ಕಿರಿನ್ 985 5G ಪ್ರೊಸೆಸರ್ ವೇಗವನ್ನ ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 256GB ಆಂತರಿಕ ಸಾಮರ್ಥ್ಯವನ್ನ ಹೊಂದಿದೆ. ಇನ್ನು ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡಲಾಗಿಲ್ಲ.

ಕ್ಯಾಮೆರಾ ವಿನ್ಯಾಸ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ f/ 1.8 ಲೆನ್ಸ್ ಹೊಂದಿದೆ, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಹೊಂದಿದೆ. ಇನ್ನು ಈ ಟೆಲಿಫೋಟೋ ಶೂಟರ್ 5x ಆಪ್ಟಿಕಲ್ ಜೂಮ್, 10x ಹೈಬ್ರಿಡ್ ಜೂಮ್ ಮತ್ತು 50x ಡಿಜಿಟಲ್ ಜೂಮ್ ಅನ್ನು ಹೊಂದಿದೆ. ಇನ್ನು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನ ನೀಡಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಹೊಂದಿರುವ ಡ್ಯುಯೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಹುವಾವೇ ನೋವಾ 7 ಪ್ರೊ 5G ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 40W ಸೂಪರ್‌ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈ-ಫೈ , ಬ್ಲೂಟೂತ್ ವಿ 5.1, NFC, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಹುವಾವೇ ನೋವಾ 7 5G ಡಿಸ್‌ಪ್ಲೇ
ಇನ್ನು ಹುವಾವೇ ನೋವಾ 7 5G ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.53-ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಫುಲ್ ಎಚ್‌ಡಿ ಪ್ಲಸ್ ಒಎಲ್ಇಡಿ ಡಿಸ್‌ಪ್ಲೇ ಇದಾಗಿದೆ. ಅಲ್ಲದೆ ಈ ಡಿಸ್‌ಪ್ಲೇಯು 86.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ ಡಿಸ್‌ಪ್ಲೆ 403 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಹಿಸಿಲಿಕಾನ್ ಕಿರಿನ್ 985 5G ಪ್ರೊಸೆಸರ್ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್ 10. ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಪ್ರೊಸೆಸರ್ ಸಿಪಿಯು ಆಕ್ಟಾ-ಕೋರ್ ಅನ್ನು ಒಳಗೊಂಡಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB, 8GBRAM ಮತ್ತು 256GB ಆಂತರಿಕ ಸಾಮರ್ಥ್ಯವನ್ನ ಹೊಂದಿದೆ. ಇನ್ನು ಮೆಮೊರಿಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡಲಾಗಿಲ್ಲ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ 3x ಆಪ್ಟಿಕಲ್ ಜೂಮ್, 5x ಹೈಬ್ರಿಡ್ ಜೂಮ್ ಮತ್ತು 20x ಡಿಜಿಟಲ್ ಜೂಮ್ ಅನ್ನು ಬೆಂಬಲಿಸುತ್ತದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಆಂಗಲ್, ನಾಲ್ಕನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನ ಹೊಂದಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಹುವಾವೇ ನೋವಾ 7 5G ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 40W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್,ವೈಫೈ, ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಇನ್‌ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಹುವಾವೇ ನೋವಾ 7SE 5G
ಇನ್ನು ಹುವಾವೇ ನೋವಾ 7 SE 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5-ಇಂಚಿನ ಪೂರ್ಣ-ಎಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಹೈಸಿಲಿಕಾನ್ ಕಿರಿನ್ 820 5G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 8GB RAM ಮತ್ತು 256GB ಆಂತರಿಕ ಸಂಗ್ರಹಣ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 40W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಹುವಾವೇ ನೋವಾ 7 ಪ್ರೊ 5G ಸ್ಮಾರ್ಟ್‌ಫೋನ್ 8GB RAM + 128GB ಮಾದರಿಗೆ CNY 3,699 (ಸುಮಾರು 39,600 ರೂ,) ಮತ್ತು 8GB RAM + 256GB ಮಾದರಿಗೆ CNY 4,099 (ಸುಮಾರು ರೂ. 43,900) ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡ್ನೈಟ್ ಬ್ಲ್ಯಾಕ್, ಸಿಲ್ವರ್, ಫಾರೆಸ್ಟ್ ಗ್ರೀನ್, ಮಿಡ್ಸಮ್ಮರ್ ಪರ್ಪಲ್ ಮತ್ತು ಹನಿ ರೆಡ್ ಕಲರ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಇನ್ನು ಹುವಾವೇ ನೋವಾ 7 5G, 8GB RAM + 128GB ಮಾದರಿಗೆ CNY 2,999 (ಸರಿಸುಮಾರು ರೂ. 32,100) ಮತ್ತು 8GB RAM + 256GB ಆಯ್ಕೆಗೆ CNY 3,399 (ಸರಿಸುಮಾರು ರೂ. 36,400) ಬೆಲೆಯಿದೆ. ಇದಲ್ಲದೆ ಹುವಾವೇ ನೋವಾ 7 SE 5G ಸ್ಮಾರ್ಟ್‌ಫೋನ್ 8GB RAM + 128GB ಆಯ್ಕೆಗೆ CNY 2,399 (ಸರಿಸುಮಾರು 25,700 ರೂ.) ಬೆಲೆಯನ್ನ ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಮಿಡ್ನೈಟ್ ಬ್ಲ್ಯಾಕ್, ಸಿಲ್ವರ್, ಫಾರೆಸ್ಟ್ ಗ್ರೀನ್ ಮತ್ತು ಮಿಡ್ಸಮ್ಮರ್ ಪರ್ಪಲ್ ಬಣ್ಣಗಳಲ್ಲಿ ಮಾತ್ರ ಬರುತ್ತದೆ. ಇನ್ನು ಹುವಾವೇ ನೋವಾ 7-ಸರಣಿ ಫೋನ್‌ಗಳು ಏಪ್ರಿಲ್ 28 ರಂದು ಚೀನಾದಲ್ಲಿ ಮಾರಾಟವಾಗಲಿವೆ.


Click it and Unblock the Notifications








