ಹುವಾವೇ P40 ಮತ್ತು P40 ಪ್ರೊ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಫೀಚರ್ಸ್‌ ಬಹಿರಂಗ!

|

ಟೆಕ್‌ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿಯೇ ಇದೆ. ಪ್ರತಿನಿತ್ಯವೂ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಬಿಡುಗಡೆ ಆಗುತ್ತಲೇ ಇರುತ್ತೆ. ಈಗಾಗ್ಲೆ ಹಲವು ಕಂಪೆನಿಗಳು ತಮ್ಮ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿವೆ. ತಮ್ಮ ಆಕರ್ಷಕ ಫೀಚರ್ಸ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಮನಸ್ಸನ್ನು ಗೆದ್ದಿವೆ. ಇವುಗಳಲ್ಲಿ ಹುವಾವೇ ಕಂಪೆನಿ ಕೂಡ ಒಂದಾಗಿದ್ದು, ತನ್ನ ವಿಶೇಷ ಶೈಲಿಯ ಸ್ಮಾರ್ಟ್‌ಫೋನ್‌ಗಳಿಂದ ಜಾಗತಿಕವಾಗಿ ಪ್ರಸಿದ್ಧಿಯನ್ನು ಪಡೆದುಕೊಂಡಿವೆ. ಹಲವು ಸ್ಮಾರ್ಟ್‌ಫೋನ್‌ಗಳ ಮೂಲಕ ಸಂಚಲನ ಸೃಷ್ಟಿಸಿರುವ ಹುವಾವೇ ಇದೀಗ ತನ್ನ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುವುದಕ್ಕೆ ವೇದಿಕೆ ಸಿದ್ದತೆ ನಡೆಸಿದೆ.

ಹೌದು

ಹೌದು, ಚೀನಾ ಮೂಲದ ಟೆಕ್‌ ದಿಗ್ಗಜ ಹುವಾವೇ ತನ್ನ ಹೊಸ ಆವೃತ್ತಿಯ ಹುವಾವೇ P40 ಮತ್ತು P40 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಇದೇ ಮಾರ್ಚ್ 26 ರಂದು ಬಿಡುಗಡೆ ಮಾಡಲು ಸಜ್ಜಾಗಿದೆ. ಈಗಾಗ್ಲೆ ಹಲವು ವಿಶೇಷತೆಗಳಿಂದ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಆಗಿರುವ ಹುವಾವೇ ಪ್ರತಿ ಭಾರಿಯು ಹೊಸತನವನ್ನು ಪರಿಚಯಿಸುತ್ತಲೇ ಬಂದಿದೆ. ಹೀಗಾಗಿ ಹೊಸ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಮೇಲೂ ಗ್ರಾಹಕರ ನಿರೀಕ್ಷೆ ಹೆಚ್ಚಾಗಿದೆ. ಸದ್ಯ ಇದೀಗ ಈ ಸ್ಮಾರ್ಟ್‌ಫೋನ್‌ ಬ್ಯಾಟರಿ ಸಾಮರ್ಥ್ಯ ಮತ್ತು ಕ್ಯಾಮೆರಾ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದು ಆನ್‌ಲೈನ್‌ನಲ್ಲಿ ಲೀಕ್‌ ಆಗಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಲೀಕ್‌ ಮಾಹಿತಿ ಪ್ರಕಾರ ಹುವಾವೇ P40 ಪ್ರೊ 6.58-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಕಿರಿನ್ 990 5G ಪ್ರೊಸೆಸರ್ ವೇಗವನ್ನು ಹೊಂದಿದೆ. ಇನ್ನು ಹುವಾವೇ P40 ಸ್ಮಾರ್ಟ್‌ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದೆ. ಹುವಾವೇ P40 ಪ್ರೊ 5G ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 40 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ ಟೈಮ್ ಆಫ್ ಫ್ಲೈಟ್ ಸೆನ್ಸಾರ್‌ ಹೊಂದಿರುವ ಲೈಕಾ ಅಲ್ಟ್ರಾ ವಿಷನ್ ಕ್ವಾಡ್ ಕ್ಯಾಮೆರಾ ಸೆಟಪ್‌ಅನ್ನು ಹೊಂದಿದೆ.

ಹುವಾವೇ

ಇದಲ್ಲದೆ ಹುವಾವೇ P40 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನುಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಲೈಕಾ ಅಲ್ಟ್ರಾ ವಿಷನ್‌ಸೆನ್ಸಾರ್‌ ಹೊಂದಿದೆ. ಜೊತೆಗೆ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ವನ್ನ ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳ ಕ್ಯಾಮೆರಾ ಫೀಚರ್ಸ್‌ ನೋಡುವುದಾದರೆ 30 ಎಕ್ಸ್ ಡಿಜಿಟಲ್ ಜೂಮ್ ಮತ್ತು ಹುವಾವೇ ಎಕ್ಸ್‌ಡಿ ಫ್ಯೂಷನ್ ಎಂಜಿನ್‌ ಹಾಗೂ ಟೆಲಿಫೋಟೋ ಕ್ಯಾಮೆರಾ 50x ಸೂಪರ್‌ಸೆನ್ಸಿಂಗ್ ಜೂಮ್ ಅನ್ನು ಒಳಗೊಂಡಿದೆ.

ಹುವಾವೇ

ಇನ್ನು ಹುವಾವೇ P40 ಸ್ಮಾರ್ಟ್‌ಫೋನ್‌ 3,800mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 40W ವೇಗದ ವೈರ್ಡ್ ಚಾರ್ಜಿಂಗ್ ಮತ್ತು 27W ವೈರ್‌ಲೆಸ್ ಚಾರ್ಜಿಂಗ್‌ ಫೀಚರ್ಸ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಹುವಾವೇ P40 ಪ್ರೊ ಸ್ಮಾರ್ಟ್‌ಫೋನ್‌ 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದ, 40W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಅನ್ನು ಬೆಂಬಲಿಸಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಬ್ಯಾಟರಿ ಫೀಚರ್ಸ್‌ ಹಾಗೂ ಕ್ಯಾಮೆರಾ ಫೀಚರ್ಸ್‌ ಲೀಕ್‌ ಆಗಿದ್ದು, ಇನ್ನಷ್ಟು ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.

Most Read Articles
Best Mobiles in India

English summary
Huawei P40 Pro will come with a 4,200mAh battery and support for 40W wired fast charging. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X