Home
ಸುದ್ದಿಜಾಲ

ಹುವಾವೇ ನೋವಾ 9 SE ಸ್ಮಾರ್ಟ್‌ಫೋನ್‌ ಲಾಂಚ್‌! 66W ಫಾಸ್ಟ್‌ ಚಾರ್ಜಿಂಗ್‌ ವಿಶೇಷ!

ಜಾಗತಿಕ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹುವಾವೇ ಕಂಪೆನಿ ತನ್ನ ಆಕರ್ಷಕ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಆಪಲ್‌ ಐಫೋನ್‌ಗಳಿಗೆ ಪೈಪೋಟಿ ನೀಡುವ ಅನೇಕ ಫೋನ್‌ಗಳನ್ನು ಹುವಾವೇ ಕಂಪೆನಿ ಪರಿಚಯಿಸುತ್ತಲೇ ಬಂದಿದೆ. ಸದ್ಯ ಇದೀಗ ತನ್ನ ಹೊಸ ಹುವಾವೇ ನೋವಾ 9 SE ಫೋನ್‌ ಅನ್ನು ಲಾಂಚ್‌ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಹೊಂದಿದ್ದು, 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಹುವಾವೇ

ಹೌದು, ಹುವಾವೇ ಕಂಪೆನಿ ಹೊಸ ಹುವಾವೇ ನೋವಾ 9 SE ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಫೋನ್‌ ಕ್ರಿಸ್ಟಲ್ ಬ್ಲೂ, ಮಿಡ್‌ನೈಟ್ ಬ್ಲಾಕ್ ಮತ್ತು ಪರ್ಲ್ ವೈಟ್ ಎಂಬ ಮೂರು ಬಣ್ಣಗಳ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾ ರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಹುವಾವೇ ನೋವಾ 9 SE ಸ್ಮಾರ್ಟ್‌ಫೋನ್‌ 1,080x2,388 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಹುವಾವೇ ಫೂಲ್‌ ವ್ಯೂ TFT LCD ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್, 270Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 16.7 ಮಿಲಿಯನ್ ಬಣ್ಣಗಳನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಹುವಾವೇ ನೋವಾ 9 SE ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ EMUI 12 ಔಟ್-ಆಫ್-ದಿ-ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ f/1.9 ಲೆನ್ಸ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮೈರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಹುವಾವೇ ನೋವಾ 9 SE ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ಹುವಾವೇ ಸೂಪರ್‌ ಚಾರ್ಜ್‌ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5, USB ಟೈಪ್ C ಯನ್ನು ಬೆಂಬಲಿಸಲಿದೆ. ಇದಲ್ಲದೆ ಗ್ರಾವಿಟಿ ಸೆನ್ಸಾರ್, ಕಂಪಾಸ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, GPS, AGPS, ಗ್ಲೋನಾಸ್ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಮೆಲೆಷ್ಯಾದಲ್ಲಿ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ MYR 1,099 (ಅಂದಾಜು 20,000ರೂ.) ಆಗಿದೆ. ಈ ಸ್ಮಾರ್ಟ್‌ಫೋನ್ ಕ್ರಿಸ್ಟಲ್ ಬ್ಲೂ, ಮಿಡ್‌ನೈಟ್ ಬ್ಲಾಕ್ ಮತ್ತು ಪರ್ಲ್ ವೈಟ್ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ನೀಡುತ್ತಿದೆ.

Best Mobiles in India

English summary
Huawei Nova 9 SE With 66W Fast Charging Support Launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+