Home
ಸುದ್ದಿಜಾಲ

ಹುವಾವೇ P40 ಲೈಟ್ 5G ಸ್ಮಾರ್ಟ್‌ಫೋನ್‌ ಬಿಡುಗಡೆ!

ಚೀನಾದ ಟೆಕ್‌ ದೈತ್ಯ ಹುವಾವೇ ಕಂಪೆನಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿರುವ ಹುವಾವೇ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ಇನ್ನು ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸಂಚಲನ ಸೃಷ್ಟಿಸಿರುವ ಹುವಾವೇ ಈ ಬಾರಿ ಹುವಾವೇ P40 ಲೈಟ್ 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಬಿಡುಗಡೆಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಹುವಾವೇ ಇದೀಗ ಅಧಿಕೃತವಾಗಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ.

ಹುವಾವೇ

ಹೌದು, ಹುವಾವೇ ಕಂಪೆನಿ ತನ್ನ ಬಹು ನಿರೀಕ್ಷಿತ ಹುವಾವೇ P40 ಶ್ರೇಣಿಯ ಹುವಾವೇ P40 ಲೈಟ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಯುರೋಪ್‌ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಈ ವರ್ಷದ ಆರಂಭದಲ್ಲಿ ಬಿಡುಗಡೆ ಮಾಡಿದ್ದ ಆಪ್ಡೇಟ್‌ ಆವೃತ್ತಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸುಧಾರಿತ ಚಿಪ್‌ಸೆಟ್, ಅಪ್‌ಗ್ರೇಡ್ ಮಾಡಲಾದ ಪ್ರಾಥಮಿಕ ಕ್ಯಾಮೆರಾ ಮತ್ತು 5G ಬೇಸ್‌ಬ್ಯಾಂಡ್‌ಗಳಿಗೆ ಬೆಂಬಲ ಸೇರಿದಂತೆ ಹೊಸ ಮಾದರಿಯ ಆಪ್ಡೇಟ್‌ಗಳನ್ನ ಹೊಂದಿದೆ. ಹಾಗಾದರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಹುವಾವೇ P40 ಲೈಟ್ 5G ಸ್ಮಾರ್ಟ್‌ಫೋನ್‌ 1080x2400 ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು LTPS LCD ಪ್ಯಾನಲ್ ವಿನ್ಯಾಸವನ್ನ ಹೊಂದಿದ್ದು ಎಚ್ಡಿಆರ್ 10 ಅನ್ನು ಬೆಂಬಲಿಸಲಿದೆ. ಅಲ್ಲದೆ ಈ ಡಿಸ್‌ಪ್ಲೇಯು ಫುಲ್‌ಹೆಚ್‌ಡಿ ಡಿಸ್‌ಪ್ಲೆ ಅಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಹಿಸಿಲಿಕಾನ್ ಕಿರಿನ್ 820 5G ಆಕ್ಟಾ-ಕೋರ್ ಪ್ರೊಸೆಸರ್‌ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟಫೋನ್‌ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಹುವಾವೇ P40 ಲೈಟ್‌ 5G ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಜೊತೆಗೆ ಕ್ವಾಡ್ ಲೆನ್ಸ್ ಸೆಟ್‌ಅಪ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4000-mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 40W ಫಾಸ್ಟ್ ಚಾರ್ಜಿಂಗ್‌ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್, ಅಕ್ಸೆಲೆರೊಮೀಟರ್, ಗೈರೊ,ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹುವಾವೇ p40 ಲೈಟ್‌ ಸ್ಮಾರ್ಟ್‌ಫೋನ್‌ ಯುರೋ 399 ಬೆಲೆಯನ್ನ ಹೊಂದಿದ್ದು, ಕ್ರಷ್ ಗ್ರೀನ್, ಸ್ಪೇಸ್ ಸಿಲ್ವರ್ ಮತ್ತು ಮಿಡ್ನೈಟ್ ಬ್ಲ್ಯಾಕ್ ನಂತಹ ಮೂರು ಬಣ್ಣಗಳಲ್ಲಿ ಇದು ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಮೊದಲ ಮಾರಾಟವು ಮೇ 29 ರಿಂದ ಪ್ರಾರಂಭವಾಗಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಆಗುವುದರ ಬಗ್ಗೆ ಯಾವುದೇ ಮಾಹಿತಿಯನ್ನ ಹುವಾವೇ ಕಂಪೆನಿ ಬಿಟ್ಟು ಕೊಟ್ಟಿಲ್ಲ.

Best Mobiles in India

English summary
huawei has announced the launch of a new phone, the P40 Lite 5G.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+