ಹುವಾವೇ ನೋವಾ 7i ಸ್ಮಾರ್ಟ್‌ಫೋನ್ ಬಿಡುಗಡೆ!
ಜಾಗತಿಕವಾಗಿ ಸ್ಮಾರ್ಟ್‌ಫೋನ್ ಮಾರುಕಟ್ಟೆ ಬಹಳ ವಿಸ್ತಾರವಾಗಿ ಬೆಳೆದು ನಿಂತಿದೆ. ತಂತ್ರಜ್ಞಾನ ಮುಂದುವರೆದಂತೆ ಎಲ್ಲರ ಕೈನಲ್ಲೂ ಸ್ಮಾರ್ಟ್‌ಫೋನ್‌ಗಳು ರಿಂಗಣಿಸುತ್ತಿದ್ದು ವೈವಿಧ್ಯ ಬಗೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಆಕರ್ಷಕ ಫಿಚರ್ಸ್‌ಗಳುಳ್ಳ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವ ಮೂಲಕ ಸ್ಮಾರ್ಟ್‌ಫೋನ್ ಕಂಪೆನಿಗಳು ತಮ್ಮದೇ ಆದ ಗ್ರಾಹಕ ವರ್ಗವನ್ನು ಸೃಷ್ಟಿಸಿಕೊಂಡಿವೆ. ಇದೀಗ ಈಗಾಗ್ಲೆ ಸ್ಮಾರ್ಟ್‌ಫೋನ್ ವಲಯದಲ್ಲಿ ಜನಪ್ರಿಯತೆ ಪಡೆದುಕೊಂಡಿರುವ ಹುವಾವೇ ಸ್ಮಾರ್ಟ್‌ಫೊನ್ ಕಂಪೆನಿ ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು ಚೀನಾದ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಹುವಾವೇ ಕಂಪೆನಿ ತನ್ನ ಹೊಸ ಹುವಾವೇ ನೋವಾ 7i ಸ್ಮಾರ್ಟ್‌ಫೋನ್ ಅನ್ನು ಮಲೇಷ್ಯಾದಲ್ಲಿ ಲಾಂಚ್ ಮಾಡಲಾಗಿದೆ. ಈ ಹೊಸ ಸ್ಮಾರ್ಟ್‌ಫೋನ್ 48 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಪಂಚ್-ಹೋಲ್ ಡಿಸ್ಪ್ಲೇ ವಿನ್ಯಾಸವನ್ನು ಒಳಗೊಂಡಿದೆ. ಅಲ್ಲದೆ ಇದು ಚೀನಾದಲ್ಲಿ ಬಿಡುಗಡೆಯಾಗಿದ್ದ ಹುವಾವೇ ನೋವಾ 6SE ಸ್ಮಾರ್ಟ್‌ಫೋನ್‌ನ ರೀ ಬ್ರಾಂಡೆಡ್ ಆವೃತ್ತಿಯಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ಮಾದರಿ
ಹುವಾವೇ ನೋವಾ 7i ಸ್ಮಾರ್ಟ್‌ಫೋನ್ 1080 x 2310 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 398ppi ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ಅಲ್ಲದೆ ಡಿಸ್‌ಪ್ಲೇ ಹಾಗೂ ಬಾಡಿ 83.5% ರೆಶೀಯೋ ಹೊಂದಿದೆ. ಇದಲ್ಲದೆ LTPS IPS ಎಲ್‌ಸಿಡಿ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್, ಅನ್ನು ಒಳಗೊಂಡಿದ್ದು, ಸ್ಕ್ರೀನ್ 16m ಕಲರ್‌ಗಳನ್ನ ಒಳಗೊಂಡಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಹಿಸಿಲಿಕಾನ್ ಕಿರಿನ್ 810 ಆಕ್ಟಾ-ಕೋರ್ SOC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದ್ದು, ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ 256GB ವರೆಗೆ ವಿಸ್ತರಿಸಬಹುದಾಗಿದೆ. ಇದು ನ್ಯಾನೊ ಮೆಮೊರಿ ಕಾರ್ಡ್ ಸ್ಲಾಟ್ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ
ಹುವಾವೇ ನೋವಾ 7i ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮೊದಲನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ F/ 1.8, 26 mm ವೈಡ್ ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8ಮೆಗಾ ಪಿಕ್ಸೆಲ್ F/ 2.4, ಅಲ್ಟ್ರಾವೈಡ್ ಲೆನ್ಸ್ ಅನ್ನು ಹೊಂದಿದ್ದು, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್ 27mm ಮ್ಯಾಕ್ರೋ,ಲೆನ್ಸ್ ಅನ್ನು ಒಳಗೊಂಡಿದ್ದು, ಎಲ್ಇಡಿ ಫ್ಲ್ಯಾಶ್, ಎಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16-ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,200-mAh ಬ್ಯಾಟರಿ ಪ್ಯಾಕ್‌ಅಪ್ಪ ಅನ್ನು ಹೊಂದಿದ್ದು, 40W ವೇಗದ ಚಾರ್ಜಿಂಗ್ ಬೆಂಬಲವನ್ನು ನೀಡಲಿದೆ. ಇದಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE,ವೈ-ಫೈ ಡ್ಯುಯಲ್-ಬ್ಯಾಂಡ್, ಬ್ಲೂಟೂತ್ 5.0, ಡ್ಯುಯಲ್-ಫ್ರೀಕ್ವೆನ್ಸಿ ಜಿಪಿಎಸ್, 3.5mm ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್, ಆಕ್ಸಿಲರೊಮೀಟರ್, ಸೆನ್ಸಾರ್‌ಗಳನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ ಸದ್ಯ ಮಲೆಷ್ಯಾದಲ್ಲಿ ಬಿಡುಗಡೆಯಾಗಿದ್ದು MYR 1,099 (ಅಂದಾಜು 19,000 ರೂ) ಬೆಲೆಯನ್ನ ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಮಿಡ್ನೈಟ್ ಬ್ಲ್ಯಾಕ್, ಕ್ರಷ್ ಗ್ರೀನ್ ಮತ್ತು ಪಿಂಕ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸ ಬಹುದಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಗೆ ಯಾವಾಗ ಎಂಟ್ರಿ ಕೊಡಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯನ್ನ ಕಂಪೆನಿ ಇನ್ನು ಬಿಟ್ಟುಕೊಟ್ಟಿಲ್ಲ ಎಂದು ಹೇಳಲಾಗ್ತಿದೆ.


Click it and Unblock the Notifications








