ಮಾರುಕಟ್ಟೆಗೆ 7,000mAh ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಎಂಟ್ರಿ! ಯಾವುದು ಈ ಫೋನ್!
ಜಾಗತಿಕ ಮಾರುಕಟ್ಟೆಯಲ್ಲಿ ಹುವಾವೇ ನೋವಾ Y91 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡಿಯಾಟೆಕ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ.
ಹೌದು, ಹುವಾವೇ ನೋವಾ Y91 ಸ್ಮಾರ್ಟ್‌ಫೋನ್ ಸೈಲೆಂಟ್ ಆಗಿ ಎಂಟ್ರಿ ನೀಡಿದೆ. ಜೊತೆಗೆ 7,000mAh ಬ್ಯಾಟರಿಯನ್ನು ಹೊಂದಿದ್ದು, ಇದು 22.5W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹುವಾವೇ ನೋವಾ Y91 ಡಿಸ್‌ಪ್ಲೇ ರಚನೆ
ಹುವಾವೇ ನೋವಾ Y91 ಸ್ಮಾರ್ಟ್‌ಫೋನ್ 6.95 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 2376 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 270Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ನೀಡಲಿದೆ. ಜೊತೆಗೆ ಹುವಾವೇ ನೋವಾ Y91 ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.
ಹುವಾವೇ ನೋವಾ Y91 ಪ್ರೊಸೆಸರ್ ಯಾವುದು?
ಹುವಾವೇ ನೋವಾ Y91 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು EMU 13 ನೊಂದಿಗೆ ಪ್ರೀ ಲೋಡ್ ಮಾಡಲ್ಪಟ್ಟಿದೆ. ಹಾಗೆಯೇ 8GB RAM ಮತ್ತು 128GB ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಹುವಾವೇ ನೋವಾ Y91 ಕ್ಯಾಮೆರಾ ಸೆಟ್‌ಅಪ್
ಹುವಾವೇ ನೋವಾ Y91 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಎಲ್‌ಇಡಿ ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಹುವಾವೇ ನೋವಾ Y91 ಬ್ಯಾಟರಿ ಬ್ಯಾಕ್‌ಅಪ್
ಹುವಾವೇ ನೋವಾ Y91 ಸ್ಮಾರ್ಟ್‌ಫೋನ್ 7,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 22.5W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, 4G VoLTE, Wi-Fi 801.ac, ಬ್ಲೂಟೂತ್ 5.0, GPS, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಮತ್ತು USB-C ಪೋರ್ಟ್ ಅನ್ನು ಒಳಗೊಂಡಿದೆ.
ಹುವಾವೇ ನೋವಾ Y91 ಬೆಲೆ ಮತ್ತು ಲಭ್ಯತೆ
ಹುವಾವೇ ನೋವಾ Y91 ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆಯ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ. ಇದನ್ನು ಸ್ಟಾರಿ ಬ್ಲ್ಯಾಕ್ ಮತ್ತು ಮೂನ್‌ಲೈಟ್ ಸಿಲ್ವರ್‌ನಂತಹ ಕಾನ್ಫಿಗರೇಶನ್‌ಗಳಲ್ಲಿ ಮಾರಾಟ ಮಾಡಲಾಗುತ್ತದೆ.
ಇದಲ್ಲದೆ ಹುವಾವೇ ಕಂಪೆನಿ ಇತ್ತೀಚಿಗೆ ಹೊಸ ಹುವಾವೇ ನೋವಾ 10 SE ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಒಳಗೊಂಡಿದೆ.ಹುವಾವೇ ಕಂಪನಿ ಹೊಸ ಹುವಾವೇ ನೋವಾ 10 SE ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.


Click it and Unblock the Notifications








