ಹುವಾವೇ ನೋವಾ Y61 ಸ್ಮಾರ್ಟ್‌ಫೋನ್‌ ಬಿಡುಗಡೆ! ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

|

ಜಾಗತಿಕ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹುವಾವೇ ಕಂಪೆನಿ ಜನಪ್ರಿಯ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಸೆಳೆದಿದೆ. ಸದ್ಯ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಹುವಾವೇ ನೋವಾ Y61 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ CPU ಒಳಗೊಂಡಿರುವ ಇನ್ನೂ ಹೆಸರಿಸದ ಪ್ರೊಸೆಸರ್‌ ಅನ್ನು ಒಳಗೊಂಡಿದೆ.

ಹುವಾವೇ

ಹೌದು, ಹುವಾವೇ ಕಂಪೆನಿ ಹೊಸ ಹುವಾವೇ ನೋವಾ Y61 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 22.5W ವೇಗದ ವೈರ್ಡ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಹುವಾವೇ ನೋವಾ Y61 ಸ್ಮಾರ್ಟ್‌ಫೋನ್‌ 6.52 ಇಂಚಿನ ಹೆಚ್‌ಡಿ ಪ್ಲಸ್‌ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 20.9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಹುವಾವೇ ನೋವಾ Y61 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ CPU ಒಳಗೊಂಡಿರುವ ಇನ್ನೂ ಹೆಸರಿಸದ ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು EMUI 12 ಸಾಫ್ಟ್‌ವೇರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ Mali-G57 ಸಪೋರ್ಟ್‌ ಪಡೆದಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೆಜ್‌ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಹುವಾವೇ ನೋವಾ Y61 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಹುವಾವೇ ನೋವಾ Y61 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 22.5W ವೇಗದ ವೈರ್ಡ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಸಿಂಗಲ್-ಬ್ಯಾಂಡ್ ವೈಫೈ, 4G, ಬ್ಲೂಟೂತ್ 5.1 ಮತ್ತು GNSS ಅನ್ನು ನೀಡುತ್ತವೆ. ಈ ಫೋನ್‌ 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹುವಾವೇ ನೋವಾ Y61 ಸ್ಮಾರ್ಟ್‌ಫೋನ್‌ ಬೆಲೆ ವಿವರ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಸಪೈರ್‌ ಬ್ಲೂ, ಮಿಂಟ್ ಗ್ರೀನ್ ಮತ್ತು ಮಿಡ್ನೈಟ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಇದು ಏಷ್ಯಾ ಪೆಸಿಫಿಕ್ ಪ್ರದೇಶದಲ್ಲಿ 6GB RAM ಮತ್ತು 64GB ಸಂಗ್ರಹದೊಂದಿಗೆ ಬರುತ್ತದೆ. ಆದರೆ, ಪ್ರಪಂಚದ ಉಳಿದ ಭಾಗಗಳಲ್ಲಿ, ಇದು 4GB RAM ಮತ್ತು 64GB ಸಂಗ್ರಹಣೆಯನ್ನು ಹೊಂದಿದೆ. ಅಲ್ಲದೆ, ಕೆಲವು ಪ್ರದೇಶಗಳಲ್ಲಿ, ಇದು ಡ್ಯುಯಲ್ ಸಿಮ್‌ನೊಂದಿಗೆ ಬರುತ್ತದೆ. ಆದರೆ ಇತರರಲ್ಲಿ ಸಿಂಗಲ್ ಸಿಮ್‌ಗೆ ಸೀಮಿತವಾಗಿದೆ. NFC ಕೂಡ ಕೆಲವು ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ.

Best Mobiles in India

English summary
Huawei Nova Y61 With 22.5W Charging Launched: Specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X